ಹಟ್ಟಿಯಲ್ಲಿ ಮೈನಿಂಗ್ ಕಾಲೇಜ್ ಸ್ಥಾಪನೆಗೆ ಪ್ರಸ್ತಾವನೆ
ಅಭಿನಂದನಾ ಸಮಾರಂಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿಕೆ
Team Udayavani, Jul 15, 2019, 11:16 AM IST
ಲಿಂಗಸುಗೂರು: ನಾಗರಿಕ ಸಮಿತಿ ವತಿಯಿಂದ ಸಂಸದ ರಾಜಾ ಅಮರೇಶ್ವರ ನಾಯಕ, ಮಾಜಿ ಕೇಂದ್ರ ಸಚಿವ ಬಸವರಾಜ ಪಾಟೀಲ ಆನ್ವರಿ, ಮಾಜಿ ಶಾಸಕ ಮಾನಪ್ಪ ವಜ್ಜಲ್ ಅವರನ್ನು ಸನ್ಮಾನಿಸಲಾಯಿತು.
ಲಿಂಗಸುಗೂರ: ಚಿನ್ನದ ಗಣಿ ಇರುವ ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಮೈನಿಂಗ್ ಕಾಲೇಜು ಸ್ಥಾಪಿಸುವಂತೆ ಕೇಂದ್ರ ಭೂ ಮತ್ತು ಗಣಿ ಸಚಿವರಿಗೆ ಮನವಿ ಸಲ್ಲಿಸಿದ್ದಾಗಿ ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು.
ಪಟ್ಟಣದಲ್ಲಿ ರವಿವಾರ ನಾಗರಿಕ ಸಮಿತಿಯಿಂದ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ರಾಯಚೂರು ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಸಲ್ಲಿಸಿದ್ದೇನೆ. ಕ್ಷೇತ್ರದ ವ್ಯಾಪ್ತಿಯಲ್ಲಿನ ಹಲವಾರು ಬೇಡಿಕೆಗಳ ಪಟ್ಟಿ ತಯಾರಿಸಿ ಆಯಾ ಸಚಿವರನ್ನು ಖುದ್ದು ಭೇಟಿಯಾಗಿ ಮನವಿ ಸಲ್ಲಿಸಿದ್ದೇನೆ. ಯಾದಗಿರಿಯಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕೈಗಾರಿಕೆ ಸ್ಥಾಪನೆ, ಈ ಭಾಗದ ಹೆದ್ದಾರಿಗಳ ಅಭಿವೃದ್ಧಿ ಜತೆಗೆ ರಿಂಗ್ ರೋಡ್ ನಿರ್ಮಾಣ, ನನೆಗುದಿಗೆ ಬಿದ್ದ ರೈಲ್ವೆ ಯೋಜನೆಗಳಿಗೆ ಚಾಲನೆ, ರಾಯಚೂರು- ಗಿಣಿಗೇರಾ, ಗದಗ-ವಾಡಿ ರೈಲ್ವೆ ಯೋಜನೆಗಳ ಭೂಸ್ವಾದೀನ ಪ್ರಕ್ರಿಯೆಗೆ ಆದಷ್ಟು ಬೇಗ ಚಾಲನೆ ನೀಡುವಂತೆ ರೈಲ್ವೆ ಸಚಿವರಿಗೆ ಪತ್ರ ನೀಡಲಾಗಿದೆ. ದೇಶ ಮೊದಲು ನಂತರ ಪಕ್ಷ ಎಂಬ ಮೋದಿಜಿಯವರ ಮಾತಿನಂತೆ ನನಗೆ ನನ್ನ ಕ್ಷೇತ್ರ ನಂತರ ನನ್ನ ಪಕ್ಷ ಎಂಬ ಮಾತಿನಂತೆ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆಯಾಗಿದೆ ಎಂದರು.
ರಾಜ್ಯದ ಸಮಸ್ಯೆಗಳ ಬಗ್ಗೆ ರಾಜ್ಯದ ಎಲ್ಲ ಸಂಸದರು ಪ್ರತಿ ತಿಂಗಳು ಸಚಿವ ಡಿ.ವಿ.ಸದಾನಂದಗೌಡ ಅವರ ಮನೆಯಲ್ಲಿ ಸಭೆ ಸೇರಿ ಕೇಂದ್ರದಿಂದ ರಾಜ್ಯಕ್ಕೆ ಆಗಬೇಕಾದ ಕೆಲಸಗಳ ಬಗ್ಗೆ ಚರ್ಚಿಸುತ್ತಿದ್ದೇವೆ ಎಂದರು.
ಮಾಜಿ ಕೇಂದ್ರ ಸಚಿವ ಬಸವರಾಜ ಪಾಟೀಲ ಆನ್ವರಿ ಮಾತನಾಡಿ, ರಾಜ್ಯದಲ್ಲಿರುವ ಮೈತ್ರಿ ಸರ್ಕಾರ ಪತನಗೊಳಿಸುವ ಕೆಲಸಕ್ಕೆ ಬಿಜೆಪಿ ಕೈಹಾಕಿಲ್ಲ. ಮೈತ್ರಿ ಸರ್ಕಾರ ಪತನ ಗೊಳಿಸಿದರೆ ನನಗೆ ವಿರೋಧ ಪಕ್ಷದ ನಾಯಕ ಸ್ಥಾನ ಸಿಗುತ್ತೇ ಎಂಬ ಉದ್ದೇಶದಿಂದ ಸಿದ್ಧರಾಮಯ್ಯನವರೇ ಮೈತ್ರಿ ಸರ್ಕಾರದ ಪತನಗೊಳಿಸುವ ಹುನ್ನಾರ ನಡೆಸಿದ್ದಾರೆ ಎಂದರು.
ಶಾಸಕ ಮಾನಪ್ಪ ವಜ್ಜಲ್ ಮಾತನಾಡಿ, ರಾಜ್ಯದಲ್ಲಿ ಮೈತ್ರಿ ಸರ್ಕಾರ ಲೂಟಿ ಹೊಡೆದರೆ, ಕ್ಷೇತ್ರದಲ್ಲಿ ಶಾಸಕರು ಲೂಟಿ ಹೊಡೆಯುತ್ತಿದ್ದಾರೆ. ಕ್ಷೇತ್ರದಲ್ಲಿ ಬರಗಾಲವಿದ್ದರೂ ಅದಕ್ಕೆ ಸ್ಪಂದಿಸಬೇಕಾದ ಶಾಸಕರು ಪರ್ಸೆಂಟೇಜ್ ತೆಗೆದುಕೊಳ್ಳುವದರಲ್ಲಿ ನಿರತರಾಗಿದ್ದಾರೆ. ಹೊಸ ಅನುದಾನ ತಂದಿಲ್ಲ. ನನ್ನ ಅವಧಿಯಲ್ಲಿ ತಂದಿದ್ದ ಅನುದಾನದ ಕಾಮಗಾರಿಗಳಿಗೆ ಪೂಜೆ ಸಲ್ಲಿಸುವುದೇ ಶಾಸಕರ ಕೆಲಸವಾಗಿದೆ ಎಂದು ಟೀಕಿಸಿದರು.
ನಾಗರಿಕ ಸಮಿತಿ ಅಧ್ಯಕ್ಷ ಖಾದರ ಪಾಷಾ, ಮುಖಂಡರಾದ ಲಾಲ್ ಅಹ್ಮದ್‌ಸಾಬ್, ರಾಜಾ ಶ್ರೀನಿವಾಸ ನಾಯಕ, ರಾಜಾ ಸೋಮನಾಥ ನಾಯಕ, ಮಹಾದೇವಪ್ಪಗೌಡ ಮಸ್ಕಿ, ಹನುಮಂತಪ್ಪ ತೊಗರಿ, ಶ್ರೀನಿವಾಸರೆಡ್ಡಿ, ಶರಣಬಸಪ್ಪ ಗುಡದನಾಳ, ಮಹಾಂತಯ್ಯಸ್ವಾಮಿ, ಸಿದ್ದನಗೌಡ ಪೊಲೀಸ್‌ಪಾಟೀಲ, ಗಿರಿಮಲ್ಲನಗೌಡ ಕರಡಕಲ್, ವೀರನಗೌಡ ಲೆಕ್ಕಿಹಾಳ ಜಗನ್ನಾಥ ಕುಲಕರ್ಣಿ, ದಶರಥಸಿಂಗ್, ರೇಖಾಚಂದ್ ಮೆಹ್ತಾ, ಯಲ್ಲಪ್ಪ ಬಂಡರಗಲ್ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.