ಗೂಡ್ಸ್ ವಾಹನದಲ್ಲೇ ಪ್ರಯಾಣ
ಕ್ರೀಡಾಕೂಟಕ್ಕೆ ಸರಕು ವಾಹನದಲ್ಲೇ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋದ ಶಿಕ್ಷಕರು
Team Udayavani, Sep 4, 2019, 3:13 PM IST
ಲಿಂಗಸುಗೂರು: ತಾಲೂಕಿನ ಕಾಳಾಪುರ ಸರ್ಕಾರಿ ಶಾಲೆ ವಿದ್ಯಾರ್ಥಿಗಳನ್ನು ಸರಕು ಸಾಗಣೆ ವಾಹನದಲ್ಲಿ ಕರೆದುಕೊಂಡು ಹೋಗುತ್ತಿರುವುದು.
ಲಿಂಗಸುಗೂರು: ಸುಪ್ರೀಂಕೋರ್ಟ್ ಸರಕು ವಾಹನದಲ್ಲಿ ಜನರ ಸಾಗಾಟ ನಿಷೇಧಿಸಿ ಆದೇಶ ಹೊರಡಿಸಿದ್ದರೂ ತಾಲೂಕಿನ ಕೆಲ ಸರ್ಕಾರಿ ಶಾಲೆ ಶಿಕ್ಷಕರು ಮಂಗಳವಾರ ವಿದ್ಯಾರ್ಥಿಗಳನ್ನು ಸರಕು ವಾಹನದಲ್ಲಿ ಕುರಿಗಳಂತೆ ತುಂಬಿಕೊಂಡು ಕ್ರೀಡಾಕೂಟಕ್ಕೆ ಕರೆದುಕೊಂಡ ಹೋದ ದೃಶ್ಯ ಕಂಡುಬಂತು.
ತಾಲೂಕಿನ ಗೊರೇಬಾಳ ಗ್ರಾಮದಲ್ಲಿ ಮಂಗಳವಾರ ಪ್ರಾಥಮಿಕ ಶಾಲೆಗಳ ವಲಯ ಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿತ್ತು. ಈ ಕ್ರೀಡಾಕೂಟಕ್ಕೆ ಕಾಳಾಪುರ, ಗುಂತಗೋಳ, ದೇವರಭೂಪುರ ಸಿಆರ್‌ಸಿ ವ್ಯಾಪ್ತಿಯ 24 ಪ್ರಾಥಮಿಕ ಶಾಲೆಗಳ ಮಕ್ಕಳು ಭಾಗವಹಿಸಿದ್ದವು. ತಾಲೂಕಿನ ಕಾಳಾಪುರ ಗ್ರಾಮ ಸೇರಿ ಆರು ಶಾಲೆಗಳ ವಿದ್ಯಾರ್ಥಿಗಳನ್ನು ಸರಕು ಸಾಗಾಟ ವಾಹನದಲ್ಲಿ ಕರೆದುತಂದಿದ್ದಾರೆ. ಕಾಳಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಸರಕು ವಾಹನದಲ್ಲಿ ಒಬ್ಬರ ಮೇಲೆ ಒಬ್ಬರು ಬೀಳುವಂತೆ ನಿಂತು ಪ್ರಯಾಣಿಸಿದ್ದು ಕಂಡುಬಂತು. ಇದೇ ವಾಹನದಲ್ಲಿ ಶಿಕ್ಷಕಿ ಕೂಡ ಇದ್ದರು.
ಪಾಠ ಕಲಿಯದ ಶಿಕ್ಷಕರು: ಸಿರವಾರದಲ್ಲಿ ಇತ್ತೀಚಿಗೆ ವಿದ್ಯಾರ್ಥಿಗಳನ್ನು ಕ್ರೀಡಾಕೂಟಕ್ಕೆ ಕರೆದುಕೊಂಡು ಹೋಗಿ ಸರಕು ಸಾಗಿಸುವ ಟಾಟಾ ಏಸ್ ವಾಹನದಲ್ಲಿ ಮರಳುವಾಗ ವಾಹನ ಪಲ್ಟಿಯಾಗಿ 20ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಆದರೂ ಇದರಿಂದ ಎಚ್ಚೆತ್ತುಕೊಳ್ಳದ ತಾಲೂಕಿನ ಕೆಲ ಶಾಲೆಗಳ ಶಿಕ್ಷಕರು ಸರಕು ವಾಹನದಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗಿದ್ದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಶಾಲಾ ಮಕ್ಕಳನ್ನು ಸಭೆ, ಸಮಾರಂಭ, ಕ್ರೀಡಾಕೂಟ ಮತ್ತು ಶಾಲೆಗಳಿಗೆ ಸರಕು ಸಾಗಾಟ ವಾಹನದಲ್ಲಿ ಕರೆದುಕೊಂಡು ಹೋಗುವುದನ್ನು ಸಂಪೂರ್ಣ ನಿಷೇಧಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಕಾಟಾಚಾರಕ್ಕೆ ಕಾಯ್ದೆ ಪಾಲಿಸುತ್ತಿದೆ. ವಿದ್ಯಾರ್ಥಿಗಳ ಜೀವಕ್ಕೆ ಬೆಲೆ ಇಲ್ಲದಂತಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಲ್ಲಿ ಡಿಡಿಪಿಐ, ಪೊಲೀಸ್ ಮತ್ತು ಆರ್‌ಟಿಒ ಕೂಡ ವಿಫಲವಾಗಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ರೈಲು ಬಡಿದು ವ್ಯಕ್ತಿ ಸಾವು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.