ಕ್ಷಯ ಮುಕ್ತ ಸಮಾಜಕ್ಕಾಗಿ ಆಂದೋಲನ
56 ತಂಡಗಳಲ್ಲಿ 112 ಮಂದಿ ಕಾರ್ಯನಿರ್ವಹಣೆ • ಪ್ರತಿ ಮನೆಗೂ ವೈದ್ಯಕೀಯ ಸಿಬ್ಬಂದಿ ಭೇಟಿ
Team Udayavani, Jul 18, 2019, 3:40 PM IST
ಮಾಗಡಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಮುಂಭಾಗ ಕ್ಷಯ ರೋಗ ಪತ್ತೆ ಆಂದೋಲನಕ್ಕೆ ಡಾ.ಚಂದ್ರಕಲಾ ಚಾಲನೆ ನೀಡಿದರು.
ಮಾಗಡಿ: ಕ್ಷಯ ರೋಗ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕ್ಷಯ ರೋಗ ಪತ್ತೆ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಚಂದ್ರಕಲಾ ತಿಳಿಸಿದರು.
ಪಟ್ಟಣದ ಸರ್ಕಾರಿ ಆಸ್ಪತ್ರೆ ಮುಂಭಾಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕ್ಷಯರೋಗ ವಿಭಾಗದಿಂದ ನಡೆದ ಕ್ಷಯ ರೋಗ ಪತ್ತೆ ಆಂದೊಲನಕ್ಕೆ ಚಾಲನೆ ನೀಡಿದ ಅವರು ಮಾತನಾಡಿ, ಜು.27ರ ವರೆಗೆ ಆಂದೋಲನ ನಡೆಯಲಿದೆ. ಒಟ್ಟು 56 ತಂಡಗಳಲ್ಲಿ 112 ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಪ್ರತಿ ಮನೆಗಳಿಗೆ ವೈದ್ಯಕೀಯ ಸಿಬ್ಬಂದಿ ಭೇಟಿ ನೀಡಿ, ರೋಗ ಪತ್ತೆಗೆ ಪರಿಶೀಲನೆ ಮಾಡಲಿದ್ದಾರೆ ಎಂದು ಹೇಳಿದರು.
ಮನೆ ಸದಸ್ಯರು ಸಹಕಾರ ನೀಡಿ: ಪ್ರತಿಯೊಂದು ವೈದ್ಯಕೀಯ ಸಿಬ್ಬಂದಿ ತಂಡವು ನಿತ್ಯ ಕನಿಷ್ಠ 30ರಿಂದ 50 ಮನೆಗಳಿಗೆ ಭೇಟಿ ನೀಡಲಿದ್ದಾರೆ. ಅವರಿಗೆ ಮನೆಯ ಸದಸ್ಯರು ಸಹಕಾರ ನೀಡಬೇಕು. ಯಾವುದೇ ಮುಜಗರವಿಲ್ಲದೆ ತಮ್ಮ ಮನೆಯಲ್ಲಿ ಯಾರಿಗಾದರೂ ಆರೋಗ್ಯವಿಲ್ಲದ್ದರೆ ತಿಳಿಸಿ, ಸಂಪೂರ್ಣ ಮಾಹಿತಿ ನೀಡಬೇಕು. ಈ ಮೂಲಕ ತಮ್ಮ ಮನೆಯಲ್ಲಿ ಇರುವ ವ್ಯಕ್ತಿಯ ರೋಗವನ್ನು ಪತ್ತೆ ಹಚ್ಚಿ, ತಮಗೆ ಬೇಕಾದ ಅಗತ್ಯ ಸಲಹೆ, ಔಷಧವನ್ನು ಉಚಿತವಾಗಿ ನೀಡಲಿದ್ದೇವೆ ಎಂದು ತಿಳಿಸಿದರು.
ಕ್ಷಯ ರೋಗ ತಡೆ ಕ್ರಮ: ಎರಡು ವಾರಕ್ಕಿಂತ ಮೇಲ್ಪಟ್ಟು ಕೆಮ್ಮು, ಸಂಜೆಯ ವೇಳೆ ಜ್ವರ ಕಾಣಿಸಿಕೊಳ್ಳುವುದು, ಎದೆ ನೋವು, ತೂಕ ಕಡಿಮೆಯಾಗುವುದು, ಕಫದ ಜೊತೆ ರಕ್ತ ಬೀಳುವುದು, ವಾಸಿಯಾಗದ ಕೆಮ್ಮು ಇವುಗಳು ಕ್ಷಯ ರೋಗದ ಪ್ರಮುಖ ಲಕ್ಷಣವಾಗಿದೆ. ರೋಗಿ ಕೆಮ್ಮಿದಾಗ ಹೊರ ಬರುವ ತುಂತರುಗಳಿಂದ ರೋಗಾಣುಗಳು ಆರೋಗ್ಯವಂತರ ಮೇಲೂ ಸೋಂಕು ಉಂಟಾಗಲಿದೆ. ಕ್ಷಯ ರೋಗ ತಡೆಗೆ ಅನುಸರಿಸಬೇಕಾದ ಎಲ್ಲಾ ಕ್ರಮಗಳನ್ನು ವೈದ್ಯಕೀಯ ಸಿಬ್ಬಂದಿ ತಿಳಿಸಿಕೊಡಲಿದ್ದಾರೆ. ಇದಕ್ಕೆ ಎಲ್ಲರ ಸಹಕಾರ ಅವಶ್ಯವಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಾ.ರಾಕೇಶ್, ಡಾ.ಅನಿಲ್ ಕುಮಾರ್, ಆರೋಗ್ಯ ಇಲಾಖೆಯ ಅಧಿಕಾರಿ ರಂಗನಾಥ್, ರಾಜು, ತುಕಾರಾಂ, ರಾಜಣ್ಣ, ಶಿವಣ್ಣ, ಬಾಲರಾಜು, ಕುಮಾರ್, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
MUST WATCH
ಹೊಸ ಸೇರ್ಪಡೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.