ಕ್ರೀಡೆಗಳಲ್ಲಿ ಗೆಲ್ಲುವ ವಿಶ್ವಾಸ ಬೆಳೆಸಿಕೊಳ್ಳಿ
ವಿದ್ಯಾರ್ಥಿಗಳು ದೈಹಿಕ ಶಿಕ್ಷಕರ ಶ್ರಮ ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಿ: ಶಾಸಕ ಎ.ಮಂಜುನಾಥ್
Team Udayavani, Sep 19, 2019, 4:53 PM IST
ಮಾಗಡಿ ಸರ್ಕಾರಿ ಕಾಲೇಜು ಮೈದಾನದಲ್ಲಿ ನಡೆದ ಕ್ರೀಡಾಕೂಟದಲ್ಲಿ ಶಾಸಕ ಮಂಜುನಾಥ್ ಕ್ರೀಡಾಜ್ಯೋತಿ ಸ್ವೀಕರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದೇಶ್ವರ್ ಇದ್ದರು.
ಮಾಗಡಿ: ಕ್ರೀಡೆಗಳು ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಕ್ರೀಡೆಗಳಲ್ಲಿ ಭಾಗವಹಿಸಿ, ಗೆಲ್ಲುವ ವಿಶ್ವಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಶಾಸಕ ಎ.ಮಂಜುನಾಥ್ ತಿಳಿಸಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಕ್ರೀಡಾಕೂಟದಲ್ಲಿ ಜ್ಯೋತಿ ಸ್ವೀಕರಿಸಿದ ಅವರು ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಸ್ಪರ್ಧಿಸಿ, ಉತ್ತಮ ಸಾಧನೆಗೆ ದೈಹಿಕ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ದೈಹಿಕ ಶಿಕ್ಷಕರ ಶ್ರಮವನ್ನು ಮಕ್ಕಳು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕಿದೆ. ಈ ಮೂಲಕ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಬೇಕು. ಹೆಚ್ಚು ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಪೋಷಕರಿಗೆ ಮತ್ತು ಶಾಲೆಗೆ ಕೀರ್ತಿ ತರುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು.
ನೌಕರರ ಸಂಘಕ್ಕೆ ಜಮೀನು ಗುರುತಿಸಿ: ಪಟ್ಟಣದಲ್ಲಿ ಸರ್ಕಾರಿ ನೌಕರರ ಸಂಘದ ಕಟ್ಟಡಕ್ಕೆ ನಿರ್ಮಾಣಕ್ಕಾಗಿ ಕನಿಷ್ಠ ಅರ್ಧ ಎಕರೆಯಷ್ಟು ಸೂಕ್ತ ಜುಮೀನು ಗುರುತಿಸಲು ತಹಶೀಲ್ದಾರ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಮಕ್ಕಳ ಆರೋಗ್ಯಕ್ಕೆ ಪ್ರಮುಖ್ಯತೆ ನೀಡಿ: ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಸಿದ್ದೇಶ್ವರ್ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಶಕ್ತಿಯನ್ನು ಹೆಚ್ಚಿಸುತ್ತದೆ. ದೇಹವು ಸದೃಢಗೊಳ್ಳುವುದರ ಜೊತೆಗೆ ಆರೋಗ್ಯದಿಂದ ಇರಬಹುದು. ಈ ದೇಶದ ಆಸ್ತಿ ವಿದ್ಯಾರ್ಥಿಗಳು, ಅವರ ಆರೋಗ್ಯಕ್ಕೆ ಹೆಚ್ಚಿನ ಪ್ರಮುಖ್ಯತೆ ಸರ್ಕಾರ ನೀಡುತ್ತಿದೆ ಎಂದರು.
ಈ ವೇಳೆ ಶಾಸಕ ಎ.ಮಂಜುನಾಥ್ ಅವರು ವಿಜೇತ ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕಾಧಿಕಾರಿ ಟಿ.ಪ್ರದೀಪ್, ತಾಪಂ ಸದಸ್ಯ ಎಂ.ಜಿ.ನರಸಿಂಹಮೂರ್ತಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಜಿ.ಶಿವರಾಮಯ್ಯ, ಕಾರ್ಯಾಧ್ಯಕ್ಷ ಪ್ರಕಾಶ್, ಗ್ರಾಪಂ ಸದಸ್ಯ ರಘು, ಮುಖಂಡ ಕಲ್ಕೆರೆ ಶಿವಣ್ಣ, ದೈಹಿಕ ಶಿಕ್ಷಣ ಪರಿವೀಕ್ಷಕ ಸಿ.ಬಿ. ಅಶೋಕ್, ಶಿಕ್ಷಕ ಮಲ್ಲೂರು ಲೋಕೇಶ್, ಎಂ.ಎನ್.ಜಯರಾಮ್, ಕೆ.ಪಿ. ರಂಗಸ್ವಾಮಿ, ಮಲ್ಲಿಕಾರ್ಜುನಸ್ವಾಮಿ, ಲೋಕೇಶ್, ದೈಹಿಕ ಶಿಕ್ಷಕರಾದ ಆರ್.ಬಿ.ಅರಸನಾಳ್, ಹನುಮಂತಪ್ಪ, ವೆಂಕಟೇಶ್, ದಯಾನಂದ್, ನರಸಿಂಹಮೂರ್ತಿ, ಸಿದ್ದೇಶ್, ರವಿ ಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.