ಜಿಲ್ಲೆಯಲ್ಲಿ 3 ವರ್ಷದಲ್ಲಿ 444 ಬಾಲ್ಯ ವಿವಾಹ

ಪ್ರತಿ ತಿಂಗಳು 7ರಿಂದ 8 ಅಪ್ರಾಪ್ತರಿಗೆ ಮದುವೆ • ಬಾಲ್ಯದಲ್ಲೇ ಹೆಣ್ಣು ಮಕ್ಕಳಿಗೆ ವಿವಾಹ ಸಂಕೋಲೆ

Team Udayavani, Aug 8, 2019, 3:06 PM IST

8–Agust-37

ಬಾಲ್ಯವಿವಾಹ ಜಾಗೃತಿ ಮೂಡಿಸುತ್ತಿರುವ ಮಕ್ಕಳು.

ಮಂಡ್ಯ: ಓಡುತ್ತಾ, ಆಡುತ್ತಾ, ನಲಿದಾಡಬೇಕಾದ ಎಷ್ಟೋ ಹೆಣ್ಣು ಮಕ್ಕಳ ಮುಖ ಬಾಲ್ಯದಲ್ಲೇ ಬಾಡಿ ಹೋಗುತ್ತಿದೆ. ಚಿಕ್ಕ ವಯಸ್ಸಿನಲ್ಲೇ ವಿವಾಹದ ಸಂಕೋಲೆಯೊಳಗೆ ಬಂಧಿಸಿ ಸಾಂಸಾರಿಕ ಭಾರವನ್ನು ಹೊರಿಸಲಾಗುತ್ತಿದೆ. ಪ್ರತಿ ವರ್ಷ ನಡೆಯುತ್ತಿರುವ ಬಾಲ್ಯವಿವಾಹಗಳು ನೂರಾರು ಹೆಣ್ಣು ಮಕ್ಕಳ ಬದುಕನ್ನು ಕತ್ತಲೆಗೆ ದೂಡುತ್ತಿದೆ.

ಬಡತನ, ಪೋಷಕರ ನಿರ್ಲಕ್ಷ್ಯ, ಮನೆಯೊಳಗಿನ ವಾತಾವರಣ, ಸಾಮಾಜಿಕ ಪರಿಸರದಲ್ಲಿ ಆಗಿರುವ ಬದಲಾವಣೆಗಳು ಸೇರಿದಂತೆ ವಿವಿಧ ಕಾರಣಗಳಿಂದ ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಬಾಲ್ಯ ವಿವಾಹಗಳು ಹೆಚ್ಚುತ್ತಲೇ ಇವೆ. ಕಳೆದ ಮೂರು ವರ್ಷದಲ್ಲಿ ಜಿಲ್ಲೆಯಲ್ಲಿ 444 ಬಾಲ್ಯ ವಿವಾಹಗಳು ನಡೆದಿರುವುದು ಇದಕ್ಕೆ ಸಾಕ್ಷಿಯಾಗಿದೆ.

ಈ ಮೊದಲು ಮಂಡ್ಯ ಹಾಗೂ ಶ್ರೀರಂಗಪಟ್ಟಣ ಬಾಲ್ಯ ವಿವಾಹದಲ್ಲಿ ಮುಂಚೂಣಿ ಸ್ಥಾನದಲ್ಲಿದ್ದವು. ಈಗ ಪಾಂಡವಪುರ, ಮಳವಳ್ಳಿ, ಮದ್ದೂರುಗಳಲ್ಲೂ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ. ಅಪ್ತಾಪ್ರ ವಯಸ್ಸಿನ ಹೆಣ್ಣು ಮಕ್ಕಳ ವಿವಾಹವಾಗುವುದನ್ನು ನಿಯಂತ್ರಣಕ್ಕೆ ತರಲು ಇಲಾಖಾ ಅಧಿಕಾರಿಗಳಿಂದಲೂ ಸಾಧ್ಯವಾಗುತ್ತಿಲ್ಲ. ಮದುವೆಯಾದ ಬಾಲಕಿಯ ಭವಿಷ್ಯದ ದೃಷ್ಟಿಯಿಂದ ಕಠಿಣ ಕಾನೂನು ಕ್ರಮ ಜರುಗಿಸಿದ್ದರೂ ಎಲ್ಲರೂ ಅಸಹಾಯಕತೆ ಪ್ರದರ್ಶಿಸುತ್ತಿದ್ದಾರೆ.

ಕಾರಣಗಳು ಹಲವು: ಹೆಣ್ಣು ಹೆತ್ತವರು ಬಹಳ ಬೇಗ ಜವಾಬ್ದಾರಿ ಕಳೆದುಕೊಳ್ಳುವ ಉದ್ದೇಶದಿಂದ ಅವರಿಗೆ ಮದುವೆ ಮಾಡುತ್ತಿದ್ದಾರೆ. ಇನ್ನೂ ಕೆಲವರು ಬದಲಾದ ಕಾಲದೊಳಗೆ ಹೆಣ್ಣು ಮಕ್ಕಳು ಹಾದಿ ತಪ್ಪಬಹುದೆಂಬ ಭೀತಿಯಿಂದ ಪ್ರಾಪ್ತ ವಯಸ್ಸಿಗೆ ಬರುವ ಮುನ್ನವೇ ವಿವಾಹ ನೆರವೇರಿಸುತ್ತಿದ್ದಾರೆ. ಆರ್ಥಿಕ ಸಂಕಷ್ಟ, ಸಾಲದ ಕಾರಣಕ್ಕೆ ಹದಿನೈದು-ಹದಿನಾರು ವರ್ಷದ ಬಾಲಕಿಯನ್ನು 35-37 ವರ್ಷದ ವರನಿಗೆ ಕೊಟ್ಟು ಮದುವೆ ಮಾಡುತ್ತಿರುವ ಸಂಗತಿಗಳೂ ಬೆಳಕಿಗೆ ಬಂದಿವೆ.

ಇಂದಿನ ಆಹಾರ ಪದ್ಧತಿಯೂ ಹೆಣ್ಣು ಮಕ್ಕಳು ಬಹಳ ಬೇಗ ಋತುಮತಿಯಾಗು ತ್ತಿರುವುದು, ಆಕೆ ವಾಸಿಸುತ್ತಿರುವ ಪರಿಸರದ ಸುತ್ತ ಆಗಿರುವ ಬದಲಾವಣೆಗಳು, ಪೋಷಕರು ಹೆಣ್ಣು ಮಕ್ಕಳ ಮೇಲೆ ಹೆಚ್ಚು ಕಾಳಜಿ ವಹಿಸದೆ ನಿಯಂತ್ರಣ ಕಳೆದು ಕೊಂಡಿರುವುದು ಹೀಗೆ ಹಲವಾರು ಕಾರಣ ಗಳಿಂದ ಬಾಲ್ಯ ವಿವಾಹಗಳು ನಡೆಯುತ್ತಿವೆ.

ಜಿಲ್ಲೆಯಲ್ಲಿ ನಡೆಯುತ್ತಿರುವ ಅಪ್ತಾಪ್ತರ ವಿವಾಹ ಪ್ರಕರಣಗಳು ಬೆಳಕಿಗೆ ಬರುವುದು ಬಹಳ ಕಡಿಮೆ. ಹೊರಗಿನವರ ಗಮನಕ್ಕೆ ಬಾರದೆ ಎಷ್ಟೋ ಬಾಲಕಿಯರು ಚಿಕ್ಕ ವಯಸ್ಸಿನಲ್ಲೇ ಮದುವೆಯಾಗಿ ಮೂಕ ರೋಧನ ಅನುಭವಿಸುತ್ತಿದ್ದಾರೆ. 16 -17 ವಯಸ್ಸಿಗೆ ಮದುವೆಯಾಗಿ ಮಕ್ಕಳ ಜವಾಬ್ದಾರಿ ಹೊರುತ್ತಿದ್ದಾರೆ. ಬಾಲ್ಯದಲ್ಲೇ ವಿವಾಹದ ಸಂಕೋಲೆಗಳಿಗೆ ಸಿಲುಕಿ ಶಿಕ್ಷಣದಿಂದ ವಂಚಿತರಾಗುವುದು ಮಾತ್ರ ವಲ್ಲದೆ ಸ್ವತಂತ್ರ ಆಲೋಚನಾ ಶಕ್ತಿಯನ್ನೇ ಕಳೆದುಕೊಳ್ಳುತ್ತಿದ್ದಾರೆ.

ದೇವಸ್ಥಾನಗಳಲ್ಲಿ ವಿವಾಹ: ಸಾಮಾನ್ಯವಾಗಿ ಬಾಲ್ಯ ವಿವಾಹಗಳು ದೇವಸ್ಥಾನಗಳಲ್ಲೇ ಹೆಚ್ಚಾಗಿ ನಡೆಯುತ್ತಿವೆ. ಇಂತಹ ವಿವಾಹಗಳು ಬಹಳ ಗುಪ್ತವಾಗಿ ನಡೆಯುತ್ತವೆ.

ಕೆಲವರು ಅಪ್ತಾಪ್ತ ಹೆಣ್ಣು ಮಕ್ಕಳಿಗೆ ನಡೆಯುತ್ತಿರುವ ವಿವಾಹದ ಬಗ್ಗೆ ಸಂಬಂಧಿಸಿದ ಇಲಾಖೆ ಹಾಗೂ ಪೊಲೀಸರ ಗಮನಕ್ಕೆ ತಂದರೆ, ಮತ್ತೆ ಕೆಲವರು ದ್ವೇಷದ ಕಾರಣದಿಂದಲೂ ಬಾಲ್ಯದಲ್ಲೇ ಮದುವೆ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡುವುದೂ ಉಂಟು. ಕೆಲವೊಮ್ಮೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ತೆರಳುವಷ್ಟರಲ್ಲೇ ವಿವಾಹ ಮುಗಿದು ಹೋಗಿರುತ್ತವೆ. ಹಲವು ಸಮಯದಲ್ಲಿ ನಿಗದಿತ ಸಮಯಕ್ಕೆ ತೆರಳಿ ವಿವಾಹಗಳನ್ನು ತಡೆದಿರುವುದೂ ಉಂಟು.

ಜಾಗೃತಿ ಅಗತ್ಯ: ಬಾಲ್ಯ ವಿವಾಹ , ಫೋಕ್ಸೋ ಕಾಯಿದೆ ಸೇರಿದಂತೆ ಹೆಣ್ಣು ಮಕ್ಕಳ ದೌರ್ಜನ್ಯದ ವಿಷಯವಾಗಿ ನಗರ ಪ್ರದೇಶ ಗಳಿಗಿಂತಲೂ ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಗ್ರಾಮೀಣ ಪರಿಸರದಲ್ಲಿರುವ ಹೆಣ್ಣು ಮಕ್ಕಳೊಂದಿಗೆ ಸಂವಾದ ನಡೆಸುವುದು, ಬಾಲ್ಯ ವಿವಾಹದಿಂದ ಎದುರಿಸಬೇಕಾದ ಸಮಸ್ಯೆಗಳ ಕುರಿತು ಅರಿವು-ಜಾಗೃತಿ ಮೂಡಿಸುವುದರೊಂದಿಗೆ ಬಾಲ್ಯದಲ್ಲೇ ಕಮರಿಹೋಗುತ್ತಿರುವ ನೂರಾರು ಹೆಣ್ಣು ಮಕ್ಕಳ ಬದುಕಿಗೆ ಹೊಸ ದಾರಿ ತೋರಿಸುವ ಜವಾಬ್ದಾರಿ ಎಲ್ಲರ ಮೇಲಿದೆ.

ಟಾಪ್ ನ್ಯೂಸ್

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.