ಜಿಲ್ಲೆಗೆ ಸೋಂಕು ನಿಯಂತ್ರಣಕ್ಕೆ 10 ಕೋಟಿ ಅನುದಾನ
Team Udayavani, Jun 1, 2021, 12:51 PM IST
ಕೋವಿಡ್ ಎರಡನೇ ಅಲೆ ದೇಶವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರಾಜ್ಯದಲ್ಲೂ ಸಹ ನಿತ್ಯದ ಸೋಂಕು ಪ್ರಕರಣ 50 ಸಾವಿರ ಗಡಿವರೆಗೆ ದಾಟಿ ಇದೀಗ ಇಳಿಕೆ ಕಾಣುತ್ತಿದೆ. ಅದರಂತೆ ಜಿಲ್ಲೆಯಲ್ಲೂ ಸಹ ದಿನವೊಂದರಲ್ಲಿ 1,959 ಸೋಂಕು ಪ್ರಕರಣ ದಾಖಲಾಗಿದ್ದೇ ಗರಿಷ್ಠವಾಗಿದ್ದು, ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲೂ ಸಹ ಇಳಿಕೆ ಕಂಡು ನಿತ್ಯ 500, 600 ಗಡಿಯಲ್ಲಿ ಸೋಂಕು ಪ್ರಕರಣ ದಾಖಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿ ತಮ್ಮ ಕಾರ್ಯವೈಖರಿ ಹಾಗೂ ಕೈಗೊಂಡಿರುವ ಕ್ರಮ, ಸೌಕರ್ಯಗಳ ಕುರಿತು ಕೆ.ಆರ್.ಪೇಟೆ ಶಾಸಕರೂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ನಾರಾಯಣ ಗೌಡ ಅವರು ಉದಯವಾಣಿ ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ.
ಮಂಡ್ಯ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ 2ನೇ ಅಲೆ ಹೆಚ್ಚಾಗಿತ್ತು. ಇದನ್ನು ನಿಯಂತ್ರಿಸುವ ಸವಾಲು ಎದುರಾಗಿದೆ. ನಮ್ಮ ಜಿಲ್ಲೆಯಲ್ಲದೆ, ಬೇರೆ ಜಿಲ್ಲೆಯ ಸೋಂಕಿತರು ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದಾರೆ.
ಸೋಂಕು ಜಿಲ್ಲೆಯ ಗ್ರಾಮ ಗ್ರಾಮಗಳಿಗೂ ಹರಡುವ ಮೂಲಕ ಭೀತಿ ಉಂಟು ಮಾಡಿತ್ತು. ಇದನ್ನು ನಿಯಂತ್ರಿಸುವ ಜವಾಬ್ದಾರಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಮೇಲೆ ಬಿದ್ದಿತ್ತು. ಜಿಲ್ಲೆಯಲ್ಲಿಯೇ ಮೊಕ್ಕಾಂ ಹೂಡಿದ ಸಚಿವ ನಾರಾ ಯಣಗೌಡ ಅವರು, ಪ್ರತಿದಿನ ಕಾಲಿಗೆ ಚಕ್ರಕಟ್ಟಿ ಕೊಂಡವರಂತೆ ಜಿಲ್ಲೆಯನ್ನು ಪ್ರದಕ್ಷಿಣೆ ಹಾಕುತ್ತಲೇ ಇದ್ದಾರೆ. ಎಲ್ಲ ಶಾಸಕರು, ಅಧಿಕಾರಿಗಳನ್ನು
ವಿಶ್ವಾಸಕ್ಕೆ ತೆಗೆದುಕೊಂಡು ಸೋಂಕು ನಿಯಂತ್ರಣಕ್ಕೆ ಶ್ರಮ ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಅತಿ ಹೆಚ್ಚುಕ್ವಾರಂಟೈನ್‌ಕೇಂದ್ರಗಳನ್ನು ತೆರೆದು ಹೋಂ ಐಸೋಲೇಷನ್‌ಗೆ ಒತ್ತು ನೀಡದೆಕ್ವಾರಂಟೈನ್ ಕೇಂದ್ರಗಳಿಗೆ ಸೋಂಕಿತರನ್ನು ದಾಖಲಿಸುವ ಮೂಲಕ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆ ಹಾಗೂ ಕ್ವಾರಂಟೈನ್‌ಕೇಂದ್ರಗಳಲ್ಲಿ ಸೋಂಕಿತರಿಗೆ ಯಾವುದೇ ರೀತಿಯ ತೊಂದರೆ ಯಾಗದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಗುಣಮಟ್ಟದಊಟ, ತಿಂಡಿ, ಚಿಕಿತ್ಸೆ, ಹೆಲ್ತ್‌ಕಿಟ್ ವಿತರಣೆ, ಬಿಸಿ ನೀರು ವ್ಯವಸ್ಥೆ, ಶೌಚಾಲಯ, ಶುಚಿತ್ವಕ್ಕೆ ಹೆಚ್ಚು ಆದ್ಯತೆ ನೀಡುವ ಮೂಲಕ ಸೋಂಕು ನಿಯಂತ್ರಣಕ್ಕೆ ಶ್ರಮಿಸುತ್ತಿದ್ದಾರೆ. ಮಿಮ್ಸ್‌ನಲ್ಲಿ ಉಂಟಾಗಿದ್ದ ಆಕ್ಸಿಜನ್‌ಕೊರತೆ ನೀಗಿಸಲು ದಾನಿಗಳ ಮೂಲಕ ಸಿಲಿಂಡರ್, ಆಕ್ಸಿಜನ್ ಪ್ಲಾಂಟ್, ಮೊಬೈಲ್ ಆಕ್ಸಿಜನ್‌ಕಾನ್ಸಂಟ್ರೇಟರ್‌ಗಳನ್ನು ಪಡೆಯುವ ಮೂಲಕ ಪ್ರಸ್ತುತ ಇರುವ ಆಕ್ಸಿಜನ್ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಸಚಿವಕೆ.ಸಿ.ನಾರಾಯಣಗೌಡ ಅವರು ಉದಯವಾಣಿ ಯೊಂದಿಗೆ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಮ್ಮಕಾರ್ಯವೈಖರಿ ಬಗ್ಗೆ ಹಂಚಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಸೋಂಕು ನಿಯಂತ್ರಿಸಲು ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ಹೇಗಿದೆ? :
ಕೋವಿಡ್ ಸೋಂಕಿನ ಎರಡನೇ ಅಲೆಯು ಹೆಚ್ಚಾಗುತ್ತಿದ್ದಂತೆ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಜವಾಬ್ದಾರಿ ನಿಭಾಯಿಸುತ್ತಿರುವುದು ಸಮಾಧಾನ ತಂದಿದೆ. ಸೋಂಕು ನಿಯಂತ್ರಿಸಲು ಅಗತ್ಯವಾಗಿ ಬೇಕಾಗಿದ್ದ ಅನುದಾನ10ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿತು. ಅಲ್ಲದೆ, ಅದಕ್ಕೂ ಮುನ್ನ ತಾಲೂಕಿನ ಎಲ್ಲ ತಾಲೂಕು ಆಡಳಿತಗಳಿಂದ50 ರಿಂದ1 ಲಕ್ಷ ರೂ.ವರೆಗೆ ತೆಗೆದುಕೊಂಡು ಚಿಕಿತ್ಸೆಗೆ ಬೇಕಾದ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ. ಎಲ್ಲ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಕ್ವಾರಂಟೈನ್‌ಕೇಂದ್ರ ತೆರೆದು ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಿ, ಕ್ರಮ ವಹಿಸಲಾಯಿತು.
ಪ್ರಸ್ತುತ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆಯಾ? ಹೌದು, ಪ್ರಸ್ತುತ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆ. ಮೊದಲು2 ಸಾವಿರದಷ್ಟು ಪ್ರಕರಣ ದಾಖಲಾಗುತ್ತಿದ್ದವು. ಈಗ 500ಕ್ಕೆ ಇಳಿದಿರುವುದು ಸಮಾಧಾನ ತಂದಿದೆ. ಸೋಂಕು ಹೆಚ್ಚಾಗುತ್ತಿದ್ದಂತೆ ಮೊರಾರ್ಜಿ,ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಇತರೆ ವಸತಿ ಶಾಲೆಗಳು ಹಾಗೂ ನವೋದಯ ಶಾಲೆಗಳಲ್ಲಿಕ್ವಾರಂಟೈನ್
ಕೇಂದ್ರಗಳನ್ನು ತೆರೆದು ಸೋಂಕಿತರುಕಂಡು ಬಂದ ತಕ್ಷಣ ಅವರನ್ನು ಕ್ವಾರಂಟೈನ್ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಿ, ಗುಣಮಟ್ಟದಊಟ, ತಿಂಡಿ, ಬಿಸಿ ನೀರು ವ್ಯವಸ್ಥೆ ಜೊತೆಗೆ ಶುಚಿತ್ವಕ್ಕೆ ಒತ್ತು ನೀಡಲಾಗುತ್ತಿದೆ. ಎಲ್ಲ ತಾಲೂಕುಗಳಲ್ಲಿಯೂ ಬೆಡ್‌ಗಳ ಸಂಖ್ಯೆ ಹೆಚ್ಚಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದರಿಂದ ಸೋಂಕು ನಿಯಂತ್ರಣಕ್ಕೆ ಬರುತ್ತಿರುವುದು ಸಮಾಧಾನ ತಂದಿದೆ.
ಸ್ಥಳೀಯ ಶಾಸಕರು ಹಾಗೂಅಧಿಕಾರಿಗಳ ಸಹಕಾರ ಹೇಗಿದೆ?
ಸ್ಥಳೀಯ ಶಾಸಕರು ತಮ್ಮಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿಪ್ರಾಯ, ಸಲಹೆಗಳನ್ನು ಸ್ವೀಕರಿಸಿ ಅದರಂತೆಕೆಲಸ ನಿರ್ವಹಿಸಲಾಗುತ್ತಿದೆ. ಯಾವ ತಾಲೂಕಿನಲ್ಲಿ ಸೌಲಭ್ಯದಕೊರತೆ ಇದ್ದರೆ ತಕ್ಷಣ ತಿಳಿಸುವಂತೆ ಮನವಿ ಮಾಡಲಾಗಿತ್ತು. ಅದರಂತೆಸಮಸ್ಯೆ ಇರುವ ತಾಲೂಕುಗಳಿಗೆ ಅಗತ್ಯ ಸೌಲಭ್ಯಕಲ್ಪಿಸಲಾಗಿದೆ. ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದ ಸೋಂಕು ಹತೋಟಿಗೆ ಬರುತ್ತಿದೆ.
ಆಕ್ಸಿಜನ್ ಕೊರತೆ ನೀಗಿಸಲು ಏನು ಕ್ರಮ?
ಜಿಲ್ಲೆಯಲ್ಲಿ ಮೊದಲು ಆಕ್ಸಿಜನ್‌ಕೊರತೆ ಇತ್ತು.ಕೊರತೆ ನೀಗಿಸಲು ಹಗಲು-ರಾತ್ರಿ ಶ್ರಮಿಸಿದ್ದೇವೆ. ಜಿಲ್ಲಾಸ್ಪತ್ರೆಯಲ್ಲಿದ್ದಕೆಲವು ಸಮಸ್ಯೆಗಳನ್ನು ನಿವಾರಿಸಿ, ಎಲ್ಲ ಸೋಂಕಿತರ ವಾರ್ಡ್‌ಗಳಿಗೆ ಸಿಸಿ ಕ್ಯಾಮೆರಾ ಅಳವಡಿಸುವ ಮೂಲಕ ಸೋಂಕಿತರ ಮೇಲೆ ನಿಗಾ ವಹಿಸಲು ಸಾಧ್ಯವಾಗಿದೆ. ತಾಲೂಕು ಆಸ್ಪತ್ರೆಗಳಲ್ಲೂ ಆಕ್ಸಿಜನ್ ಕೊರತೆಕಾಡುತ್ತಿತ್ತು. ಇದಕ್ಕಾಗಿ ಮೈಸೂರಿಗೆ ಹೋಗಿ ಆಕ್ಸಿಜನ್‌ತುಂಬಿಸಿಕೊಂಡು ಬರಲು ಅಧಿಕಾರಿಗಳು ಶ್ರಮ ವಹಿಸಿದ್ದಾರೆ. ಈಗ ಆಕ್ಸಿಜನ್‌ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗುತ್ತಿದೆ.
– ಎಚ್.ಶಿವರಾಜು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.