ಮಂಡ್ಯದಲ್ಲಿ 202 ಕೋವಿಡ್ ಹೊಸ ಪ್ರಕರಣ; 104 ಮಂದಿ ಚೇತರಿಕೆ
Team Udayavani, Oct 21, 2020, 7:49 PM IST
ಮಂಡ್ಯ: ಜಿಲ್ಲೆಯಲ್ಲಿ ಬುಧವಾರ 202 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, 104 ಮಂದಿ ಚೇತರಿಸಿಕೊಂಡಿದ್ದಾರೆ. ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ.
ಮಂಡ್ಯ 66, ಮದ್ದೂರು 19, ಮಳವಳ್ಳಿ 5, ಪಾಂಡವಪುರ 30, ಶ್ರೀರಂಗಪಟ್ಟಣ 15, ಕೆ.ಆರ್.ಪೇಟೆ 40, ನಾಗಮಂಗಲ 26 ಮಂದಿ ಸೇರಿದಂತೆ 202 ಮಂದಿಗೆ ಸೋಂಕು ಆವರಿಸಿದೆ. ಇದರಿಂದ ಜಿಲ್ಲೆಯಲ್ಲಿ 15,499 ಸೋಂಕಿತ ಪ್ರಕರಣಗಳು ದಾಖಲಾಗಿವೆ. ಹೊರ ಜಿಲ್ಲೆಯ ಒಬ್ಬರು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
3,253 ಪರೀಕ್ಷೆ:
ಜಿಲ್ಲೆಯಲ್ಲಿ 3,253 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ರ್ಯಾಪಿಡ್ ಮೂಲಕ 1,138 ಮಂದಿ ಹಾಗೂ ಆರ್‌ಟಿಪಿಸಿಆರ್ ಮೂಲಕ 2,115 ಮಂದಿ ಪರೀಕ್ಷೆಗೊಳಪಟ್ಟಿದ್ದಾರೆ.
104 ಚೇತರಿಕೆ:
ಮಂಡ್ಯ 32, ಮದ್ದೂರು 13, ಮಳವಳ್ಳಿ 13, ಪಾಂಡವಪುರ 16, ಶ್ರೀರಂಗಪಟ್ಟಣ 8, ಕೆ.ಆರ್.ಪೇಟೆ 10 ಹಾಗೂ ನಾಗಮಂಗಲ 10 ಮಂದಿ ಸೇರಿದಂತೆ 104 ಜನರು ಕೋವಿಡ್ ನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೂ 13,576 ಮಂದಿ ಚೇತರಿಸಿಕೊಂಡಿದ್ದಾರೆ.
1786 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ 1,786 ಸಕ್ರಿಯ ಪ್ರಕರಣಗಳಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ 384, ಖಾಸಗಿ ಆಸ್ಪತ್ರೆಗಳಲ್ಲಿ 116, ಕೋವಿಡ್ ಕೇರ್ ಸೆಂಟರ್‌ನಲ್ಲಿ 330 ಹಾಗೂ ಮನೆಗಳಲ್ಲಿ 956 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಟಿ.ಎನ್.ಧನಂಜಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.