“ಏಳರಲ್ಲಿ 5 ಸ್ಥಾನ ಬಿಜೆಪಿಗೆ’: ಸಚಿವ ಕೆ.ಸಿ.ನಾರಾಯಣ ಗೌಡ
Team Udayavani, Jan 4, 2023, 12:20 AM IST
ಕೆ.ಆರ್.ಪೇಟೆ: ಮಂಡ್ಯ ಜಿಲ್ಲೆಯಲ್ಲಿ ಸುಭದ್ರವಾಗಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ಭದ್ರಕೋಟೆಯನ್ನು ಒಡೆದು, 5 ಕ್ಷೇತ್ರಗಳಲ್ಲಾದರೂ ಕಮಲವನ್ನು ಅರಳಿಸಬೇಕು ಎಂದು ಸಂಕಲ್ಪ ಮಾಡಿದ್ದು, ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಗೆ ಮುಂದಾಗಿರುವುದಾಗಿ ಸಚಿವ ಕೆ.ಸಿ.ನಾರಾಯಣ ಗೌಡ ಹೇಳಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಗೆಲ್ಲುವುದಿಲ್ಲ, ಇಲ್ಲಿ ಕಮಲ ಅರಳಲು ಸಾಧ್ಯವಿಲ್ಲ ಎಂದು ಟೀಕೆ ಮಾಡುತ್ತಿದ್ದ ಟೀಕಾಕಾರರಿಗೆ ಕಳೆದ ಉಪಚುನಾವಣೆಯಲ್ಲಿ ಕೆ.ಆರ್.ಪೇಟೆ ಕ್ಷೇತ್ರದ ಮೂಲಕ ಕಮಲ ಅರಳಿಸಿ, ಇತಿಹಾಸ ನಿರ್ಮಾಣ ಮಾಡಿದ್ದೇನೆ. 2023ರ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯಲ್ಲಿ ಜಿಲ್ಲೆಯ 7 ಸ್ಥಾನಗಳಲ್ಲಿ 5 ಕ್ಷೇತ್ರದಲ್ಲಾದರೂ ಕಮಲವನ್ನು ಅರಳಿಸಿ, ಬಿಜೆಪಿಗೆ ಶಕ್ತಿ ತುಂಬಬೇಕು ಎಂದು ತೀರ್ಮಾನ ಮಾಡಿರುವುದಾಗಿ ಹೇಳಿದರು.
ಸಭೆಯಲ್ಲಿ ಗದ್ದಲದ ವಾತಾವರಣ: ಇತ್ತೀಚೆಗೆ ಪಕ್ಷ ಸೇರಿದ ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರಿಗೆ ಮಣೆ ಹಾಕಲಾಗುತ್ತಿದೆ. ಪಕ್ಷದ ನಾಯಕರ ಧೋರಣೆಯಿಂದ ನಮಗೆ ಅಸಮಧಾನವಾಗಿದೆ. ನಾವು ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ ಎಂದು ಹಲವು ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಭೆ ಮಧ್ಯೆ ರಾಜೀನಾಮೆ ಪತ್ರ ನೀಡಿದಾಗ, ಸಭೆಯಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.