ಮಂಡ್ಯ: 66 ಹೊಸ ಕೋವಿಡ್ 19 ಪ್ರಕರಣ ಪತ್ತೆ ; ಇಬ್ಬರ ಸಾವು
Team Udayavani, Sep 18, 2020, 7:28 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಂಡ್ಯ: ಜಿಲ್ಲೆಯಲ್ಲಿ ಪ್ರತಿದಿನ ನೂರರ ಗಡಿ ದಾಟುತ್ತಿದ್ದ ಸೋಂಕಿತರ ಸಂಖ್ಯೆ ಶುಕ್ರವಾರ 66ಕ್ಕಿಳಿದಿತ್ತು.
ಈ ನಡುವೆ ಕೋವಿಡ್ 19 ಸೋಂಕಿಗೆ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಮದ್ದೂರು ತಾಲ್ಲೂಕಿನ 67 ಹಾಗೂ 80 ವರ್ಷದ ಇಬ್ಬರು ವೃದ್ಧ ಕೋವಿಡ್, ನ್ಯುಮೋನಿಯಾ ಹಾಗೂ ಇತರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 90 ಮಂದಿ ಈ ಸೋಂಕಿನಿಂದ ಮೃತಪಟ್ಟಿದ್ದಾರೆ.
66 ಹೊಸ ಪ್ರಕರಣಗಳ ವಿವರ:
ಮಂಡ್ಯ 22, ಮಳವಳ್ಳಿ 4, ಪಾಂಡವಪುರ 9, ಶ್ರೀರಂಗಪಟ್ಟಣ 8, ಕೆ.ಆರ್.ಪೇಟೆ 18 ಹಾಗೂ ನಾಗಮಂಗಲದ 8 ಮಂದಿ ಸೇರಿದಂತೆ ಒಟ್ಟು 66 ಜನರಿಗೆ ಸೋಂಕು ತಗುಲಿದೆ.
ಇದೀಗ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಪೀಡಿತರ ಒಟ್ಟು ಸಂಖ್ಯೆ 8904ಕ್ಕೆ ಏರಿದೆ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಐಸೋಲೇಷನ್‌ನಲ್ಲಿ 395, ಖಾಸಗಿ ಆಸ್ಪತ್ರೆಗಳ ಐಸೋಲೇಷನ್‌ನಲ್ಲಿ 92, ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 126 ಹಾಗೂ ಹೋಂ ಐಸೋಲೇಷನ್‌ನಲ್ಲಿ 1282 ಮಂದಿ ಇದ್ದಾರೆ.
1206 ಮಂದಿಗೆ ಪರೀಕ್ಷೆ:
ಶುಕ್ರವಾರ ಜಿಲ್ಲೆಯಲ್ಲಿ 1206 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿತ್ತು. 546 ರ‍್ಯಾಪಿಡ್ ಹಾಗೂ 660 ಆರ್‌ಟಿಪಿಸಿಆರ್ ಪರೀಕ್ಷೆಗೊಳಗಾಗಿದ್ದರು.
108 ಮಂದಿ ಬಿಡುಗಡೆ:
ಮಂಡ್ಯ 75, ಮದ್ದೂರು 6, ಮಳವಳ್ಳಿ 1, ಪಾಂಡವಪುರ 2, ಶ್ರೀರಂಗಪಟ್ಟಣ 14, ನಾಗಮಂಗಲ 8 ಹಾಗೂ ಹೊರ ಜಿಲ್ಲೆಯ ಇಬ್ಬರು ಸೇರಿದಂತೆ ಒಟ್ಟು 108 ಮಂದಿ ಈ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಇದುವರೆಗೂ 6919 ಮಂದಿ ಬಿಡುಗಡೆಯಾಗಿದ್ದು, 1895 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಟಿ. ಎನ್. ಧನಂಜಯ ಅವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.