ಆಂಗ್ಲದಲ್ಲಿ ಶೇ.70 ಗ್ರಾಮೀಣ ವಿದ್ಯಾರ್ಥಿಗಳು ಫೇಲ್
ಕಲಿಕೆಯ ಬಗ್ಗೆ ಭಯ, ಕೀಳರಿಮೆ ಸೃಷ್ಟಿ: ಪ್ರೊ.ಬಿ.ಕೆ.ಚಂದ್ರಶೇಖರ್ • ಕನ್ನಡ ಮಾಧ್ಯಮ- ಇಂಗ್ಲಿಷ್ ವಿಚಾರ ಸಂಕಿರಣ
Team Udayavani, Sep 1, 2019, 1:25 PM IST
ನಗರದ ಪ್ರವಾಸಿ ಮಂದಿರದಲ್ಲಿ ಕನ್ನಡ ಸೇನೆ ಕರ್ನಾಟಕ ಸಂಘಟನೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾಜಿ ಶಿಕ್ಷಣ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್ ಮಾತನಾಡಿದರು.
ಮಂಡ್ಯ: ಗ್ರಾಮೀಣ ಶಾಲೆಗಳಲ್ಲಿ ಕಲಿಯುವ ಶೇ.70ರಷ್ಟು ವಿದ್ಯಾರ್ಥಿಗಳು ಇಂಗ್ಲಿಷ್ ವಿಷಯದಲ್ಲಿ ಅನುತೀರ್ಣರಾಗುತ್ತಿದ್ದಾರೆ. ಇದರಿಂದ ಮಕ್ಕಳಲ್ಲಿ ಕಲಿಕೆಯ ಬಗ್ಗೆ ಭಯ ಹಾಗೂ ಕೀಳರಿಮೆ ಉಂಟಾಗುತ್ತಿದೆ ಎಂದು ಮಾಜಿ ಶಿಕ್ಷಣ ಸಚಿವ ಪ್ರೊ.ಬಿ.ಆರ್.ಚಂದ್ರಶೇಖರ್ ಆತಂಕ ವ್ಯಕ್ತಪಡಿಸಿದರು.
ನಗರದ ಪ್ರವಾಸಿಮಂದಿರದಲ್ಲಿ ಕನ್ನಡ ಸೇನೆ ಕರ್ನಾಟಕ ಜಿಲ್ಲಾ ಘಟಕ ಆಯೋಜಿಸಿದ್ದ ಕನ್ನಡ ಮಾಧ್ಯಮ-ಇಂಗ್ಲಿಷ್ ಭಾಷೆ ಕುರಿತ ವಿಚಾರ ಸಂಕಿರಣ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇಂಗ್ಲಿಷ್‌ನಿಂದ ಆತಂಕ ಸೃಷ್ಟಿ: ಶಿಕ್ಷಣ ವ್ಯವಸ್ಥೆಯಲ್ಲಿ ಮೂರರಿಂದ ನಾಲ್ಕನೇ ತರಗತಿವರೆಗೆ ಇಂಗ್ಲಿಷ್‌ನ್ನು ಒಂದು ಭಾಷೆಯಾಗಿ ಕಲಿಯಲಿ. ಆದರೆ, ಅದಕ್ಕೆ ಪರೀಕ್ಷೆ ಇರಬಾರದು. ಇಂದಿನ ಶಿಕ್ಷಕರು ಇಂಗ್ಲಿಷ್ ಹೇಳಿಕೊಡುತ್ತಿರುವುದನ್ನು ನೋಡಿದರೆ ಮಕ್ಕಳು ಸತ್ತುಹೋಗುತ್ತಾರೆ. ಅದೇನು ಕಲಿತು ಹೇಳಿಕೊಡುತ್ತಾರೋ ಗೊತ್ತಿಲ್ಲ ಎಂದ ಅವರು, ಪ್ರಸ್ತುತ ಅಧಿಕಾರದಲ್ಲಿರುವ ರಾಜ್ಯ ಸರ್ಕಾರದಿಂದಲೂ ಮಾತೃಭಾಷಾ ಶಿಕ್ಷಣಕ್ಕೆ ಒತ್ತುಕೊಡಲು ಸಾಧ್ಯವಿಲ್ಲ. ಕಾರಣ ಬಿಜೆಪಿ ಏನೇ ಮಾಡಬೇಕಾದರೂ ಆರ್‌ಎಸ್‌ಎಸ್ ಆಜ್ಞೆ ಪಾಲಿಸಲೇಬೇಕಾಗುತ್ತದೆ ಎಂದರು.
ಕನ್ನಡದಲ್ಲಿ ಅನ್ನ ಕೊಡುವ ಶಕ್ತಿ: ಪ್ರಾಥಮಿಕ ಶಿಕ್ಷಣ ಮಕ್ಕಳಿಗೆ ಮಾತೃಭಾಷೆಯಲ್ಲೇ ದೊರಕಬೇಕು. ಆನಂತರ ಮಕ್ಕಳು ಯಾವುದೇ ಭಾಷೆಯನ್ನು ಕಲಿಯುವುದಕ್ಕೆ ಅವಕಾಶ ಮಾಡಿಕೊಡಬೇಕು. ಇಂಗ್ಲಿಷ್ ಎಂಬ ಪೆಡಂಭೂತವನ್ನು ಮೊದಲು ತಲೆಯಿಂದ ತೆಗೆದುಹಾಕಬೇಕು. ಇಂಗ್ಲಿಷ್ ಕಲಿಯದಿದ್ದರೆ ಬದುಕೇ ಇಲ್ಲ ಎಂಬಂಥ ವಾತಾವರಣ ಸೃಷ್ಟಿ ಮಾಡಲಾಗುತ್ತಿದೆ. ಕನ್ನಡ ಶ್ರೀಮಂತ ಭಾಷೆಯಾಗಿದ್ದು, ಶಬ್ಧ ಸಂಪತ್ತನ್ನು ತುಂಬಿಕೊಂಡಿರುವ ಭಂಡಾರವಾಗಿದೆ. ಜೀವನವನ್ನು ರೂಪಿಸುವ, ಅನ್ನ ಕೊಡುವ ಶಕ್ತಿ ಕನ್ನಡಕ್ಕಿದೆ. ಇದನ್ನು ಯಾರೂ ಅರ್ಥ ಮಾಡಿಕೊಳ್ಳುತ್ತಲೇ ಇಲ್ಲ. ಕನ್ನಡ ಭಾಷೆಯನ್ನು ಸಮರ್ಥವಾಗಿ ಬಳಸಿಕೊಂಡು ಬದುಕು ಕಟ್ಟಿಕೊಂಡಿರುವವರು ನಮ್ಮ ಕಣ್ಮುಂದೆ ಇದ್ದರೂ ಯಾರೂ ಸಹ ಅವರತ್ತ ತಿರುಗಿ ನೋಡುತ್ತಲೇ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕನ್ನಡ ಸೇನೆ ಕರ್ನಾಟಕ ಜಿಲ್ಲಾ ಘಟಕ ಜಿಲ್ಲಾಧ್ಯಕ್ಷ ಮಂಜುನಾಥ್, ಮಹಿಳಾಧ್ಯಕ್ಷೆ ಸೌಭಾಗ್ಯಶಿವಲಿಂಗು, ನಗರಾಧ್ಯಕ್ಷ ಶಿವಾಲಿ, ಮಂಜುನಾಥ್, ರಾಜು, ಅಸ್ಲಂಪಾಷ, ವಿನಯ್, ಸತೀಶ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.