75 ವರ್ಷದ ಅಜ್ಜಿ ಗ್ರಾಪಂ ಅಧ್ಯಕ್ಷೆ
Team Udayavani, Feb 17, 2021, 2:49 PM IST
ಭಾರತೀನಗರ: ಕೊಕ್ಕರೆ ಬೆಳ್ಳೂರು ಗ್ರಾಪಂ ಅಧ್ಯಕ್ಷರಾಗಿ 75 ವರ್ಷದ ಅಜ್ಜಿಯೊಬ್ಬರು ಆಯ್ಕೆಯಾಗಿದ್ದಾರೆ.
ಕೊಕ್ಕರೆ ಬೆಳ್ಳೂರು ಗ್ರಾಪಂ ಅಧ್ಯಕ್ಷರಾಗಿ ಭೀಮನ ಕೆರೆ ಗ್ರಾಮದ 75 ವರ್ಷದ ಅಜ್ಜಿ ಜಯ ಲಕ್ಷ್ಮಮ್ಮ ಆಯ್ಕೆಯಾಗಿರುವುದು
ಯುವಕರಿಗೆ ಅಚ್ಚರಿ ಮೂಡಿದೆ. ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ 7 ಮೊಮ್ಮಕ್ಕಳಿರುವ ಜಯಲಕ್ಷ್ಮಮ್ಮ ಗ್ರಾಪಂ ಚುನಾವಣೆಯಲ್ಲಿ ಸ್ಪರ್ಧಿಸಿ, 3 ಮತಗಳ ಅಂತರದಲ್ಲಿ ಜಯಗಳಿಸಿದ್ದರು. ಗ್ರಾಪಂ ಅಧ್ಯಕ್ಷರ ಸ್ಥಾನ ಪ.ಜಾ ಮಹಿಳೆಗೆ ಮೀಸಲಾಗಿದ್ದರಿಂದ ಜಯಲಕ್ಷ್ಮಮ್ಮ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. 16 ಸದಸ್ಯರನ್ನು ಹೊಂದಿರುವ ಗ್ರಾಪಂಗೆ ಕಾಂಗ್ರೆಸ್ -ಬಿಜೆಪಿ ಬೆಂಬಲಿತರ 11 ಸದಸ್ಯರ ಬಲದೊಂದಿಗೆ ಜಯ ಲಕ್ಷ್ಮಮ್ಮ ಆಯ್ಕೆಗೊಂಡಿದ್ದಾರೆ.
ಜನರ ಬೆಂಬಲ, ಸದಸ್ಯರ ಸಹಕಾರದಿಂದ ಅಧ್ಯಕ್ಷರಾಗಿದ್ದೇನೆ. ಯಾವುದೇ ಕೆಲಸಕ್ಕೆ ವಯಸ್ಸು ಮುಖ್ಯವಲ್ಲ, ಉತ್ಸಾಹ, ಚೈತನ್ಯ ಮುಖ್ಯ, ಜನರ ಸೇವೆಗೆ ಒಳ್ಳೆಯ ಅವಕಾಶ ಸಿಕ್ಕಿದೆ. –ಜಯಲಕ್ಷ್ಮಮ್ಮ, ಅಧ್ಯಕ್ಷರು, ಕೊಕ್ಕರೆ ಬೆಳ್ಳೂರು ಗ್ರಾಪಂ
ಮಕ್ಕಳು ಶ್ರದ್ಧೆಯಿಂದ ವ್ಯಾಸಂಗ ಮಾಡಿ :
ಕೆ.ಆರ್.ಪೇಟೆ: ಹೆಣ್ಣು ಮಕ್ಕಳು ಜೀವನದಲ್ಲಿ ಸವಾಲು, ಸಮಸ್ಯೆ ಎದುರಿಸಿ ಶ್ರದ್ಧೆಯಿಂದ ವ್ಯಾಸಂಗ ಮಾಡಬೇಕು ಎಂದು ಸರ್ಕಾರಿ ಮಹಿಳಾ ಪದವಿ ಕಾಲೇಜಿನ ವ್ಯವಸ್ಥಾಪಕ ಬಿ.ಎ.ಮಂಜು ನಾಥ್ ತಿಳಿಸಿದರು.
ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾರ್ಯಕ್ರಮದಲ್ಲಿ ಮಾತನಾಡಿ, ಪದವಿ ಶಿಕ್ಷಣವು ವಿದ್ಯಾರ್ಥಿಗಳ ಸಾಧನೆ ಹಾಗೂ ಉಜ್ವಲ ಭವಿಷ್ಯಕ್ಕೆ ಬುನಾದಿ. ಇದರಿಂದ ಪುಸ್ತಕ, ಪತ್ರಿಕೆ ಗಳನ್ನು ಚೆನ್ನಾಗಿ ಓದಿಕೊಂಡು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕು. ಇಂದು ಹೆಣ್ಣು ಮಕ್ಕಳು ಸಮಾಜದ ಶಕ್ತಿಯಾಗಿದ್ದು, ಒಂದು ಕುಟುಂಬ ಸೇರಿದಂತೆ ಸಮಾಜದ ಮುನ್ನಡೆಯಲ್ಲಿಹೆಣ್ಣು ಮಕ್ಕಳ ಪಾತ್ರವು ನಿರ್ಣಾಯಕವಾಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಸಿ. ರಮೇಶ್, ಕಸಾಪ ಮಾಜಿ ಅಧ್ಯಕ್ಷ ಕೆ.ಆರ್.ನೀಲಕಂಠ, ಡಾ.ಟಿ.ಎಂ.ದೇವರಾಜು, ಗ್ರಂಥ ಪಾಲಕಿ ಡಾ.ಪ್ರಮೋದಿನಿ, ಗಾಯತ್ರಮ್ಮ, ನಂಜುಂಡಯ್ಯ, ರಾಜಣ್ಣ, ಧನಂಜಯ, ಶ್ಯಾಂ ಪ್ರಸಾದ್ ಉಪಸ್ಥಿರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.