ಸರ್ಕಲ್ ಇನ್‌ಸ್ಪೆಕ್ಟರ್ ಸೇರಿ ಏಳು ಮಂದಿ ವಿರುದ್ಧ ಪ್ರಕರಣ ದಾಖಲು
Team Udayavani, Dec 11, 2022, 8:01 PM IST
ಶ್ರೀರಂಗಪಟ್ಟಣ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹಿಂದೂ ಕಾರ್ಯಕರ್ತನಿಗೆ ಪೊಲೀಸರು ಬೆದರಿಕೆ ಹಾಕಿದ ಆರೋಪದಡಿ ಸರ್ಕಲ್ ಇನ್‌ಸ್ಪೆಕ್ಟರ್ ಸೇರಿ 7 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕಳೆದ ಭಾನುವಾರ ಸಾವಿರಾರು ಹಿಂದೂ ಕಾರ್ಯಕರ್ತರು ಪಟ್ಟಣದಲ್ಲಿ ಸಂಕೀರ್ತನಾ ಯಾತ್ರೆ ಮೆರವಣಿಗೆ ನಡೆಸಿದ್ದರು. ಮೆರವಣಿಗೆಯ ವೇಳೆ ಗಂಜಾಂ ಗ್ರಾಮದಲ್ಲಿ ಹಿಂದೂ ಕಾರ್ಯಕರ್ತನೋರ್ವ ಬಾಳೆದಿಂಡನ್ನು ಅನ್ಯಕೋಮಿನವರ ಮನೆಯ ಮೇಲೆ ಎಸೆದಿದ್ದ. ಪಾಂಡವಪುರ ಮೂಲದ ಶಶಾಂಕ್ ಎಂಬಾತ ಬಾಳೆದಿಂಡನ್ನು ಎಸೆದಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು, ಇದನ್ನು ಆಧರಿಸಿ ಶ್ರೀರಂಗಪಟ್ಟಣ ಪೊಲೀಸರು ಶಶಾಂಕ್‌ನನ್ನು ಬಂಧಿಸಿ ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದ ವೇಳೆ, ಪೊಲೀಸರು ಶಶಾಂಕ್‌ಗೆ 53 ಮುಸ್ಲಿಂ ರಾಷ್ಟ್ರಗಳಿವೆ. ನಿನ್ನ ರುಂಡ-ಮುಂಡ ಕತ್ತರಿಸುತ್ತಾರೆ ಎಂದು ಬೆದರಿಸಿದ್ದಾರೆ ಎಂದು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಆರೋಪಿಸಿ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು.
ಬೆದರಿಕೆ ಹಾಕಿರುವವರನ್ನು ಸಸ್ಪೆಂಡ್ ಮಾಡಿ, ಎಫ್ಐಆರ್ ದಾಖಲು ಮಾಡಬೇಕೆಂದು ಪಟ್ಟು ಹಿಡಿದಿದ್ದರು. ಸ್ಥಳಕ್ಕಾಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ರವರ ಸಂಧಾನ ಮಾತುಕತೆ ವಿಫಲಗೊಂಡಿತು.
ನಂತರ ಕಾರ್ಯಕರ್ತರು ಜಾಮಿಯಾ ಮಸೀದಿ ಮುಂಭಾಗ ಪೆಂಡಾಲ್ ಹಾಕಿ ಆಹೋರಾತ್ರಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಗೆ ಮಣಿದ ಪೊಲೀಸ್ ಅಧಿಕಾರಿಗಳು ಹಿಂದೂ ಕಾರ್ಯಕರ್ತನಿಗೆ ಬೆದರಿಕೆ ಹಾಕಿದ ಸರ್ಕಲ್ ಇನ್‌ಸ್ಪೆಕ್ಟರ್ ಸೇರಿ 7 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಎಫ್ಐಆರ್ ದಾಖಲು ಮಾಡಲಾಗಿದೆ. ಈ ಹಿನ್ನೆಲೆ ಹಿಂದೂ ಸಂಘಟನೆಗಳು ಪ್ರತಿಭಟನೆ ಕೈ ಬಿಟ್ಟಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.