ಬಾಲಕರ ಪ್ರಾಣ ಉಳಿಸಿದರು…

Team Udayavani, Nov 25, 2018, 6:35 AM IST

181124kpn47.jpg

ಮಂಡ್ಯ: ಕನಗನಮರಡಿ ಸಮೀಪ ವಿಶ್ವೇಶ್ವರಯ್ಯ ನಾಲೆಗೆ ಬಸ್‌ ಉರುಳಿದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಎಂಟು ಮಂದಿ ಯುವಕರ ತಂಡ ರಭಸದಿಂದ ಹರಿಯುತ್ತಿದ್ದ ನೀರನ್ನೂ ಲೆಕ್ಕಿಸದೆ ರಕ್ಷಣಾ ಕಾರ್ಯಕ್ಕಿಳಿಯಿತು. ಕನಗನಮರಡಿಯ ಚಿನ್ನಿರಾಜು,ಅಭಿ, ಮೂರ್ತಿ, ಮಂಜು, ಚೇತನ್‌, ರವಿಕಿರಣ್‌,ಚಂದ್ರಕಾಂತ್‌, ಅಂಗಡಿ ರಾಜು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ರಕ್ಷಣಾ ಕಾರ್ಯದಲ್ಲಿ ತೊಡಗಿ ಇಬ್ಬರು ಮಕ್ಕಳನ್ನು ಪ್ರಾಣಾಪಾಯದಿಂದ ಪಾರು ಮಾಡಿದರು.

ಬಸ್‌ ನಾಲೆಗೆ ಉರುಳುತ್ತಿದ್ದಂತೆ ಪ್ರಯಾಣಿಕರ ಚೀರಾಟ ಕಂಡು ನಾಲೆಯ ಅಕ್ಕಪಕ್ಕದ ಜಮೀನುಗಳಲ್ಲಿ ಕೆಲಸ ಮಾಡುತ್ತಿದ್ದ ಯುವಕರು ಸ್ಥಳಕ್ಕೆ ಓಡಿ ಬಂದರು.

ಅದೇ ಸಮಯಕ್ಕೆ ಬಾಲಕರಿಬ್ಬರು ಬಸ್ಸಿನ ಕಿಟಕಿ ಗಾಜು ಒಡೆದು ಮೇಲೆ ಬರುತ್ತಿದ್ದಂತೆ ಹಗ್ಗ ಕೊಟ್ಟು ನಾಲೆಯ ಮೇಲಕ್ಕೆ ಎಳೆದುಕೊಂಡು ರಕ್ಷಣೆ ಮಾಡಿದರು.

ನಂತರ, ಬಸ್‌ನ ಒಳಗೆ ಸಿಲುಕಿದ್ದವರನ್ನು ಎಳೆಯಲು ಮುಂದಾದರು. ಈ ವೇಳೆ, ಕೆಲವರು ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ತಕ್ಷಣ ಸ್ಥಳಕ್ಕೆ ಆಗಮಿಸುವಂತೆ ಮನವಿ ಮಾಡಿದರು.

ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸುವ ಮುನ್ನವೇ ಬಸ್‌ನಲ್ಲಿ ಸಿಲುಕಿ ಮೃತಪಟ್ಟಿದ್ದವರ ಹಲವರ ಮೃತದೇಹಗಳನ್ನು ಹೊರ ತೆಗೆದಿದ್ದರು. ಈ ನಡುವೆ, ಕೆಲ ಶವಗಳು ನಾಲೆಯಲ್ಲಿ ಕೊಚ್ಚಿ ಹೋಗುತ್ತಿರುವುದನ್ನು ಕಂಡು, ಅವುಗಳನ್ನು ನಾಲೆಯಿಂದ ಮೇಲೆ ತೆಗೆದರು. ಅಷ್ಟರಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ಹಾಗೂ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದರು. ಈಜುಗಾರರು, ಸ್ಥಳೀಯರ ನೆರವಿನಿಂದ ನೀರಿನ ರಭಸಕ್ಕೆ ಬಸ್ಸು ಮುಂದೆ ಸಾಗದಂತೆ ಕಂಬಿಗಳಿಗೆ ಹಗ್ಗದಿಂದ ಬಿಗಿದು ಎಳೆದು ನಿಲ್ಲಿಸಿದರು. ನಂತರ, ಬಸ್ಸಿನ ಕಿಟಕಿ ಹಾಗೂ ಬಾಗಿಲುಗಳಿಂದ ಪ್ರಯಾಣಿಕರ ಒಂದೊಂದೇ ಶವಗಳನ್ನು ಹೊರಕ್ಕೆ ತೆಗೆದರು. ಬಸ್ಸಿನಿಂದ ಹೊರ ತೆಗೆದ ಶವಗಳನ್ನು ಹಗ್ಗದ ಸಹಾಯದಿಂದ ನಾಲೆಯ ದಡಕ್ಕೆ ಸಾಗಿಸಿದರು. ವಿಷಯ ತಿಳಿದು ನೀರಾವರಿ ಇಲಾಖೆಯ ಅಧಿಕಾರಿಗಳು ಶವಗಳನ್ನು ಮೇಲೆತ್ತಲು ಅನುಕೂಲವಾಗುವಂತೆ ನಾಲೆಯಲ್ಲಿ ಹರಿಯುತ್ತಿದ್ದ ನೀರಿನ ಪ್ರಮಾಣವನ್ನು ಕಡಿಮೆ ಮಾಡಿದರು.

ಟಾಪ್ ನ್ಯೂಸ್

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

Agarwal

Vijay Hazare Trophy; ಮಯಾಂಕ್‌ ಅಗರ್ವಾಲ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.