ತಿಪ್ಪೆಗಳ ಸಾಲು, ಬಿಡಾಡಿ ದನ, ಬೀದಿ ನಾಯಿಗಳ ಹಾವಳಿ

ರಸ್ತೆ ಅತಿ ಕ್ರಮವಾಗಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Team Udayavani, Jul 8, 2022, 6:25 PM IST

ತಿಪ್ಪೆಗಳ ಸಾಲು, ಬಿಡಾಡಿ ದನ, ಬೀದಿ ನಾಯಿಗಳ ಹಾವಳಿ

ಮಂಡ್ಯ: ಸಾರ್ವಜನಿಕ ರಸ್ತೆಯಲ್ಲಿ ಹಿತ್ತಲು, ದನದ ಕೊಟ್ಟಿಗೆ, ತಿಪ್ಪೆಗಳ ಸಾಲು, ಮರಳು ಕಲ್ಲುಗಳ ರಾಶಿ, ಎಲ್ಲೆಂದರಲ್ಲಿ ಬೀದಿ ನಾಯಿಗಳ ಹಿಂಡು ಹಾಗೂ ಬಿಡಾಡಿ ದನಗಳು… ಇದು, ಮಂಡ್ಯ ನಗರದಲ್ಲಿನ ಅವ್ಯವಸ್ಥೆ. ನಗರದಲ್ಲಿ ನಾಯಿ ಕೊಡೆಗಳಂತೆ ಕಸದ ರಾಶಿಗಳು ಅಲ್ಲಲ್ಲಿ ಕಂಡು ಬರುತ್ತಿವೆ. ಕಳೆದ 4-5 ದಿನಗಳಿಂದ ಪೌರಕಾರ್ಮಿ ಕರು, ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರು. ಈಗ ಧರಣಿ ಅಂತ್ಯಗೊಂಡಿದೆ. ಆದರೆ, ನಗರಸಭೆ ಅಧಿಕಾರಿಗಳು ಕಸ ವಿಲೇವಾರಿಗೆ ಇನ್ನೂ ಕ್ರಮ ಕೈಗೊಂಡಿಲ್ಲ.

ರಸ್ತೆಗಳಲ್ಲಿ ತಿಪ್ಪೆಗುಂಡಿ: ನಗರಸಭೆ ವಿವಿಧ ವಾರ್ಡ್ ಗಳಲ್ಲಿ ಸಾರ್ವಜನಿಕರು ಮನೆಗಳ ಎದುರಿನ ರಸ್ತೆಯಲ್ಲಿ ಹೂವಿನ ಗಿಡ, ನುಗ್ಗೆ ಮರ, ತರಕಾರಿ ಬಳ್ಳಿ, ಅಲಂಕಾರಿಕ ಗಿಡ ಬೆಳೆಸಿ ಹಿತ್ತಲು ಮಾಡಿಕೊಂಡಿ¨ªಾರೆ. ಹಲವು ರಸ್ತೆಗಳಲ್ಲಿ ಎಮ್ಮೆ, ದನಗಳನ್ನು ಕಟ್ಟಿ ಹಾಕುತ್ತಿದ್ದಾರೆ. ಕೆಲವು ಕಡೆ ರಸ್ತೆಯನ್ನು ತಿಪ್ಪೆಗುಂಡಿ ಮಾಡಿಕೊಂಡಿದ್ದಾರೆ. ದನಗಳ ಹಾವಳಿ: ಎಮ್ಮೆ, ದನಗಳನ್ನೂ ರಸ್ತೆಗೆ ಬಿಡಲಾ ಗುತ್ತಿದೆ. ಅಲ್ಲದೆ, ಕಸದಲ್ಲಿ ಆಹಾರ ಹುಡುಕುತ್ತಾ ಕಸ ವನ್ನು ರಸ್ತೆಗೂ ಚೆಲ್ಲುತ್ತಿವೆ. ಜತೆಗೆ ವಾಹನಗಳಿಗೂ ಅಡ್ಡ ಬರುತ್ತಿದ್ದು ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿವೆ.

ಮರಳು, ಕಲ್ಲುಗಳ ರಾಶಿ: ಅದೇ ರೀತಿ ಮನೆ ನಿರ್ಮಾಣದ ವೇಳೆ ಮರಳು, ಕಲ್ಲು, ಇಟ್ಟಿಗೆಗಳನ್ನು ರಸ್ತೆಯಲ್ಲಿ ಹಾಕಲಾಗಿದೆ. ನಗರದ ಬಹುತೇಕ ಕಡೆ ಮರಳು ಕಲ್ಲುಗಳ ರಾಶಿ ಕಂಡು ಬರುತ್ತಿವೆ. ಹಲವು ಬಡಾವಣೆಗಳ ರಸ್ತೆಗಳಲ್ಲಿ ಇಂಥ ಸನ್ನಿವೇಶ ಎದುರಾಗಿರುವುದರಿಂದ ರಸ್ತೆ ಅತಿ ಕ್ರಮವಾಗಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತೆರವಿಗೆ ಆಗ್ರಹ: ಮನೆ ಎದುರಿನ ರಸ್ತೆಯ ಹಿತ್ತಲು, ಮರಳು ಕಲ್ಲು, ದನದ ಕೊಟ್ಟಿಗೆ, ತಿಪ್ಪೆಗುಂಡಿ ತೆರವು ಮಾಡಬೇಕು. ಎಮ್ಮೆ ದನಗಳನ್ನು ಬೀದಿಗೆ ಬಿಡುವವರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಬೀದಿನಾಯಿ ಹಾವಳಿ: ಸಣ್ಣಪುಟ್ಟ ರಸ್ತೆಗಳಲ್ಲೂ ನಾಯಿಗಳ ಹಿಂಡು ಕಾಣಬಹುದು. ಹಲವು ಕಡೆ ಮಕ್ಕಳ ಮೇಲೆ ನಾಯಿಗಳ ಗುಂಪು ದಾಳಿ ಮಾಡಿದ್ದು, ದಾರಿ ಹೋಕರು, ಸವಾರರನ್ನು ಕಚ್ಚುತ್ತಿವೆ. ಜತೆಗೆ ವಾಹನ ಬೆನ್ನಟ್ಟುತ್ತಿದ್ದು ಇದರಿಂದ ಕೆಳಗೆ ಬಿದ್ದು ಸವಾರರು ಗಾಯಗೊಳ್ಳುತ್ತಿದ್ದಾರೆ. ಪ್ರಾಣಿ ದಯಾ ಸಂಘದವರು ಮೊಕದ್ದಮೆ ದಾಖಲಿಸುತ್ತಾರೆ ಎಂಬ ಭೀತಿ ತೊರೆದು ಪರ್ಯಾಯ ಕ್ರಮದ ಮೂಲಕ ಬೀದಿ ನಾಯಿಗಳ ಹಾವಳಿ ತಡೆಗೆ ನಗರಸಭೆ ತುರ್ತು ಕ್ರಮ ವಹಿಸಬೇಕಾಗಿದೆ ಎಂದು ರಾಜ್ಯ ಮಾನವ ಹಕ್ಕುಗಳ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎಲ್‌.ತುಳಸೀಧರ್‌ ಕಿಡಿಕಾರಿದ್ದಾರೆ.

ಬೀದಿ ನಾಯಿ ಹಾವಳಿ ತಪ್ಪಿಸಿ
ಪ್ರಾಣಿ ದಯಾ ಸಂಘಗಳ ಸಲಹೆ ಪಡೆದು ಬೀದಿ ನಾಯಿ ಹಾವಳಿ ತಡೆಗೆ ನಗರಸಭೆ ಕ್ರಮ ವಹಿಸಬೇಕು ಎಂದು ನಾಗರಿಕರ ಹಿತಾಸಕ್ತಿ ಸಮಿತಿ ಅಧ್ಯಕ್ಷ ಎಸ್‌.ಸಿ.ಮಧುಚಂದನ್‌ ಒತ್ತಾಯಿಸಿದರು. ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಇದನ್ನು ತಡೆಗಟ್ಟುವ ವಿಫಲವಾಗಿರುವ ನಗರಸಭೆ ಆಡಳಿತ ಮಂಡಳಿ ತಕ್ಷಣ ಕ್ರಮ ವಹಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಮಕ್ಕಳ ಮೇಲೆ ದಾಳಿ ನಡೆಸಿದ ಉದಾಹರಣೆ ಕಣ್ಣ ಮುಂದೆ ಇವೆ. ರಾತ್ರಿ ವೇಳೆ ಓಡಾಡುವ ಸಾರ್ವಜನಿಕರ ಮೇಲೂ ದಾಳಿ ಮಾಡುತ್ತಿರುವ ಘಟನೆ ಹೆಚ್ಚುತ್ತಲೇ ಇವೆ. ಇಷ್ಟಿದ್ದರೂ ನಗರಸಭೆ ಮಾತ್ರ ಯಾವುದೇ ಕ್ರಮ ವಹಿಸುತ್ತಿಲ್ಲ ಎಂದು ಕಿಡಿಕಾರಿದರು.

ಗುಂಡಿ ಸರಿಪಡಿಸಿ: ನಗರದ ಬಹುತೇಕ ರಸ್ತೆ ಹಳ್ಳ ಬಿದ್ದಿವೆ.ವಾಹನ ಸವಾರರು ಪರದಾಡುವ ಸ್ಥಿತಿಯಿದೆ. ಅದನ್ನೂ ಮುಚ್ಚುವ ಕೆಲಸ ಮಾಡಬೇಕು. ಒಂದು ತಿಂಗಳ ಗಡುವು ನೀಡುತ್ತಿದ್ದೇವೆ. ಇಲ್ಲವಾದರೆ ನಗರ ನಾಗರಿಕರ ಹಿತಾಸಕ್ತಿ ಸಮಿತಿಯಿಂದ ನಗರಸಭೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು. ಜಗದೀಶ್‌, ಮಂಜೇಶ್‌, ರಘು, ಮನ್ಸೂರ್‌, ಹಾಲಹಳ್ಳಿ ಮಹೇಶ್‌, ಸಿದ್ದಲಿಂಗ, ಶಶಿಧರ್‌ ಇದ್ದರು.

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

1-reee

Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.