ಆರ್ಆರ್ಟಿ ಶಾಖೆ ಗುಮಾಸ್ತ ಎಸಿಬಿ ಬಲೆಗೆ
Team Udayavani, Feb 6, 2021, 4:01 PM IST
ಶ್ರೀರಂಗಪಟ್ಟಣ: ತಾಲೂಕು ಕಚೇರಿಯ ಆರ್ಆರ್ಟಿ ಶಾಖೆ ಗುಮಾಸ್ತ ಪಿ. ಮಂಜುನಾಥ ಲಂಚ ಸ್ವೀಕಾರ ಮಾಡುವ ವೇಳೆ ಶುಕ್ರವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ.
ತಾಲೂಕಿನ ಚಂದಗಿರಿಕೊಪ್ಪಲು ಗ್ರಾಮದ ಧರಣೇಂದ್ರಕುಮಾರ್ ಎಂಬವರಿಂದ ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದರು.ಮಂಡ್ಯ ಎಸಿಬಿ ಡಿವೈಎಸ್ಪಿ ಧರ್ಮೇಂದ್ರ, ಸಿಪಿಐ ಸತೀಶ್, ರವಿಶಂಕರ್ ಹಾಗೂ ಸಿಬ್ಬಂದಿ ಲಂಚದ ಹಣದ ಸಹಿತ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಶ್ರೀರಂಗಪಟ್ಟಣ ತಾಲೂಕು ನಾಗರೀಕರ ಹಿತರಕ್ಷಣ ವೇದಿಕೆ ವತಿಯಿಂದ ಮಂಡ್ಯ ಎಸಿಬಿಗೆ ನೀಡಿದ್ದ ದೂರಿನ ಅನ್ವಯ ಎಸಿಬಿ ಅಧಿಕಾರಿಗಳು ತಾಲೂಕು ಕಚೇರಿಗೆ ದಾಳಿ ಮಾಡಿ ತನಿಖೆ ಕೈಗೊಂಡರು.ತಾಲೂಕಿನ ಚಿಂದಗಿರಿಕೊಪ್ಪಲು ಗ್ರಾಮದ ರೈತ ಧರಣೀಶ್ ಅವರು ಜಮೀನಿನ ಕಾರ್ಯನಿಮ್ಮತ್ತ ಕಂದಾಯ ಇಲಾಖೆಯ ರೂಂ ನಂ 9 ರಲ್ಲಿ ಮಂಜುನಾಥ್ ಎಂಬ ಅಧಿಕಾರಿ ಕೆಲಸ ಮಾಡಿಕೊಡಲು 3 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಲ್ಲದೇ, ಫೋನ್ ಮೂಲಕವೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನು ದೂರುದಾರ ರೈತ, ಫೋನ್ ಕರೆ ದಾಖಲಿಸಿ ನಾಗರೀಕ ಹಿತರಕ್ಷಣಾ ವೇದಿಕೆಯೊಂದಿಗೆ ಎಸಿಬಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು.
ಇದನ್ನೂ ಓದಿ :15 ಸಾವಿರ ಕೋಟಿ ಅನುದಾನ ಮೀಸಲಿಡಿ: ಶ್ರೀರಾಮ್
ವೇದಿಕೆ ಅಧ್ಯಕ್ಷ ಚಂದನ್, ಕಾರ್ಯದರ್ಶಿ ಮದನ್ರಾವ್, ಸದಸ್ಯರಾದ ರವಿ, ಹೇಮಂತ್, ಪ್ರವೀಣ್, ಶ್ಯಾಂ ರಾವ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.