![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Apr 25, 2022, 2:36 PM IST
ಭಾರತೀನಗರ: ಇಲ್ಲಿಗೆ ಸಮೀಪದ ಛತ್ರದ ಹೊಸಹಳ್ಳಿ ಗೇಟ್ ಬಳಿ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಧಾರುಣ ಘಟನೆ ಭಾನುವಾರ ನಡೆದಿದೆ.
ಮೃತಪಟ್ಟವರು: ಬೋರಾಪುರದಿಂದ ಚಿಕ್ಕರಸಿನಕೆರೆಗೆ ಬಳೆ ವ್ಯಾಪಾರ ಮಾಡಲು ಬೈಕ್‌ನಲ್ಲಿ ಬರುತ್ತಿದ್ದ ಕಾವ್ಯಾ(16), ರಕ್ಷಿತಾ(18) ಮೃತ ದುರ್ಧೈವಿಗಳು.
ಕಾವೇರಯ್ಯ(20) ಅವರು ತೀವ್ರವಾಗಿ ಗಾಯಗೊಂಡು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಮೂಲತಃ ಬೋರಾಪುರದ ನಿವಾಸಿಗಳಾಗಿದ್ದು ಒಂದೇ ಕಾಲೋನಿಯವರು ಆಗಿದ್ದರು.
ಪ್ರತಿ ನಿತ್ಯ ಬಳೆ ವ್ಯಾಪಾರ ಮಾಡಲು ಚಿಕ್ಕರಿಸಿನಕೆರೆಗೆ ಹೋಗುವಾಗ ಛತ್ರದ ಹೊಸಹಳ್ಳಿ ಗೇಟ್ ಬಳಿ ಈ ದುರ್ಘಟನೆ ಸಂಭವಿಸಿದೆ.
ಶಾಸಕರಿಂದ ಸಾಂತ್ವನ: ಸ್ಥಳಕ್ಕೆ ಶಾಸಕ ಡಿ.ಸಿ.ತಮ್ಮಣ್ಣ ಭಾರತೀನಗರದ ಸಮುದಾಯ ಆರೋಗ್ಯಕ್ಕೆ ಕೇಂದ್ರಕ್ಕೆ ಭೇಟಿ ನೀಡಿ ಮೃತಪಟ್ಟ ಕುಟುಂಬದವರಿಗೆ ಸಾಂತ್ವನ ಹೇಳಿ ಶವಗಳ ಪಂಚನಾಮೆ ನಡೆಸಿ ವಾರಸುದಾರರಿಗೆ ಶೀಘ್ರವಾಗಿ ಒಪ್ಪಿಸುವಂತೆ ಸೂಚಿದರು.
ಭಾರತೀನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಆಸ್ಪತ್ರೆ ವೈದ್ಯಾಧಿಕಾರಿಗಳು ಶವಗಳನ್ನು ಒಪ್ಪಿಸಿದ್ದಾರೆ. ಈ ಸಂಬಂಧ ಕೆ.ಎಂ.ದೊಡ್ಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.
ಶಾಸಕರ ಸಾಂತ್ವನ; ಕುಟುಂಬಕ್ಕೆ ತಲಾ 20 ಸಾವಿರ ರೂ. ನೆರವು : ಭಾರತೀನಗರ: ಇಲ್ಲಿಗೆ ಸಮೀಪದ ಛತ್ರದ ಹೊಸಹಳ್ಳಿ ಗೇಟ್‌ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟವರ ಕುಟುಂಬದವರಿಗೆ ಶಾಸಕ ಡಿ.ಸಿ.ತಮ್ಮಣ್ಣ ಸಾಂತ್ವನ ಹೇಳಿದರು. ಭಾರತೀನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಡಿ.ಸಿ.ತಮ್ಮಣ್ಣ ಭೇಟಿ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ ಮೃತರ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ತಲಾ 20 ಸಾವಿರ ರೂ. ಪರಿಹಾರ ನೀಡಿದರು.
ನಂತರ ಮಾತನಾಡಿದ ಅವರು, ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿವೆ. ವಾಹನ ಸವಾರರು ಅತಿವೇಗವಾಗಿ ವಾಹನ ಚಲಾಯಿಸುತ್ತಿರು ವುದೇ ಸಾವಿಗೆ ಕಾರಣ ಎಂದು ಹೇಳಿದರು.
ಮುಗಿಲು ಮುಟ್ಟಿದ್ದ ಪೋಷಕರ ಆಕ್ರಂದನ: ಕುಟುಂಬಕ್ಕೆ ಆಧಾರವಾಗಿದ್ದ ಮಕ್ಕಳಾದ 16 ವರ್ಷದ ಕಾವ್ಯಾ, 18 ವರ್ಷದ ರಕ್ಷಿತಾ ಅವರು ಸ್ಥಳದಲ್ಲೇ ಮೃತಪಟ್ಟಿರುವುದರಿಂದ ಕುಟುಂಬಸ್ಥರು ಆತಂಕಕ್ಕೀಡಾಗಿದ್ದಾರೆ. ಕಾವೇರಯ್ಯ ಅವರೂ ತೀವ್ರವಾಗಿ ಗಾಯಗೊಂಡು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ನಾವು ನೊಂದ ಕುಟುಂಬದ ಜತೆ ಸದಾ ಇರುತ್ತೇವೆ ಎಂದು ಶಾಸಕರು ಭರವಸೆ ನೀಡಿದರು. ಈ ವೇಳೆ ಕುಟುಂಬಸ್ಥರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.