ಸಕಾಲ ಪರಿಣಾಮಕಾರಿ ಜಾರಿಗೆ ಕ್ರಮ
Team Udayavani, Nov 28, 2020, 1:03 PM IST
ಮಂಡ್ಯ: ನಾಗರಿಕರಿಗೆ ನಿಗದಿತ ಕಾಲಮಿತಿಯಲ್ಲಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಸಕಾಲ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ಸಕಾಲ ಅರ್ಜಿಗಳು ಹಾಗೂ ಮೇಲ್ಮನವಿಗಳನ್ನು ತ್ವರಿತ ವಿಲೇವಾರಿ ಮಾಡಲು ನ.30ರಿಂದ ಡಿ.19ವರೆಗೆ ಸಕಾಲ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ವಿ.ಆರ್.ಶೈಲಜಾ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದ 98 ಇಲಾಖೆಗಳಲ್ಲಿ 1025 ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತರಲಾಗಿದೆ. ಸಾರ್ವಜನಿಕರಿಗೆ ಸಕಾಲ ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿ ನೀಡಿ ಜಾಗೃತಿ ಮೂಡಿಸುವ ಉದ್ದೇಶ ಇದಾಗಿದೆ ಎಂದರು.
ನ.30ರಿಂದ ಸಪ್ತಾಹ: ನ.30ರಿಂದ ಡಿ.5ರವರೆಗೆ ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಸಾರಿಗೆ ಇಲಾಖೆ ಒಳಗೊಂಡಂತೆನಾಲ್ಕು ಇಲಾಖೆಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಲೇವಾರಿ, ಡಿ.7ರಿಂದ11ರವರೆಗೆ ಗ್ರಾಮೀಣಾಭಿವೃದ್ಧಿಇಲಾಖೆಗೆ ಸಂಬಂಧಿಸಿದಂತೆ ಪ್ರಕರಣಗಳ ವಿಲೇವಾರಿ ಹಾಗೂ ಡಿ.14ರಿಂದ 19ರವರೆಗೆ ಸಕಾಲ ವ್ಯಾಪ್ತಿಗೆ ಒಳಪಡುವ ಉಳಿದ ಎಲ್ಲ ಸರ್ಕಾರಿ ಇಲಾಖೆಗಳ ಪ್ರಕರಣಗಳ ಅರ್ಜಿ ವಿಲೇವಾರಿಗಳ ಕುರಿತಂತೆ ಸಪ್ತಾಹ ಆಚರಿಸಲಾಗುವುದು ಎಂದು ತಿಳಿಸಿದರು.
ಸಕಾಲದಡಿಯೇ ಅರ್ಜಿ ಸ್ವೀಕರಿಸಿ: ಸಪ್ತಾಹದಲ್ಲಿ ಹೊಸ ಅರ್ಜಿ ಸ್ವೀಕಾರ, ವಿಲೇವಾರಿ ಒಳಗೊಂಡಂತೆ ಅವಧಿ ಮೀರಿ ಬಾಕಿ ಉಳಿಸಿಕೊಂಡ ಅರ್ಜಿಗಳ ವಿಲೇವಾರಿ ಮಾಡಬೇಕು. ಸಂಬಂಧಿಸಿದ ಇಲಾಖೆಗಳಲ್ಲಿ ಸಕಾಲದಡಿ ಸ್ವೀಕೃತಿಯಾಗಿರುವ ಅರ್ಜಿಗಳ ವಿಲೇವಾರಿಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಂದ ಬರುವ ಅರ್ಜಿಗಳನ್ನು ಸಕಾಲದಡಿಯಲ್ಲಿಯೇ ನೋಂದಾಯಿಸಿಕೊಳ್ಳಬೇಕು. ಕೆಲವು ಇಲಾಖೆಗಳಲ್ಲಿ ಸಕಾಲದಡಿ ಅರ್ಜಿ ಸ್ವೀಕರಿಸದಿರುವುದು ಕಂಡು ಬರುತ್ತಿದೆ. ಅಂಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಾರ್ವಜನಿಕರಿಗೆ ಜಾಗೃತಿ: ಹೊಸದಾಗಿ ಸ್ವೀಕರಿಸಿದ ಅರ್ಜಿಗಳನ್ನು ಸಪ್ತಾಹದಲ್ಲಿಯೇ ವಿಲೇವಾರಿ ಮಾಡಬೇಕು. ಸಕಾಲ ಸಪ್ತಾಹಕಾರ್ಯಕ್ರಮಕುರಿತಂತೆ ವ್ಯಾಪಕ ಪ್ರಚಾರ ಕಾರ್ಯಗಳನ್ನು ಕೈಗೊಳ್ಳಬೇಕು. ಸಕಾಲಯೋಜನೆಕುರಿತಂತೆ ಸಾರ್ವಜನಿಕರಿಗೆ ಮಾಹಿತಿ ಮತ್ತು ಜಾಗೃತಿ ಮೂಡಿಸಬೇಕು. ಆಯಾ ಇಲಾಖೆಗಳು ಕಡ್ಡಾಯವಾಗಿ ಸಪ್ತಾಹ ಅಂಗವಾಗಿ ಇಲಾಖೆಯ ಸೇವೆಗಳು ಹಾಗೂ ವಿಲೇವಾರಿ ಸಮಯ ಕುರಿತಂತೆ ಮಾಹಿತಿ ಒಳಗೊಂಡ ನಾಮಫಲಕಗಳನ್ನುಕಚೇರಿಗಳಲ್ಲಿ ಅಳವಡಿಸಬೇಕು. ಕಚೇರಿಯ ಪ್ರವೇಶ ದ್ವಾರದಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪಿಸಿ ಜನರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು. ವಾರ್ತಾಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಟಿ.ಕೆ.ಹರೀಶ್ ಸೇರಿದಂತೆವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ತಪಾಸಣೆಗೆ ತಂಡ ರಚನೆ : ಜಿಲ್ಲಾ ಮಟ್ಟದಲ್ಲಿ 4 ತಪಾಸಣೆ ತಂಡಗಳನ್ನು ರಚಿಸಿ ಸಪ್ತಾಹದಲ್ಲಿ ಅರ್ಜಿಗಳ ವಿಲೇವಾರಿ ಕ್ರಮಗಳ ತಪಾಸಣೆಕೈಗೊಳ್ಳಲಾಗುವುದು. ಪ್ರತಿನಿತ್ಯದ ಸಕಾಲ ವಿಲೇವಾರಿ ಪ್ರಕರಣಗಳು, ಚಟುವಟಿಕೆಗಳ ಕುರಿತಂತೆ ನಿಗಾ ವಹಿಸಲಿದ್ದು, ಆಯ್ದ ಕಚೇರಿಗಳಿಗೆ ಭೇಟಿ ನೀಡಲಿದ್ದಾರೆ. ಅಲ್ಲದೇ ಜಿಲ್ಲಾಧಿಕಾರಿಗಳು ಸಹ ಕಚೇರಿಗಳಿಗೆ ಭೇಟಿ ನೀಡಿ ಸಪ್ತಾಹದ ಚಟುವಟಿಕೆ ಕುರಿತಂತೆ ತಪಾಸಣೆ ನಡೆಸಲಿದ್ದಾರೆ ಎಂದರು.
ಸರ್ವೋತ್ತಮ ಸೇವಾ ಪ್ರಶಸ್ತಿ : ಸಕಾಲದಡಿ ಉತ್ತಮವಾಗಿ ಸೇವೆ ಒದಗಿಸುವ ಅಧಿಕಾರಿಗಳನ್ನು ಗುರುತಿಸಿ ಬಾರಿಯಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಲು ಶಿಫಾರಸು ಮಾಡಲಾಗುವುದು. ಸಕಾಲದಡಿ ದೊರೆಯುವ ಸೇವೆಗಳಡಿ ಸಾರ್ವಜನಿಕರು ಅರ್ಜಿ ಸಲ್ಲಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.