ಮೂಡಲಕೊಪ್ಪಲು ಸರ್ಕಾರಿ ಪ್ರೌಢಶಾಲೆ ದತ್ತು


Team Udayavani, Mar 22, 2022, 3:40 PM IST

ಮೂಡಲಕೊಪ್ಪಲು ಸರ್ಕಾರಿ ಪ್ರೌಢಶಾಲೆ ದತ್ತು

ಪಾಂಡವಪುರ: ಮೂಡಲಕೊಪ್ಪಲು ಸರ್ಕಾರಿ ಪ್ರೌಢಶಾಲೆಯನ್ನು ದತ್ತುಪಡೆದು ಮಾದರಿಯಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಸಿ.ಎಸ್‌ .ಪುಟ್ಟರಾಜು ಹೇಳಿದರು.

ತಾಲೂಕಿನ ಮೂಡಲಕೊಪ್ಪಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ನಡೆದ ಶಾರದ ಪೂಜೆ ಮತ್ತು ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಬೀಳ್ಕೊಡುಗೆ ಸಮಾ ರಂಭದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಮೂಡಲಕೊಪ್ಪಲು ಸರ್ಕಾರಿ ಪ್ರೌಢಶಾಲೆಯೂ ಉತ್ತಮ ಪರಿಸರದೊಂದಿಗೆ ಕೂಡಿದೆ. ಇಲ್ಲಿನ ಶಿಕ್ಷಕರು ಸಹ ಕ್ರಿಯಾಶೀಲರಾಗಿದ್ದಾರೆ. ಇಂತಹ ಪ್ರೌಢಶಾಲೆಗಳನ್ನು ಅಭಿವೃದ್ಧಿಪಡಿಸಿ ಇಲ್ಲಿನ ಮಕ್ಕಳ ಶೈಕ್ಷಣಿಕ ಪ್ರಗತಿಗೆ ನೆರವು ನೀಡುವುದು ಶಾಸಕರಾದ ನಮ್ಮ ಕತ್ಯರ್ವವಾಗಿದೆ. ಹಾಗಾಗಿ ಈ ಸರ್ಕಾರಿ ಪ್ರೌಢಶಾಲೆಯನ್ನು ದತ್ತುಪಡೆದು ಈ ತಾಲೂಕಿನಲ್ಲಿಯೇ ಮಾದರಿ ಆಗಿ ಅಭಿವೃದ್ಧಿಪಡಿಸ ಲಾಗುವುದು ಎಂದು ಭವರಸೆ ನೀಡಿದರು.

ವೈಯಕ್ತಿಕ ನೆರವು: ವಿಧಾನಸಭೆ ಕಲಾಪ ನಡೆಯುತ್ತಿರುವುದರಿಂದ ಮುಂದಿನ ವಾರದಲ್ಲಿ ಶಾಲೆಯಲ್ಲಿ ಗ್ರಾಪಂ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರೊಡನೆ ಸಭೆ ನಡೆಸಿ ಶಾಲೆಯ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಗುವುದು. ಸರ್ಕಾರದ ಅನುದಾನದ ಜತೆಗೆ ನನ್ನ ವೈಯಕ್ತಿಕವಾಗಿಯೂ ನೆರವು ನೀಡಿ ಅಭಿವೃದ್ಧಿಪಡಿಸಲಾಗುವುದು ಎಂದು ವಿವರಿಸಿದರು.

ಶಾಲೆಯ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯ ಸಾಮಗ್ರಿಗಳಿಗಾಗಿ ಮನವಿ ನೀಡಿದ್ದಾರೆ. ಕ್ರೀಡಾಚಟುವಕೆ ಸೇರಿ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡುವ ಭರವಸೆ ನೀಡಿದರು.

ಜ್ಞಾನಾರ್ಜನೆಗಾದ್ರೂ ವಿದ್ಯಾಭ್ಯಾಸ ಮಾಡಿಸಿ: ಮೈಸೂರಿನ ಮಹಾಜನ ಪ್ರಥಮ ದರ್ಜೆಕಾಲೇಜಿನ ಪ್ರಾಂಶುಪಾಲೆ ಡಾ.ಬಿ.ಜಯಕುಮಾರಿ ಮಾತನಾಡಿ, ಓದುವ ವಯಸ್ಸಿನಲ್ಲಿ ವಿದ್ಯಾರ್ಥಿಗಳು ಪ್ರೀತಿ, ಪ್ರೇಮ, ಮದುವೆ ಮಾಡಿಕೊಳ್ಳುವ ಕಡೆಗೆ ಗಮನ ಹರಿಸಬಾರದು. ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ಹೆಣ್ಣು ಮಕ್ಕಳಿಗೆ ಪೋಷಕರು ಬೇಗನೆ ಮದುವೆ ಮಾಡಿ ಕಳುಹಿಸಿಬಿಡುತ್ತಾರೆ. ಹೆಣ್ಣು ಮಕ್ಕಳು ಕೆಲಸಕ್ಕೆ ಸೇರಬೇಕು ಎನ್ನುವುದಕ್ಕಿಂತ ತಮ್ಮ ಜ್ಞಾನಾರ್ಜನೆಗಾದರೂ ವಿದ್ಯಾಭ್ಯಾಸ ಮಾಡಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳು ಓದುವ ಕಡೆಗೆ ಏಕಾಗ್ರತೆವಹಿಸಬೇಕು. ವಿದ್ಯಾರ್ಥಿಗಳಿಗೆ ಏಕಾಗ್ರತೆ ಇಲ್ಲದೆ ಹೋದರೆ ಯಾವುದೇ ಕೆಲಸವನ್ನು ಮಾಡಲು ಸಾಧ್ಯವಿಲ್ಲ. ಜೊತೆಗೆ ಗುರಿ ಮುಟ್ಟಲು ಸಾಧ್ಯವಿಲ್ಲ ಎಂದು ಹೇಳಿದರು.

ಪೌರಕಾರ್ಮಿಕರ ಮಕ್ಕಳಿಗೆ ನೆರವಾಗಿ: ಈ ವೇಳೆ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿರುವ ಪೌರ ಕಾರ್ಮಿಕರ ಮಕ್ಕಳಿಗೆ ಸ್ವಂತ ಮನೆ ಇಲ್ಲದೆ ಗುಡಿಸಲಿನಲ್ಲಿ ವಾಸಿಸುತ್ತ ಓದುಲು ಸಾಧ್ಯವಾಗದೆ ಕಷ್ಟಪಡುತ್ತಿರುವ ಹಳೇಬೀಡು ಗ್ರಾಮದ ಪೌರ ಕಾರ್ಮಿಕರ ಮಕ್ಕಳಾದ ಅಶೋಕ್‌ ಮತ್ತು ಪಲ್ಲವಿಗೆ ಶಾಸಕರು ನೆರವಾಗಬೇಕು ಎಂದು ಶಿಕ್ಷಕರು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಸಿ.ಎಸ್‌.ಪುಟ್ಟರಾಜು ಅಶೋಕ್‌ ಮತ್ತು ಪಲ್ಲವಿ ಎಂಬ ವಿದ್ಯಾರ್ಥಿಗಳನ್ನು ಕರೆಯಿಸಿ ಮಾತನಾಡಿ, ಇಬ್ಬರು ಮಕ್ಕಳನ್ನು ತಮ್ಮ ಎಸ್‌ಟಿಜಿ ಶಿಕ್ಷಣ ಸಂಸ್ಥೆಯಲ್ಲಿ ಉಚಿತವಾಗಿ ವಿದ್ಯಾಭ್ಯಾಸಕ್ಕೆ ಅವಕಾಶ ಒದಗಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪ್ರೊ.ಎಚ್‌.ಆರ್‌.ತಿಮ್ಮೇಗೌಡ, ನಿವೃತ್ತ ಜಂಟಿ ನಿರ್ದೇಶಕ ಮರಿಸ್ವಾಮೀಗೌಡ, ಡಯಟ್‌ ಪ್ರಾಂಶುಪಾಲ ಶಿವಮಾದಪ್ಪ, ಬಿಇಒ ಜಿ.ಎಸ್‌. ಲೋಕೇಶ್‌, ಶ್ರೀನಿವಾಸ್‌, ಬಿಆರ್‌ಸಿ ತಿಮ್ಮರಾಯಿಗೌಡ, ಗ್ರಾಪಂ ಅಧ್ಯಕ್ಷೆ ಸೌಭಾಗ್ಯಮ್ಮ, ಉಪಾಧ್ಯಕ್ಷ ಪದ್ಮರಾಜ್‌, ಸದಸ್ಯ ಧನಂಜಯ್‌, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎಂ.ಡಿ.ಮರೀಸ್ವಾಮೀಗೌಡ, ಟಿಎಚ್‌ಒ ಡಾ.ಸಿ.ಎ.ಅರವಿಂದ್‌, ಎಸ್‌ಡಿಎಂಸಿ ಅಧ್ಯಕ್ಷ ಜಗದೀಶ್‌, ಮೂಡಲಕೊಪ್ಪಲು ಮುಖ್ಯ ಶಿಕ್ಷಕ ಲಿಂಗರಾಜು, ಆರ್‌ .ಸಿ.ನಾಗೇಗೌಡ, ಗೋಪಾಲಗೌಡ, ಜಯರಾಮು, ಚಂದ್ರಶೇಖರ್‌, ಮುಖಂಡರಾದ ಹೊಸಕೋಟೆ ಪುಟ್ಟಣ್ಣ, ಕುಳ್ಳೇಗೌಡ, ಪಿಡಿಒ ರಾಜೇಂದ್ರ, ಗ್ರಾಪಂ ಮಾಜಿ ಅಧ್ಯಕ್ಷ ಕರೀಗೌಡ ಸೇರಿದಂತೆ ಹಲವರು ಹಾಜರಿದ್ದರು.

ಟಾಪ್ ನ್ಯೂಸ್

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.