6, 7ರಂದು ವಿ.ಸಿ.ಫಾರಂನಲ್ಲಿ ಕೃಷಿ ಮೇಳ
Team Udayavani, Dec 4, 2019, 1:38 PM IST
ಮಂಡ್ಯ: ವಿ.ಸಿ.ಫಾರಂ ವಲಯ ಕೃಷಿ ಸಂಶೋಧನಾ ಕೇಂದ್ರದಲ್ಲಿ ಡಿ.6,7ರಂದು ಕೃಷಿಮೇಳ-2019 ಆಯೋಜಿಸಲಾಗಿದೆ ಎಂದು ಕೃಷಿ ಮಹಾವಿದ್ಯಾಲಯದ ಡೀನ್(ಕೃಷಿ) ಡಾ.ವೆಂಕಟೇಶ್ ತಿಳಿಸಿದರು.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ವಲಯ ಕೃಷಿ ಸಂಶೋಧನಾ ಕೇಂದ್ರ, ಕೃಷಿ ಮಹಾವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ “ಸುಸ್ಥಿರ ಕೃಷಿಗೆ ನೀರಿನ ಸದ್ಭಳಕೆ‘ ಶೀರ್ಷಿಕೆಯಡಿ ಕೃಷಿಮೇಳ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಉದ್ಘಾಟನೆ: 6ರಂದು ಬೆಳಗ್ಗೆ 10ಗಂಟೆಗೆ ಕೃಷಿಮೇಳ ಮತ್ತು ಪ್ರಾತ್ಯಕ್ಷಿಕೆಯನ್ನು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಉದ್ಘಾಟಿಸಲಿದ್ದು, ಕೃಷಿ ವಸ್ತುಪ್ರದರ್ಶನವನ್ನು ಜಿಪಂ ಸಿಇಒ ಯಾಲಕ್ಕಿಗೌಡ ಉದ್ಘಾಟಿಸಲಿದ್ದಾರೆ. ಬೆಂಗಳೂರು ಕೃಷಿ ವಿವಿಯ ಕುಲಪತಿ ಡಾ.ಎಸ್.ರಾಜೇಂದ್ರ ಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ.
7ರಂದು ಬೆಳಗ್ಗೆ 10.30ಕ್ಕೆ ನೂತನ ತಾಂತ್ರಿಕತೆಗಳ ಲೋಕಾರ್ಪಣೆಯನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಮಾಡಲಿದ್ದಾರೆ. ಕೃಷಿ ವಿವಿಯ ವ್ಯವಸ್ಥಾಪನಾ ಮಂಡಳಿ ಸದಸ್ಯ ವೇಣುಗೋಪಾಲ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದು, ಡಾ.ಎಸ್.ರಾಜೇಂದ್ರ ಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿವರಿಸಿದರು. ಕರ್ನಾಟಕ ಸರ್ಕಾರದ ಹಣ ಕಾಸು ಇಲಾಖೆ ಅಪರ ಮುಖ್ಯ ಕಾರ್ಯ ದರ್ಶಿ ಐ.ಎಸ್.ಎನ್. ಪ್ರಸಾದ್, ಕೃಷಿ ಮತ್ತು ತೋಟ ಗಾ ರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ಕೃಷಿ ವಿವಿ
ವ್ಯವ ಸ್ಥಾಪನಾ ಮಂಡಳಿ ಸದ ಸ್ಯ ರಾದ ಶ್ರೀನಿವಾಸಯ್ಯ,ಸುಬ್ರಹ್ಮಣಿ, ಶಿವಕುಮಾರ್, ಡಾ.ಅಶ್ವತ್ಥ ನಾರಾಯಣ, ಪ್ರೊ.ಶಕುಂತಲಾ ಭಾಗವಹಿಸಲಿದ್ದಾರೆ ಎಂದರು.
ರೈತರೊಂದಿಗೆ ಸಂವಾದ: ನಿರ್ದೇಶಕ ಡಾ.ವಾಸುದೇವನ್ ಮಾತನಾಡಿ, ಕೃಷಿಯಲ್ಲಿ ನೀರಿನ ಸದ್ಭಳಕೆ ಜತೆಗೆ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಇಳುವರಿ ಪಡೆಯುವ ಬಗ್ಗೆ ರೈತರಿಗೆ ಮಾಹಿತಿ ನೀಡಲಾಗುವುದು. ಅಂತೆಯೇ, 25ರಿಂದ 30
ತರಕಾರಿ ಬೆಳೆಯನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಲಾಗುವುದು. ಭತ್ತ, ರಾಗಿ, ಸಿರಿಧಾನ್ಯ, ಮುಸುಕಿನ ಜೋಳ, ವಾಣಿಜ್ಯ ಬೆಳೆ, ದ್ವಿದಳ ಧಾನ್ಯ ಮತ್ತು ಎಣ್ಣೆ ಕಾಳುಬೆಳೆ, ಮೇವಿನ ಬೆಳೆ ಹೊಸ ಮಾದರಿ ಪರಿಚಯ, ರೈತರೊಂದಿಗೆ ಸಂವಾದ ನಡೆಯಲಿದೆ ಎಂದರು.
ತರಕಾರಿ ಬೆಳೆ ಪ್ರಾತ್ಯಕಿಕೆ: ಕೃಷಿ ಮೇಳದಲ್ಲಿ ಗಂಗಾವತಿ ಸೋನಾ ಎಂಬ ಭತ್ತದ ಹೊಸ ತಳಿಯನ್ನು ಪರಿಚಯಿಸ ಲಾಗುತ್ತಿದೆ. 20 ಬಗೆಯ ಹೊಸ ತರಕಾರಿಬೆಳೆಯ ಪ್ರಾತ್ಯಕ್ಷಿಕೆ, ಸಿಒಬಿ ಸಿಎಂ 16061, 16062 ಎಂಬ ಕಬ್ಬಿನ ಹೊಸ ತಳಿಯನ್ನು ಪರಿಚಯಿಸಲಾಗುತ್ತಿದೆ. ಕೆ.ಎಂ. ಆರ್. 430 ಎಂಬ ರಾಗಿ ತಳಿ ಹಾಗೂ ಎಂ.ಎ. ಎಚ್. 14-5 ಮುಸುಕಿನ ಜೋಳ ತಳಿ ಪರಿಚಯಿಸ ಲಾಗುತ್ತದೆ ಎಂದು ವಿವರಿಸಿದರು.
ಮೇಳದಲ್ಲಿ 150 ರಿಂದ 160 ಮಳಿಗೆ ತೆರೆಯಲಾಗುತ್ತಿದೆ. ವಿವಿಧ ಇಲಾಖೆಯಿಂದ ರೈತರಿಗೆ ಸಿಗಬಹುದಾದ ಸೌಲಭ್ಯದ ಮಾಹಿತಿಯೂ ನೀಡಲಾಗುತ್ತದೆ. ನಗರದಿಂದ ವಿ.ಸಿ.ಫಾರಂವರೆಗೆ ವಾಹನದ ಸೌಲಭ್ಯವಿರಲಿದೆ. ಬೆಳಗ್ಗೆ 9ರಿಂದ ಸಂಜೆ 6ಗಂಟೆವರೆಗೆ ಬಸ್ ಸಂಚರಿಸಲಿದೆ ಎಂದರು. ವಲಯ ಕೃಷಿ ಸಂಶೋಧನಾ ಕೇಂದ್ರದ ಸಹ ವಿಸ್ತರಣಾ ನಿರ್ದೇಶಕ ಡಾ.ಡಿ.ರಘುಪತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.