ಸಂಗಮದಲ್ಲಿ ಅಂಬರೀಶ್‌ ಅಸ್ಥಿ ವಿಸರ್ಜನೆ

Team Udayavani, Nov 29, 2018, 6:20 AM IST

kaveri-sangam-srirangapatna.jpg

ಶ್ರೀರಂಗಪಟ್ಟಣ: ಇಹಲೋಕ ತ್ಯಜಿಸಿದ ಅಂಬರೀಶ್‌ ಅವರ ಅಸ್ಥಿ ವಿಸರ್ಜನೆಯನ್ನು ಸಾಂಪ್ರದಾಯಿಕ ವಿಧಿ-ವಿಧಾನಗಳೊಂದಿಗೆ ಬುಧವಾರ ಇಲ್ಲಿಗೆ ಸಮೀಪದ ಸಂಗಮ ಕ್ಷೇತ್ರದಲ್ಲಿ ನೆರವೇರಿಸಲಾಯಿತು.

ಕಾವೇರಿ, ಲೋಕಪಾವನಿ ಹಾಗೂ ಪಶ್ಚಿಮವಾಹಿನಿ ನದಿಗಳು ಸಂಗಮಿಸುವ ಕ್ಷೇತ್ರ ಸಂಗಮಕ್ಕೆ ಮಧ್ಯಾಹ್ನ 2 ಗಂಟೆ ವೇಳೆಗೆ
ಬೆಂಗಳೂರಿನಿಂದ ಅಸ್ಥಿಯೊಂದಿಗೆ ಸುಮಲತಾ ಹಾಗೂ ಅಭಿಷೇಕ್‌ ಆಗಮಿಸಿದರು. ವೇದವಿದ್ವಾನ್‌ ಭಾನುಪ್ರಕಾಶ್‌ ಶರ್ಮಾ ಶಿಷ್ಯ ಲಕ್ಷ್ಮೀಶ ಹಾಗೂ ಬೆಂಗಳೂರಿನಿಂದ ಆಗಮಿಸಿದ್ದ ಪುರೋಹಿತರ ತಂಡದ ನೇತೃತ್ವದಲ್ಲಿ ವಿಧಿ-ವಿಧಾನ ನೆರವೇರಿಸಲಾಯಿತು.

ಸಂಗಮದ ಸ್ನಾನಘಟ್ಟದ ಮೇಲೆ ಮಡಿಯುಟ್ಟು ಕುಳಿತ ಸುಮಲತಾ ಹಾಗೂ ಅಭಿಷೇಕ್‌ ನಾಲ್ಕು ಕುಡಿಕೆಗಳಲ್ಲಿ ತುಂಬಿದ್ದ
ಅಸ್ಥಿಗೆ ಹಾಲು, ಮೊಸರು, ಗಂಧ, ತುಪ್ಪ, ಸಕ್ಕರೆ ಪಂಚಗವ್ಯಗಳಿಂದ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದರು.  ಬಳಿಕ ನದಿಗೆ ಇಳಿದು ನಾಲ್ಕೂ ಕುಡಿಕೆಗಳಲ್ಲಿದ್ದ ಅಸ್ಥಿಯನ್ನು ನದಿ ತಟದಲ್ಲಿ ಹಿಮ್ಮುಖವಾಗಿ ನಿಂತು ಅಭಿಷೇಕ್‌ ವಿಸರ್ಜನೆ ಮಾಡಿದರು. ಸಚಿವ ಪುಟ್ಟರಾಜು ಹಾಗೂ ನಿರ್ಮಾಪಕ ಮುನಿರತ್ನ ಹರಿಗೋಲಿನಲ್ಲಿ ಸ್ವಲ್ಪಮುಂದೆ ಹೋಗಿ ನದಿಯಲ್ಲಿ ಅಸ್ಥಿ ಸಮರ್ಪಕವಾಗಿ ವಿಸರ್ಜನೆಯಾಗಲು ಸಹಕರಿಸಿದರು. ಸಂಗಮದಲ್ಲಿ ಅಸ್ಥಿ ವಿಸರ್ಜನೆ ಮಾಡಿದ ಬಳಿಕ ಕುಟುಂಬದವರು ಅಂತಿಮ ಗೌರವ ಸಲ್ಲಿಸಿದರು.

ನಟರಾದ ದರ್ಶನ್‌, ದೊಡ್ಡಣ್ಣ, ರಾಕ್‌ಲೈನ್‌ ವೆಂಕಟೇಶ್‌, ನಿರ್ಮಾಪಕರಾದ ಸಂದೇಶ್‌ ನಾಗರಾಜು, ಅಂಬರೀಶ್‌ ಅಣ್ಣ ಆನಂದ್‌ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸ್ಥಳ ಬದಲಾವಣೆ: ಮೊದಲು ಅಂಬರೀಶ್‌ ಅವರ ಅಸ್ಥಿ ವಿಸರ್ಜನೆ ಕಾರ್ಯಕ್ರಮವನ್ನು ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯಲ್ಲಿ ನಿಗದಿ ಪಡಿಸಲಾಗಿತ್ತು. ಈ ವಿಷಯ ತಿಳಿದು ಅಸಂಖ್ಯಾತ ಅಭಿಮಾನಿಗಳ ದಂಡು ಪಶ್ಚಿಮವಾಹಿನಿ ಬಳಿ ಜಮಾಯಿಸಿತ್ತು. ಜನರನ್ನು ನಿಯಂತ್ರಣ ಮಾಡುವುದು ಕಷ್ಟವಾಗಲಿದೆ ಎಂಬುದನ್ನು ಅರಿತ ಪೊಲೀಸ್‌ ಅಧಿಕಾರಿಗಳು ಅಸ್ಥಿ ವಿಸರ್ಜನೆಯನ್ನು ಸಂಗಮಕ್ಕೆ ಸ್ಥಳಾಂತರಿಸಿದರು. ಸಂಗಮದಲ್ಲಿ ಅಸ್ಥಿ ವಿಸರ್ಜನೆ ಮಾಡುವ ಸ್ಥಳ ಅಶುಚಿತ್ವದಿಂದ ಕೂಡಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಹಾಗೂ ಮಾಜಿ ಶಾಸಕ ರಮೇಶ್‌ ಬಂಡಿಸಿದ್ದೇಗೌಡ, ಪುರಸಭೆ ಸಿಬ್ಬಂದಿಯಿಂದ ಅದನ್ನು ಸ್ವತ್ಛಗೊಳಿಸಿ, ಶಾಮಿಯಾನದ ವ್ಯವಸ್ಥೆ ಮಾಡಿಸಿದರು. ಅಭಿಮಾನಿಗಳನ್ನು ನಿಯಂತ್ರಿಸಲು ಬ್ಯಾರಿಕೇಡ್‌ಗಳನ್ನು ಅಳವಡಿಸಲಾಯಿತು. ಅಸ್ಥಿಗೆ ಪೂಜೆ ಸಲ್ಲಿಸುವ ಸ್ಥಳಕ್ಕೆ ಗಣ್ಯರು, ಅಧಿಕಾರಿಗಳನ್ನು ಹೊರತುಪಡಿಸಿ ಉಳಿದವರನ್ನು ನಿರ್ಬಂಧಿಸಲಾಯಿತು. ಅಂಬರೀಶ್‌ ಜೊತೆ ರಾಜಕೀಯ ವೈಮನಸ್ಸನ್ನು ಹೊಂದಿದ್ದ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಅಸ್ಥಿ ವಿಸರ್ಜನೆ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದು  ಸಾರ್ವಜನಿಕ ಚರ್ಚೆಗೆ ಕಾರಣವಾಯಿತು.

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.