ಜಿಲ್ಲಾ ಕಾಂಗ್ರೆಸ್‌ನಲ್ಲಿ ಅಂಬಿ “ಟಿಕೆಟ್‌’ ರಾಜಕಾರಣ


Team Udayavani, Apr 4, 2018, 3:36 PM IST

ambrish.jpg

ಮಂಡ್ಯ: ಅನಾರೋಗ್ಯ ಮತ್ತು ರಾಜಕೀಯ ನಿರಾಸಕ್ತಿ ಕಾರಣಗಳಿಂದಾಗಿ ಸಚಿವ ಸ್ಥಾನವನ್ನೂ ಕಳೆದುಕೊಂಡು ಸ್ವಪಕ್ಷದಲ್ಲೇ ಮೂಲೆಗುಂಪಾಗುತ್ತಿರುವ ಮಾಜಿ ಸಚಿವ, ಶಾಸಕ ಅಂಬರೀಶ್‌ 2018ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ರಾಜಕಾರಣದ ಮೂಲಕ ತಮ್ಮ ರಾಜಕೀಯ ಅಸ್ತಿತ್ವದ ಪುನರ್‌ ಪ್ರತಿಷ್ಠಾಪನೆಗೆ ಹೊಸ ಚದುರಂಗದ ಆಟ ಆರಂಭಿಸಿದ್ದಾರೆ.

ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಪ್ರಬಲ ಆಕಾಂಕ್ಷೆಯನ್ನು ಬಹಿರಂಗವಾಗಿ ವ್ಯಕ್ತಪಡಿಸದೇ ಇದ್ದರೂ ಜಿಲ್ಲಾ ಕಾಂಗ್ರೆಸ್‌ನ ನಾಯಕತ್ವವನ್ನು ಸಂಪೂರ್ಣವಾಗಿ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವ ಹರಸಾಹಸಕ್ಕೆ ಮುಂದಾಗಿರುವ ಅಂಬರೀಶ್‌ ಈಗ ಟಿಕೆಟ್‌ ರಾಜಕಾರಣದತ್ತ ಮುಖ ಮಾಡಿದ್ದಾರೆ.

ಪ್ರಭಾವ ಪ್ರದರ್ಶನ: 2013ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಮತ್ತು ರಾಜ್ಯದ ಪ್ರಭಾವಿ ಕಾಂಗ್ರೆಸ್‌ ನಾಯಕರಾಗಿ ಬಿಂಬಿತ ರಾಗಿದ್ದ ಅಂಬರೀಶ್‌ ಆ ಚುನಾವಣೆಯಲ್ಲಿ ತಮ್ಮ ಟಿಕೆಟ್‌ನ್ನು ಮುಂಗಡವಾಗಿ ಖಾತರಿಪಡಿಸಿಕೊಳ್ಳುವುದರ ಜೊತೆಗೆ ತಮ್ಮ ನಿಷ್ಠಾವಂತ ರಾಜಕೀಯ ಬಂಟ ಎಲ್‌.ಡಿ.ರವಿ ಅವರಿಗೆ ಟಿಕೆಟ್‌ ಕೊಡಿ ಸುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೆ, ರವೀಂದ್ರ ಶ್ರೀಕಂಠಯ್ಯ ಅವರಿಗೆ ಘೋಷಣೆಯಾಗಿದ್ದ ಶ್ರೀರಂಗಪಟ್ಟಣ ಟಿಕೆಟ್‌ನ್ನು ಜಿಪಂ ಮಾಜಿ ಸದಸ್ಯ ಶೆಟ್ಟಹಳ್ಳಿ ಲಿಂಗರಾಜುಗೆ ಕೊಡಿಸುವುದರ ಮೂಲಕ ತಮ್ಮ ಪ್ರಭಾವವನ್ನು ಪ್ರದರ್ಶಿಸಿದ್ದರು. ಅಲ್ಲದೆ, ಮದ್ದೂರು ಕ್ಷೇತ್ರದಲ್ಲೂ ಕೂಡ ಮಧು ಮಾದೇಗೌಡರಿಗೆ ಟಿಕೆಟ್‌ ಕೊಡಿಸುವಲ್ಲಿ ಅಂಬರೀಶ್‌ ಪಾತ್ರವಿತ್ತು.

ಟಿಕೆಟ್‌ ಪಡೆಯುವುದಕ್ಕಷ್ಟೇ ಸೀಮಿತ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಪ್ರಭಾವಿ ಮತ್ತು ಪರಿಣಾಮಕಾರಿಯಾಗಿ ಕಾಣಿಸಿಕೊಂಡಿದ್ದ ಅಂಬರೀಶ್‌, ಈ ಬಾರಿ ತಮ್ಮದೊಂದು ಕ್ಷೇತ್ರದ ಟಿಕೆಟ್‌ನ್ನು ಪಡೆದುಕೊಳ್ಳುವುದಕ್ಕೆ ಸೀಮಿತರಾಗಿದ್ದಾರೆ. ಸಚಿವ ಸ್ಥಾನದಿಂದ ಕೈಬಿಟ್ಟ ನಂತರವೂ ಕಾಂಗ್ರೆಸ್ಸಿಗರ ಜೊತೆ ವಿಶೇಷವಾಗಿ ಮುಖ್ಯಮಂತ್ರಿಗಳೊಂದಿಗೆ ಮುನಿಸನ್ನು ವ್ಯಕ್ತಪಡಿಸಿದರೇ ಹೊರತು ಪರ್ಯಾಯ ರಾಜಕಾರಣದತ್ತ ಮುಖ ಮಾಡದಿರುವುದು ಅಂಬಿ ರಾಜಕೀಯ ಶಕ್ತಿಯನ್ನು ತೋರಿಸುತ್ತದೆ.

ಉತ್ತಮ ಒಡನಾಟ: ತಮ್ಮ ರಾಜಕೀಯ ಜೀವನದುದ್ದಕ್ಕೂ ಎಲ್ಲ ಪಕ್ಷದೊಂದಿಗೆ “ಉತ್ತಮ ಒಡನಾಟ’ ಹೊಂದಿರುವ ಶಾಸಕ ಅಂಬರೀಶ್‌, ಮಂಡ್ಯ ಜಿಲ್ಲೆಯ ಮಟ್ಟಿಗೆ ಜೆಡಿಎಸ್‌ ಜೊತೆ ನಿಕಟ ಸಂಬಂಧವಿರಿಸಿಕೊಂಡಿದ್ದು, ಕಳೆದ ಚುನಾವಣೆಯಲ್ಲಿ ಅಂಬರೀಶ್‌ ಭರ್ಜರಿ ಗೆಲುವಿಗೆ ಜೆಡಿಎಸ್‌ ಕೂಡ ನೆರವಾಗಿದೆ ಎಂಬುದು ರಹಸ್ಯವಾಗಿ ಉಳಿದಿಲ್ಲ.

ಕಾಂಗ್ರೆಸ್‌ ಸಮಿತಿ ಅಂತಿಮ: ಕಾಂಗ್ರೆಸ್‌ ಸಮಿತಿಯು ಮಳವಳ್ಳಿಯಿಂದ ಪಿ.ಎಂ.ನರೇಂದ್ರಸ್ವಾಮಿ, ಶ್ರೀರಂಗಪಟ್ಟಣ ಕ್ಷೇತ್ರದಿಂದ ರಮೇಶ್‌ ಬಂಡಿಸಿದ್ದೇಗೌಡ, ನಾಗಮಂಗಲ ಕ್ಷೇತ್ರದಿಂದ ಚೆಲುವರಾಯಸ್ವಾಮಿ, ಕೆ.ಆರ್‌.ಪೇಟೆ ಕ್ಷೇತ್ರದಿಂದ ಕೆ.ಬಿ.ಚಂದ್ರಶೇಖರ್‌ ಹೆಸರು ಬಹುತೇಕ ಅಂತಿಮಗೊಂಡಿದೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರಕ್ಕೆ
ದಿವಂಗತ ಕೆ.ಎಸ್‌.ಪುಟ್ಟಣ್ಣಯ್ಯ ಪುತ್ರ ದರ್ಶನ್‌ರನ್ನು ಬೆಂಬಲಿಸಲು ನಿರ್ಧರಿಸಿರುವ ಕಾಂಗ್ರೆಸ್‌, ಮದ್ದೂರು ಕ್ಷೇತ್ರದಿಂದ ಕಲ್ಪನಾ ಸಿದ್ದರಾಜು ಅಥವಾ ಮಧು ಜಿ.

ಮಾದೇಗೌಡರಿಗೆ ಟಿಕೆಟ್‌ ನೀಡಲು ನಿರ್ಧರಿಸಿದೆ. ಹೀಗೆ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮ ಗೊಳಿಸಿರುವ ಕಾಂಗ್ರೆಸ್‌, ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಅಂಬರೀಶ್‌ರನ್ನು ಕಣಕ್ಕಿಳಿಸುವ ಉತ್ಸಾಹದಲ್ಲಿದೆ. ಒಂದು ವೇಳೆ ಅಂಬರೀಶ್‌ ಅನಾರೋಗ್ಯದ ಕಾರಣವನ್ನು ಮುಂದಿಟ್ಟರೆ ಸುಮಲತಾ ಅವರಿಗೆ ಟಿಕೆಟ್‌ ನೀಡುವುದಕ್ಕೂ ಪಕ್ಷ ಸಿದ್ಧವಿದೆ. ಆದರೆ, ಅಂಬರೀಶ್‌ ಇದುವರೆಗೆ ತಮ್ಮ ರಾಜಕೀಯ ನಡೆಯನ್ನು ಸ್ಪಷ್ಟಪಡಿಸುತ್ತಿಲ್ಲ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತು ಕೆಲವು ಕಾಂಗ್ರೆಸ್‌ ನಾಯಕರೊಂದಿಗೆ ಅಂತರ ಕಾಯ್ದುಕೊಳ್ಳುವ ಪ್ರಕ್ರಿಯೆಯನ್ನು ಮುಂದುವರಿಸಿದ್ದಾರೆ.

ಮಂಡ್ಯ ಕ್ಷೇತ್ರಕ್ಕೆ ಪ್ರಾಬಲ್ಯ ಸೀಮಿತ: ಕಳೆದ ಚುನಾವಣೆಯಲ್ಲಿ ಟಿಕೆಟ್‌ ಹಂಚಿಕೆ ಸಂದರ್ಭ ತಮ್ಮನ್ನು ವಿಶ್ವಾಸಕ್ಕೆ ತೆಗೆದು ಕೊಂಡಂತೆ ಈ ಬಾರಿಯೂ ಪಕ್ಷದ ಹೈಕಮಾಂಡ್‌ ಶಾಸಕ ಅಂಬರೀಶ್‌ ಅವರಿಗೆ ಮಣೆ ಹಾಕುವ ಗೋಜಿಗೆ ಹೋಗಿಲ್ಲ. ಬಹುತೇಕ ಎಲ್ಲ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಮಂಡ್ಯ ಕ್ಷೇತ್ರದ ಟಿಕೆಟ್‌ಗಷ್ಟೇ ಅಂಬರೀಶ್‌ ಪ್ರಾಬಲ್ಯವನ್ನು ಸೀಮಿತಗೊಳಿಸಿದ್ದಾರೆ. ಇತ್ತೀಚೆಗೆ ಅಂಬರೀಶ್‌ರನ್ನು ಭೇಟಿ ಮಾಡಿದ ಅಭಿಮಾನಿಗಳಿಗೂ ಅಂಬರೀಶ್‌ ತಮ್ಮ ಸ್ಪಷ್ಟ ನಿಲುವನ್ನು ಪ್ರಕಟಿಸದೆ ಪಕ್ಷದ ವರಿಷ್ಠರ ಮೇಲಿನ ಅಸಮಾಧಾನವನ್ನೇ ಬಹಿರಂಗಪಡಿಸಿದ್ದಾರೆ.

 ಒಟ್ಟಾರೆಯಾಗಿ ಶಾಸಕ ಅಂಬರೀಶ್‌ ಈ ಚುನಾವಣೆಯಲ್ಲಿ ಟಿಕೆಟ್‌ ರಾಜಕಾರಣದ ಮೂಲಕ ತಮ್ಮ ಪ್ರಾಬಲ್ಯವನ್ನು
ಹೆಚ್ಚಿಸಿಕೊಳ್ಳುವ ಪ್ರಯತ್ನ ಒಂದೆಡೆಯಾದರೆ, ಕಾಂಗ್ರೆಸ್‌ ಒಳಗಿನ ಇತರೆ ಪ್ರಭಾವಿ ನಾಯಕರನ್ನು ಜೆಡಿಎಸ್‌ ಸಹಕಾರದೊಂದಿಗೆ ಮಟ್ಟ ಹಾಕುವ ತಂತ್ರಗಾರಿಕೆಯನ್ನು ನಡೆಸಿದ್ದಾರೆ. ಒಕ್ಕಲಿಗ ನಾಯಕತ್ವದ ಇಮೇಜ್‌ನ್ನು ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೆದರಿಸುವ ಜಾಣ್ಮೆಯನ್ನು ಪ್ರದರ್ಶಿಸುತ್ತಿರುವ ಅಂಬರೀಶ್‌ ರಾಜಕೀಯ ಚದುರಂಗದ ಆಟಕ್ಕೆ ಯಾವ ಫ‌ಲಿತಾಂಶ ದೊರೆಯುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ.

ಅಂಬಿ ಅಪಸ್ವರ
ಮೇಲುಕೋಟೆ ಕ್ಷೇತ್ರದಲ್ಲಿ ಪುಟ್ಟಣ್ಣಯ್ಯ ಪುತ್ರ ದರ್ಶನ್‌ಗೆ ಕಾಂಗ್ರೆಸ್‌ ಬೆಂಬಲ ವ್ಯಕ್ತಪಡಿಸುವ ಮುನ್ನ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲವೆಂಬ ಅಪಸ್ವರ ಎತ್ತಿರುವ ಅಂಬರೀಶ್‌, ಅಲ್ಲಿಂದ ಕಳೆದ ಬಾರಿ ಸ್ಪರ್ಧಿಸಿ ಠೇವಣಿ ಕಳೆದುಕೊಂಡಿರುವ ತನ್ನ ಶಿಷ್ಯ ಎಲ್‌.ಡಿ.ರವಿ ಅವರಿಗೆ ಮತ್ತೂಮ್ಮೆ ಟಿಕೆಟ್‌ ಕೊಡಬೇಕೆಂದು ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗಿದೆ. ಜೊತೆಗೆ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಮಧು ಜಿ.ಮಾದೇಗೌಡ, ಕೆ.ಆರ್‌.ಪೇಟೆ ಕ್ಷೇತ್ರದಿಂದ ಜಿಲ್ಲಾ ಪಂಚಾಯಿತಿ ಪರಾಜಿತ ಅಭ್ಯರ್ಥಿ ಕಿಕ್ಕೇರಿ ಸುರೇಶ್‌ಗೆ ಟಿಕೆಟ್‌ ನೀಡುವಂತೆ ಹೈಕಮಾಂಡ್‌ ಎದುರು ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ತಗ್ಗಿದ ಆರ್ಭಟ
ಈಗಾಗಲೇ ಮಾಜಿ ಸಂಸದೆ ರಮ್ಯಾ ರಾಜಕೀಯ ಪ್ರಭಾವದಿಂದ ಕೊಂಚ ಕುಸಿದಿರುವ ಅಂಬರೀಶ್‌, ಮಾಜಿ ಸಚಿವ ಚೆಲುವರಾಯಸ್ವಾಮಿ ಕಾಂಗ್ರೆಸ್‌ ಪ್ರವೇಶ ಕೂಡ ಅಂಬರೀಶ್‌ ರಾಜಕೀಯ ಆರ್ಭಟವನ್ನು ತಗ್ಗಿಸಿದೆ. ಈ ನಡುವೆ
ಪಕ್ಷದ ಹೈಕಮಾಂಡ್‌ ಕೂಡ ಅಂಬರೀಶ್‌ರನ್ನು ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಪ್ರಮುಖವಾಗಿ ಪರಿಗಣಿಸಲಿಲ್ಲವೆಂಬುದು ಅಂಬರೀಶ್‌ ಅಸಮಾಧಾನಕ್ಕೆ ಕಾರಣವಾಗಿದೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ರಾಜಕೀಯ ನಿರ್ದೇಶನದ ಮೇರೆಗೆ ಕೆಲವೊಂದು ತೀರ್ಮಾನಗಳನ್ನು ಅಂಬರೀಶ್‌ ತೆಗೆದುಕೊಳ್ಳುತ್ತಾರೆಂದು ಹೇಳಲಾಗಿದೆ.

ಜಿಲ್ಲೆಯಲ್ಲಿ ಜೆಡಿಎಸ್‌ನ ಪ್ರಭಾವಿ ನಾಯಕರಾದ ಪುಟ್ಟರಾಜು ಮತ್ತು ತಮ್ಮಣ್ಣ ಗೆಲುವಿಗೆ ಅಂಬರೀಶ್‌ ಅವರಿಂದ ಸಹಕಾರ ಪಡೆಯುವ ಪ್ರಯತ್ನಗಳು ಜೆಡಿಎಸ್‌ನಲ್ಲಿ ನಡೆದಿವೆ ಎಂದು ಹೇಳಲಾಗುತ್ತಿದೆ.

ತಿರಸ್ಕರಿಸುವ ಶಕ್ತಿ ಇಲ್ಲ ಕಾಂಗ್ರೆಸ್‌ ಹೈಕಮಾಂಡ್‌ ಅಂಬರೀಶ್‌ರ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾಗದಿದ್ದರೂ ಎಲ್ಲವನ್ನೂ ತಿರಸ್ಕರಿಸುವ ಶಕ್ತಿ ಇಲ್ಲ. ಒಕ್ಕಲಿಗ ನಾಯಕತ್ವದ ಲೇಬಲ್‌ನಲ್ಲಿ ಗುರುತಿಸಿಕೊಂಡಿರುವ ಅಂಬರೀಶ್‌ರನ್ನು ಕಾಂಗ್ರೆಸ್‌ ಸಂಪೂರ್ಣ ತಿರಸ್ಕರಿಸಿದರೆ ಒಕ್ಕಲಿಗ ಮತಗಳು ಕಾಂಗ್ರೆಸ್‌ನಿಂದ ಚದುರಿ ಹೋಗುತ್ತವೆ ಎಂಬ ಭೀತಿ ಒಂದೆಡೆಯಾದರೆ, ವಿಶೇಷವಾಗಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವಿಗೆ ಕನಿಷ್ಟ ಸಹಾಯಕ್ಕಾಗಿಯಾದರೂ ಸೆರಗಿನ ಕೆಂಡವಾದ ಅಂಬರೀಶ್‌ರನ್ನು ಕಟ್ಟಿಕೊಳ್ಳಲೇಬೇಕಾದ ಅನಿವಾರ್ಯತೆ ಇದೆ.

ಜಾಣ್ಮೆಯ ನಡೆ
ಅತ್ಯಂತ ಜಾಣ್ಮೆಯಿಂದ ಅಂಬರೀಶ್‌ರನ್ನು ನಿಭಾಯಿಸುತ್ತಿರುವ ಕಾಂಗ್ರೆಸ್‌ ಹೈಕಮಾಂಡ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯ ಕ್ಷೇತ್ರದ ಟಿಕೆಟ್‌ನ್ನು ಅಂಬರೀಶ್‌ ಇಚ್ಛೆಗೆ ಅನುಗುಣವಾಗಿ ಘೋಷಿಸುವ ತೀರ್ಮಾನಕ್ಕೆ ಬಂದಿದ್ದಾರೆ.

ಶಾಸಕ ಅಂಬರೀಶ್‌ ಟಿಕೆಟ್‌ ಕೋರಿ ಅರ್ಜಿ ಸಲ್ಲಿಸದೇ ಇದ್ದರೂ ಅವರಿಗೆ ಟಿಕೆಟ್‌ ಸಿಗುವುದು ಖಚಿತ. ಒಂದು ವೇಳೆ ಅನಾರೋಗ್ಯದ ಕಾರಣಕ್ಕಾಗಿ ಸ್ಪರ್ಧೆ ನಿರಾಕರಿಸಿದರೆ ಅವರು ಸೂಚಿಸುವ ಅಭ್ಯರ್ಥಿಗೆ ಟಿಕೆಟ್‌ ಮತ್ತು ಪಕ್ಷದ ಆರ್ಥಿಕ ನೆರವು ದೊರೆಯಲಿದೆ.

ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.