ಪುತ್ರನಿಗೆ ಹೆಗಲಾಗಿ ನಿಂತ ಅನಿತಾ 


Team Udayavani, Mar 17, 2019, 7:42 AM IST

putra.jpg

ಮಂಡ್ಯ: ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿಯಾಗಿ ಅಖಾಡ ಪ್ರವೇಶಿಸಿರುವ ನಿಖಿಲ್‌ಕುಮಾರಸ್ವಾಮಿಗೆ ಅಮ್ಮ ಅನಿತಾ ಕುಮಾರಸ್ವಾಮಿ ಹೆಗಲಾಗಿ ನಿಂತಿದ್ದಾರೆ.

ಶನಿವಾರ ಕಾಂಗ್ರೆಸ್‌ನ ಹಿರಿಯ ನಾಯಕರಾದ ಜಿ.ಮಾದೇಗೌಡ, ಎಂ.ಎಸ್‌.ಆತ್ಮಾನಂದ, ಎಚ್‌.ಡಿ.ಚೌಡಯ್ಯ, ಎಂ.ಡಿ.ರಮೇಶ್‌ರಾಜು ಅವರ ನಿವಾಸಕ್ಕೆ ಶಾಸಕಿ ಅನಿತಾ ಕುಮಾರಸ್ವಾಮಿ ಪುತ್ರ ನಿಖಿಲ್‌ ಹಾಗೂ ಜೆಡಿಎಸ್‌ ನಾಯಕರೊಟ್ಟಿಗೆ ತೆರಳಿ ಬೆಂಬಲ ಕೋರಿದರು. ಹಿರಿಯ ನಾಯಕರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ನಿಖಿಲ್‌, ತಮ್ಮನ್ನು ಚುನಾವಣೆಯಲ್ಲಿ ಬೆಂಬಲಿಸುವಂತೆ ಮನವಿ ಮಾಡಿದರು.

ಅನಿತಾ ಕುಮಾರಸ್ವಾಮಿ ಹಾಗೂ ನಿಖಿಲ್‌ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ ಜಿ.ಮಾದೇಗೌಡ, ಮೈತ್ರಿಕೂಟದ ಅಭ್ಯರ್ಥಿಯಾಗಿರೋ ನಿಖಿಲ್‌ಗೆ ಆಶೀರ್ವಾದ ಮಾಡಿದ್ದೇನೆ. ಸುಮಲತಾ ಅವರು ಬಂದು ಬೆಂಬಲ ಕೇಳಿದ್ದರು. ಆಗೋಲ್ಲ ಎಂದು ಹೇಳಿ ಕಳುಹಿಸಿದ್ದೆ. ಈಗ ನಿಖಿಲ್‌ ಬಂದಿದ್ದಾರೆ. ಅವರಿಗೂ ಆಗೋಲ್ಲ ಅಂತಿದ್ದೆ. ಆದರೆ, ಅವರು ಮೈತ್ರಿ ಪಕ್ಷದ ಅಭ್ಯರ್ಥಿ ಎಂದಿದ್ದಾರೆ. ಅವರಿಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದರು.

ಮಾದೇಗೌಡರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್‌, ಮೈತ್ರಿ ಅಭ್ಯರ್ಥಿಯಾಗಿ ನನ್ನನ್ನು ಘೋಷಣೆ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್‌ನ ಹಿರಿಯ ನಾಯಕರನ್ನು ಭೇಟಿ ಮಾಡಿದ್ದೇನೆ. ಮಾದೇಗೌಡರನ್ನು ನನ್ನ ತಾತನ ಸ್ಥಾನದಲ್ಲಿ ನೋಡುತ್ತಿದ್ದಾರೆ. ಭೇಟಿ ವೇಳೆ ಅವರ ಸಾಕಷ್ಟು ರಾಜಕೀಯ ಅನುಭವಗಳನ್ನು ಹಂಚಿಕೊಂಡು ಆಶೀರ್ವದಿಸಿದ್ದಾರೆ. ಮುಂದೆಯೂ ಅವರ ಜೊತೆ ಬಂದು ಚರ್ಚೆ ಮಾಡುತ್ತೇನೆ ಎಂದು ಹೇಳಿದರು.

ಈ ವೇಳೆ ಸಂಸದ ಎಲ್‌.ಆರ್‌.ಶಿವರಾಮೇಗೌಡ, ವಿಧಾನಪರಿಷತ್‌ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಎನ್‌.ಅಪ್ಪಾಜಿಗೌಡ, ಜೆಡಿಎಸ್‌ ಜಿಲ್ಲಾಧ್ಯಕ್ಷ ಡಿ.ರಮೇಶ್‌, ಯುವ ಘಟಕದ ಅಧ್ಯಕ್ಷ ಬೇಲೂರು ಶಶಿಧರ್‌ ಇದ್ದರು. ಆನಂತರ ಮಾಜಿ ಸಚಿವ ಎಂ.ಎಸ್‌.ಆತ್ಮಾನಂದ ನಿವಾಸಕ್ಕೆ ತೆರಳಿ ಬೆಂಬಲ ಕೋರಿದರು.

ಅಲ್ಲಿಂದ ಪಿಇಟಿ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಕ್ಷ ಎಚ್‌.ಡಿ.ಚೌಡಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಬಳಿಕ ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಡಿ.ರಮೇಶ್‌ರಾಜು, ಜಿಲ್ಲಾ ಕಾಂಗ್ರೆಸ್‌ ಮಹಿಳಾಧ್ಯಕ್ಷೆ ಅಂಜನಾ ಶ್ರೀಕಾಂತ್‌ ಮನೆಗೂ ತೆರಳಿ ಮಾತುಕತೆ ನಡೆಸಿ ಬೆಂಬಲ ಕೋರಿದರು.
 
ಜುಟ್ಟು ಹಿಡಿಯಬೇಡಿ: ಮೊದಲಿಗೆ ಮಾದೇಗೌಡರ ನಿವಾಸಕ್ಕೆ ತೆರಳಿದ ಅನಿತಾ ಕುಮಾರಸ್ವಾಮಿ ಹಾಗೂ ನಿಖಿಲ್‌ ಅವರ ಕಾಲಿಗೆ ನಮಸ್ಕರಿಸಿದರು. ಈ ವೇಳೆ ನಿಖಿಲ್‌ಗೆ ಗುಡ್‌ಲಕ್‌ ಎಂದು ಹಸ್ತಲಾಘವ ನೀಡಿದರು. ನಿನಗೆ ಗುಡ್‌ಲಕ್‌ ಆಗಬೇಕೆಂದರೆ ಎಲ್ಲರನ್ನೂ ಮೊದಲು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸಲಹೆ ನೀಡಿದರಲ್ಲದೆ, ಈಗ ಕಾಲಿಗೆ ಬಿದ್ದು ಆಮೇಲೆ ಜುಟ್ಟು ಹಿಡಿಯಬೇಡಿ ಎಂದು ಹಾಸ್ಯಧಾಟಿಯಲ್ಲಿ ಚಟಾಕಿ ಹಾರಿಸಿದರು.

ಟಾಪ್ ನ್ಯೂಸ್

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.