ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿದ್ದು ದೇವೇಗೌಡರು
Team Udayavani, Apr 10, 2019, 11:23 AM IST
ಶ್ರೀರಂಗಪಟ್ಟಣ: ಮಾಜಿ ಪ್ರಧಾನಿ ದೇವೇಗೌಡರು 1996ರಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಹಿಳೆಯರಿಗೆ ಮೀಸಲಾತಿ ತಂದು ಕೊಟ್ಟಿದ್ದರಿಂದ ಇಂದು ಮಹಿಳೆಯರು ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯವಾಗಿ ಬೆಳೆಯಲು ಕಾರಣರಾಗಿದ್ದಾರೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು.
ಪಟ್ಟಣದಲ್ಲಿ ನಡೆದ ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಂಡ್ಯ ಲೋಕಸಭಾ ಚುನಾವಣೆ ಪ್ರಯುಕ್ತ ಏರ್ಪಡಿಸಿದ್ದ ಸ್ತ್ರೀಶಕ್ತಿ ಸಂಘದ ಸದಸ್ಯರ ಸಮಾವೇಶದಲ್ಲಿ ಮಾತನಾಡಿದ ಅವರು, ಸ್ಥಳೀಯ ಚುನಾವಣೆಯಲ್ಲಿ ಮಹಿಳೆಯರಿಗೆ ಮೀಸಲಾತಿ ತರದೇ ಹೋಗಿದ್ದರೆ ಮಹಿಳೆಯರು ರಾಜಕೀಯವಾಗಿ ಬೆಳೆಯಲು ಸಾಧ್ಯವಾಗುತ್ತಿರಲಿಲ್ಲ, ಹಾಗಾಗಿ ಪ್ರತಿಯೊಬ್ಬ ಮಹಿಳೆಯೂ ದೇವೇಗೌಡರನ್ನು ಸ್ಮರಿಸಿಕೊಳ್ಳಬೇಕಾಗುತ್ತದೆ ಎಂದರು.
ಮಹಿಳಾ ಸಬಲೀಕರಣಕ್ಕೆ ಆದ್ಯತೆ: ಮುಖ್ಯಮಂತ್ರಿ ಕುಮಾರಸ್ವಾಮಿ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತುಕೊಟ್ಟಿದ್ದಾರೆ. ಮಾತೃಶ್ರೀ ಯೋಜನೆ, ಸ್ತ್ರೀಶಕ್ತಿ ಗುಂಪುಗಳಿಗೆ ಬಡ್ಡಿರಹಿತ 5 ಲಕ್ಷದವರೆಗೆ ಸಾಲ, 4ರಷ್ಟು ಬಡ್ಡಿ ದರದಲ್ಲಿ ಸುಮಾರು 10 ಲಕ್ಷದವರೆಗೂ ಸಾಲ ಕೊಡುವ ಯೋಜನೆ, ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲಕ್ಕಾಗಿ ಬಡವರ ಬಂಧು ಯೋಜನೆ, ರೈತರ ಸಾಲ ಮನ್ನಾ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಅವರ ತಂದಿದ್ದಾರೆ. ಮತ್ತಷ್ಟು ಅಭಿವೃದ್ಧಿಗಾಗಿ ಕುಮಾರಸ್ವಾಮಿ ಅವರ ಕೈ ಬಲಪಡಿಸುವ ಉದ್ದೇಶದಿಂದ ಮಂಡ್ಯ ಲೋಕಸಭಾ ಚುನಾವಣೆಯಿಂದ ಸ್ಪರ್ಧಿಸಿರುವ ನಿಖೀಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಬೇಕು ಎಂದು ಮಹಿಳಾ ಮತದಾರರಲ್ಲಿ ಮನವಿ ಮಾಡಿದರು.
ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸಂತೋಷ್, ತಾಲೂಕು ಅಧ್ಯಕ್ಷ ಪೈ.ಮುಕುಂದ, ಜಿಪಂ ಸದಸ್ಯರಾದ ಸವಿತಾ, ಕಾವ್ಯ, ಎಂ.ಸಿ.ಮರಿಯಪ್ಪ, ತಾಪಂ ಅಧ್ಯಕ್ಷೆ ಮಂಜುಳಾ, ತಾಪಂ ಸದಸ್ಯರಾದ ಸರಸ್ವತಿ, ಭವ್ಯ, ಪುರಸಭೆ ಸದಸ್ಯರಾದ ವೆಂಕಟೇಶ್, ನಂದೀಶ್, ನಿಳಿನಿರಾಜ್ ಞಇತರ ಮುಖಂಡರು ಹಾಜರಿದ್ದರು.
ಅಂಬಿ ಬದುಕಿದ್ದಾಗ ಈ ಪ್ರೀತಿ ಎಲ್ಲಿ ಹೋಗಿತ್ತು?
ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿ, ಅಂಬರೀಶ್ ಆರೋಗ್ಯ ಹಾಗೂ ಅವರು ರಾಜಕೀಯವಾಗಿ ವಿಫಲರಾಗಲು ಸುಮಲತಾ ಅವರೇ ಕಾರಣ. ಜಿಲ್ಲೆಯ ಜನರ ಮೇಲೆ ಈಗಿರುವ ಕನಿಕರ ಹಾಗೂ ಪ್ರೀತಿ ಅಂಬರೀಶ್ ಬದುಕಿದ್ದಾಗ ಕೇವಲ ಶೇ.5ರಷ್ಟು ಪ್ರೀತಿ, ಕನಿಕರಇದ್ದಿದ್ದರೆ ಅಂಬರೀಶ್ ಇನ್ನು ಬಹಳ ಕಾಲ ಬದುಕಿ ಉಳಿಯುತ್ತಿದ್ದರು. ಜೊತೆಗೆ ಜಿಲ್ಲೆಯ ಜನರು ನಿಮ್ಮನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಿದ್ದರು ಎಂದು ಸುಮಲತಾ ವಿರುದ್ಧ ಹರಿಹಾಯ್ದರು.
ಪಕ್ಷೇತರ ಅಭ್ಯರ್ಥಿ ಸುಮಲತಾ ಈಗಅತಿಯಾದ ದುಃಖದಿಂದ ಚುನಾವಣಾ ಪ್ರಚಾರ ನಡೆಸಿ ಮಹಿಳೆಯರ ವೊಟು ನಮಗೇ ಎನ್ನುತ್ತಿದ್ದಾರೆ. ಸುಮಾರು 20 ವರ್ಷಗಳಿಂದ ಅಂಬರೀಶ್ ಹಾಗೂ ಮಂಡ್ಯ ಜಿಲ್ಲೆಯ ಸಂಬಂಧವಿದೆ. ಆದರೆ ಜಿಲ್ಲೆಯ ಹೆಣ್ಣುಮಕ್ಕಳು ಅವರ ಮನೆ ಬಾಗಿಲಿಗೆ ಹೋದಾಗ, ಇವರು ನಮ್ಮ ಜಿಲ್ಲೆಯವರು, ನಮ್ಮವರು ಎಂದು ಎಷ್ಟು ಮಹಿಳೆಯರಿಗೆ ನೀರು ಕೊಟ್ಟು ಸಂತೈಸಿದ್ದಾರೆ ಎಂದು ಪ್ರಶ್ನಿಸಿದರು. ಜಿಲ್ಲೆ ಹೆಣ್ಣುಮಕ್ಕಳು ಅಂಬರೀಶ್‌ರನ್ನು ನೋಡಲು ಅವರ ಮನೆ ಬಾಗಿಲಿಗೆ ಹೋದಾಗ ಸುಮಲತಾ ಸೌಜನ್ಯಕ್ಕಾದರೂ ಅವರನ್ನು ಮಾತನಾಡಿಸಿ ಕಳುಹಿಸುವ ಕನಿಷ್ಠ ನಡವಳಿಕೆ ನಿಮಗೆ ಇರಲಿಲ್ಲ. ಆದರೆ ಈಗ ಜಿಲ್ಲೆಯ ಮಹಿಳೆಯರ ವೋಟು ನಮಗೆ ಬೇಕು ಅಂತಾ ಕೇಳುತ್ತಿದ್ದಾರೆ. ಇದು ಮತದಾರರನ್ನು ದಾರಿ ತಪ್ಪಿಸುವ ಕೆಲಸ. ಇದಕ್ಕೆ ಜಿಲ್ಲೆಯ ಮತದಾರರು ಕಿವಿಗೊಡಬಾರದು. ಕಷ್ಟ ಸುಖಗಳಿಗೆ ಸ್ಪಂದಿಸುವ ಪ್ರಾಮಾಣಿಕ ವ್ಯಕ್ತಿ ನಿಖೀಲ್ ಗೆ ಮತ ಹಾಕುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ
ಸಹಕರಿಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
Vice President: 2047ಕ್ಕೆ ವಿಕಸಿತ ಭಾರತ ನಿರ್ಮಾಣ: ಜಗದೀಪ್ ಧನಕರ್
Mahadevapura: ಲಿಫ್ಟ್ ಗುಂಡಿಗೆ ಬಿದ್ದ ಬಾಲಕ ಸಾವು
MUST WATCH
ಹೊಸ ಸೇರ್ಪಡೆ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ
Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.