ಬೇಬಿಬೆಟ್ಟ ಉಳಿಸಲು ಸಚಿವರಿಗೆ ಮನವಿ
Team Udayavani, Jun 15, 2020, 5:50 AM IST
ಕೆ.ಆರ್.ಪೇಟೆ: ಬೇಬಿಬೆಟ್ಟದ ವ್ಯಾಪ್ತಿಯಲ್ಲಿ ಮತ್ತೆ ಅಕ್ರಮವಾಗಿ ಆರಂಭವಾಗಿರುವ ಕ್ರಷರ್ ನಿಲ್ಲಿಸಬೇಕು. ಬೇಬಿಬೆಟ್ಟ ಉಳಿಸಿ ಕನ್ನಂಬಾಡಿ ಕಟ್ಟೆ ರಕ್ಷಿಸಲು ರೈತ ಹೋರಾಟ ಸಮಿತಿ ಸದಸ್ಯರು ಸಚಿವ ಡಾ.ನಾರಾಯಣಗೌಡರನ್ನು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭೇಟಿ ಮಾಡಿ, ಮನವಿ ಸಲ್ಲಿಸಿದರು.
ಬೇಬಿಬೆಟ್ಟದಲ್ಲಿ ಅಕ್ರಮವಾಗಿ ಕ್ರಷರ್‌ಗಳ ಮಾಲೀಕರು ಮೆಗ್ಗರ್ ಬ್ಲಾಸ್ಟ್, ಬೋರ್ ಬ್ಲಾಸ್ಟ್ ಸೇರಿದಂತೆ ಸಿಡಿಮದ್ದನ್ನು ಬಳಸಿ ಬಂಡೆಗಳನ್ನು ಸಿಡಿಸಿ ಪರಿಸರ ನಾಶ ಮಾಡುತ್ತಿದ್ದಾರೆ. ಅಲ್ಲದೇ ಕನ್ನಂಬಾಡಿ ಕಟ್ಟೆಗೂ ಸಂಚಕಾರ ತಂದಿದ್ದಾರೆ. ಬಂಡೆಗಳನ್ನು ಸಿಡಿಸುವಾಗ ಕ್ರಷರ್‌ಗಳಲ್ಲಿ ಕೆಲಸ ಮಾಡುತ್ತಿರುವ ಹೊರ ರಾಜ್ಯಗಳ ಕಾರ್ಮಿಕರಿಗೆ ಸಾವು ನೋವು ಸಂಭವಿಸಿದೆ.
ಜಿಲ್ಲಾಡಳಿತ, ತಾಲೂಕು ಆಡಳಿತ ರೈತರ ಸಮಸ್ಯೆ ಕೇಳುತ್ತಿಲ್ಲ. ಕ್ರಷರ್ ಮಾಲೀಕರೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಅಕ್ರಮ ಚಟುವಟಿಕೆಗೆ ಬೆಂಬಲ ನೀಡುತ್ತಿದ್ದಾರೆ ಎಂದು ಸಚಿವರಲ್ಲಿ ದೂರಿದರು. ಮನವಿ ಸ್ವೀಕರಿಸಿದ ಸಚಿವ ನಾರಾಯಣಗೌಡ ಮಾತನಾಡಿ, ಅಕ್ರಮ ಕಲ್ಲು ಗಣಿಗಾರಿಕೆಯನ್ನು ನಿಲ್ಲಿಸುವಂತೆ ಕೂಡಲೇ ಜಿಲ್ಲಾಧಿಕಾರಿಗೆ ಸೂಚನೆ ನೀಡುತ್ತೇನೆ.
ಸ್ಥಳಕ್ಕೆ ಬಂದು ಪರಶೀಲನೆ ಮಾಡುವುದಾಗಿ ರೈತರಿಗೆ ಭರವಸೆ ನೀಡಿದರು. ಸಮಿತಿ ಅಧ್ಯಕ್ಷ ಬಿ.ಎಂ.ಸಿದರಾಜು, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎಚ್.ಎನ್.ಮಂಜುನಾಥ್, ರೈತ ಮುಖಂಡರಾದ ಲೋಕೇಶಮೂರ್ತಿ, ಶಿವಾನಂದ, ಯೋಗೇಶ್, ಕುಮಾರ, ನಾಗೇಂದ್ರ, ಪದ್ಮರಾಜು, ಅಪ್ಪಾಜಿ, ನಟರಾಜು, ಬಿ.ಎಸ್. ಮಂಜುನಾಥ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ
Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.