ಕೆಪಿಸಿಸಿ ಅಧ್ಯಕ್ಷರ ನೇಮಕ: ಹೈಕಮಾಂಡ್ ತೀರ್ಮಾನವೇ ಅಂತಿಮ
Team Udayavani, Mar 8, 2020, 5:15 PM IST
ಮಂಡ್ಯ: ಕೆಪಿಸಿಸಿ ಅಧ್ಯಕ್ಷರ ನೇಮಕದ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಬೆಂಗಳೂರಿನಿಂದ ಚಾಮರಾಜನಗರಕ್ಕೆ ಹೋಗುವ ಮಾರ್ಗಮಧ್ಯೆ ಮದ್ದೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಹಾಗೂ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡುವ ಕುರಿತಂತೆ ಪಕ್ಷದ ಹಿರಿಯ ನಾಯಕರಲ್ಲಿ ಯಾವುದೇ ವಿರೋಧವಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯ ಕಾಂಗ್ರೆಸ್‌ನ ಎಲ್ಲ ನಾಯಕರನ್ನು ಒಗ್ಗೂಡಿಸಿಕೊಂಡು ಹೋಗುವ ಹಾಗೂ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕೆನ್ನುವುದು ಪಕ್ಷದ ಹೈಕಮಾಂಡ್ ಆಲೋಚನೆಯಾಗಿದೆ. ಹೀಗಾಗಿ ಅಧ್ಯಕ್ಷರ ನೇಮಕಾತಿ ವಿಳಂಬವಾಗುತ್ತಿದೆ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದಲ್ಲಿ ನನ್ನ ಹಸ್ತಕ್ಷೇಪವಿಲ್ಲ. ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೂ ನಾನಲ್ಲ. ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಇನ್ನೂ ಕೆಲವು ಹಿರಿಯ ನಾಯಕರಿದ್ದಾರೆ. ಅವರಿಗೆ ಸ್ಥಾನ ನೀಡಬೇಕೆನ್ನುವುದು ನನ್ನ ಸ್ಪಷ್ಟ ಅಭಿಪ್ರಾಯವಾಗಿದೆ ಎಂದರು. ಪಕ್ಷ ಸಂಘಟನೆಯ ದೃಷ್ಟಿಯಿಂದ ಹೈಕಮಾಂಡ್ ನನಗೆ ಯಾವುದೇ ಹೊಣೆಗಾರಿಕೆ ವಹಿಸಿದರೂ ನಾನು ನಿರ್ವಹಿಸಲು ಸಿದ್ಧನಿದ್ದೇನೆ ಎಂದು ತಿಳಿಸಿದರು. ರಾಜ್ಯದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ದಲಿತರ ಮೇಲೆ ನಿರಂತರ ನಡೆಯುತ್ತಿದೆ ಎನ್ನುವುದು ನಾಚಿಕೆಗೇಡಿನ ಸಂಗತಿ. ಬಿಜೆಪಿ ಸರ್ಕಾರ ದಲಿತರಿಗೆ ಸೂಕ್ತ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಗಂಭೀರ ಆರೋಪ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಕಾರ್ಯದರ್ಶಿ ಅಜ್ಜಹಳ್ಳಿ ರಾಮಕೃಷ್ಣ, ಮದ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಜಿಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಸಿದ್ದಲಿಂಗು, ಕಾರ್ಮಿಕ ಘಟಕದ ಏಳುಮಲೈ, ಮಾಜಿ ಸೆನೆಟ್ ಸದಸ್ಯ ವಿ.ಕೆ.ಜಗದೀಶ್, ಮಂಡ್ಯ ನಗರಸಭೆ ಮಾಜಿ ಸದಸ್ಯ ದೀಪಕ್, ಮುಖಂಡರಾದ ಎಚ್.ವಿ.ರಾಮಶೆಟ್ಟಿ, ಮೇಲುಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.