ಮಂಡ್ಯ ವಿಶ್ವ ವಿದ್ಯಾಲಯಕ್ಕೆ ವಿಶೇಷಾಧಿಕಾರಿ ನೇಮಕ
Team Udayavani, Feb 4, 2020, 4:59 PM IST
ಮಂಡ್ಯ: ಕಳೆದೊಂದು ತಿಂಗಳಿಂದ ಕಗ್ಗಂಟಾಗಿದ್ದ ಮಂಡ್ಯ ವಿಶ್ವವಿದ್ಯಾಲಯದ ಬಿಕ್ಕಟ್ಟಿಗೆ ಪರಿಹಾರ ಸಿಗುವ ಆಶಾಕಿರಣ ಮೂಡಿದೆ. ಇದೀಗ ಸರ್ಕಾರ ಮಂಡ್ಯ ವಿಶ್ವವಿದ್ಯಾಲಯಕ್ಕೆ ಪ್ರೊ.ಕೆ.ಎನ್. ನಿಂಗೇಗೌಡರನ್ನು ನೂತನ ವಿಶೇಷಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನಿವೃತ್ತ ಕುಲಸಚಿವರಾಗಿರುವ ಪ್ರೋ.ಕೆ.ಎನ್.ನಿಂಗೇಗೌಡ ಅವರನ್ನು ಸರ್ಕಾರ ಮಂಡ್ಯ ವಿಶ್ವವಿದ್ಯಾಲಯದ ವಿಶೇಷಾಧಿಕಾರಿಯಾಗಿ ನೇಮಕ ಮಾಡಿದ್ದು, ಸೋಮವಾರ ಕಾಲೇಜಿಗೆ ಆಗಮಿಸಿ ಅಧಿಕಾರ ವಹಿಸಿಕೊಂಡರು. ಪ್ರಾಂಶುಪಾಲರ ಕಚೇರಿಯಲ್ಲಿ ಪ್ರಭಾರ ವಿಶೇಷಾಧಿಕಾರಿಯಾಗಿದ್ದ ಡಾ.ಮಹಾಲಿಂಗು, ಪ್ರೊ.ನಿಂಗೇಗೌಡ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ವಿದ್ಯಾರ್ಥಿಗಳ ಪ್ರತಿಭಟನೆ: ಮಂಡ್ಯ ವಿವಿಯನ್ನು ವಿಶ್ವವಿದ್ಯಾಲಯವಾಗಿಯೇ ಮುಂದುವರಿಸಬೇಕು. ಪರೀಕ್ಷೆಗಳನ್ನು ವಿಶ್ವವಿದ್ಯಾಲಯದಡಿಯಲ್ಲೇ ನಡೆಸುವಂತೆ ಒತ್ತಾಯಿಸಿ ಕಳೆದ 12 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಸೋಮವಾರವೂ ಪ್ರತಿಭಟನೆ ನಡೆಸಿದರು.
ವಿಶೇಷಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರೊ.ಕೆ.ಎನ್.ನಿಂಗೇಗೌಡ, ಪ್ರತಿಭಟನೆ ಸ್ಥಳಕ್ಕೆ ತೆರಳಿ ಮಾತುಕತೆ ನಡೆಸಿದರು. ನಿಮ್ಮ ಶೈಕ್ಷಣಿಕ ಅಭಿವೃದ್ಧಿಗೆ ನಾವೆಲ್ಲರೂ ಕಟಿಬದ್ಧರಾಗಿದ್ದೇವೆ. ನಿರಂತರ ಮುಷ್ಕರ, ಹೋರಾಟಗಳಿಂದ ಕಾಲೇಜಿಗೆ ಕೆಟ್ಟ ಹೆಸರು ಬರಲಿದೆ. ಪ್ರತಿಭಟನೆ ಕೈಬಿಟ್ಟು ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಚರ್ಚಿಸುವಂತೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.