ಕಾನೂನು ಉಲ್ಲಂಘಿಸಿದರೆ ಬಂಧಿಸಿ
Team Udayavani, Apr 9, 2020, 5:00 PM IST
ಮಳವಳ್ಳಿ: ಕೋವಿಡ್ 19 ಹರಡುವುದನ್ನು ತಡೆಗಟ್ಟಲು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸರಿಗೆ 2015ರ ಕಾಯ್ದೆ ಪ್ರಕಾರ ವಿಶೇಷ ಅಧಿಕಾರ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಪಟ್ಟಣದ ಈದ್ಗಾಮೊಹಲ್ಲಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ ಡಿವೈಎಸ್ಪಿ ಕಚೇರಿಯಲ್ಲಿ ಅಧಿಕಾರಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದುವರೆಗೂ ನಾಲ್ಕು ಕೊರೊನಾ ಪಾಜಿಟಿವ್ ಪ್ರಕರಣ ದಾಖಲಾಗಿವೆ. ಇದರಿಂದಾಗಿ ಆತಂಕ ಸೃಷ್ಟಿಯಾಗಿದೆ. ಜನದಟ್ಟಣೆ ಕಡಿಮೆ ಮಾಡಿ ಸೋಂಕು ಹರಡುವುದನ್ನು ತಡೆಗಟ್ಟಲು ಪೊಲೀಸರಿಗೆ ಕಾನೂನು ಉಲ್ಲಂಘಿಸುವ ಯಾರೇ ಆದರೂ ಅವರನ್ನು ಬಂಧಿಸುವ ವಿಶೇಷ ಅಧಿಕಾರ ನೀಡಲಾಗಿದೆ ಎಂದು ಹೇಳಿದರು.
ನಾನು ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಉಸ್ತುವಾರಿ ಸಚಿವ ಆಗಿರುವುದರಿಂದ ಜಿಲ್ಲೆಗೆ ಸಂಬಂಧಿಸಿದ ಕ್ಷಣ ಕ್ಷಣದ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಪಡೆದುಕೊಳ್ಳುತ್ತಿದ್ದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವುದರಿಂದ ಅಲ್ಲಿಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಅಲ್ಲ ದೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಮಂಡಳಿಗೆ ಉಪಾಧ್ಯಕ್ಷನಾಗಿರುವುದರಿಂದ ಕೆಲಸದ ಒತ್ತಡ ಹೆಚ್ಚಾಗಿದ್ದು, ಈಗ ಮಂಡ್ಯದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರುವುದರಿಂದ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಶಾಸಕ ಡಾ.ಕೆ.ಅನ್ನದಾನಿ, ಜಿಲ್ಲಾಧಿಕಾರಿ ಡಾ.ವೆಂಕಟೇಶ್, ಎಸ್ಪಿ ಪರಶುರಾಮ್, ಜಿಪಂ ಸಿಇಒ ಯಾಲಕ್ಕಿ ಗೌಡ, ಎಸಿ ಸೂರಜ್, ಡಿಹೆಚ್ಒ ಮಂಚೇಗೌಡ, ತಹಶೀಲ್ದಾರ್ ಚಂದ್ರಮೌಳಿ, ನೋಡೆಲ್ ಅಧಿಕಾರಿ ಬಿಪಿನ್ ಬೋಪ್ಪಣ್ಣ, ಡಿವೈಎಸ್ಪಿ ಎಂ.ಜೆ.ಪೃಥ್ವಿ, ತಾಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ, ಪುರಸಭೆ ಮುಖ್ಯಾಧಿಕಾರಿ ಗಂಗಾಧರ್, ಸಿಪಿಐ ಧಮೇಂದ್ರ, ಪಿಐಗಳಾದ ರಮೇಶ್, ಮಂಜುನಾಥ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.