ಪ್ರಕೃತಿ ಸಂರಕ್ಷಣೆಗೆ ಸೇನಾನಿಗಳಾಗಿ


Team Udayavani, Jun 20, 2020, 5:18 AM IST

senani

ಮಂಡ್ಯ: ಪ್ರಕೃತಿ ಇಲ್ಲದೇ ಮಾನವ ಸಂಕುಲ ಸೇರಿದಂತೆ ಪ್ರಾಣಿ-ಪಕ್ಷಿಗಳು ಇರಲು ಸಾಧ್ಯವಿಲ್ಲ. ಆದ್ದರಿಂದ ಪ್ರಕೃತಿಯ ಸಂರಕ್ಷಣೆಗಾಗಿ ಎಲ್ಲರೂ ಯುವ ಸೇನಾನಿಗಳಾಗಿ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್‌  ಹೇಳಿದರು.

ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಅರಣ್ಯ ಇಲಾಖೆ, ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ ಮಂಡ್ಯ ಸಹಯೋಗದಲ್ಲಿ ನಡೆದ ಲಕ್ಷ-ವೃಕ್ಷ ಆಂದೋಲನ ಕಾರ್ಯಕ್ರಮದಡಿ  ವಿದ್ಯಾರ್ಥಿಗಳಿಗೆ ಸಸಿ ವಿತರಿಸಿ ಮಾತನಾಡಿ, ಸಮಾಜದ ಹಾಗೂ ಪ್ರಕೃತಿಯ ಬಗ್ಗೆ ಕಾಳಜಿ ವಹಿಸುವುದು ಪ್ರತಿಯೊಬ್ಬ ಯುವಕ-ಯುವತಿಯರ ಕರ್ತವ್ಯವಾಗಿದೆ ಎಂದರು.

ಪಿಯುಸಿ ಪರೀಕ್ಷೆ ಮುಗಿಸಿದ ವಿದ್ಯಾರ್ಥಿಗಳಿಗೆ  12 ಸಾವಿರಕ್ಕೂ ಹೆಚ್ಚು ಸಸಿ ವಿತರಣೆ ಮಾಡುತ್ತಿದ್ದೇವೆ. ಅದೇ ರೀತಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ 22 ಸಾವಿರ ವಿದ್ಯಾರ್ಥಿಗಳಿಗೂ ಕೂಡ ಸಸಿಗಳನ್ನು ಕೊಡುವ ಯೋಜನೆ ಮಾಡಿಕೊಂಡಿದ್ದೇವೆ ಎಂದರು.

ಲಕ್ಷ-ವೃಕ್ಷ ಆಂದೋಲನ ಇಡೀ ದೇಶದಲ್ಲೇ ಮಂಡ್ಯ ಜಿಲ್ಲೆಯಲ್ಲಿ ಅನುಷ್ಠಾನವಾಗಿರುವ ನೂತನ ಕಾರ್ಯಕ್ರಮ. ವಿದ್ಯಾರ್ಥಿಗಳು ಸಸಿಗಳನ್ನು ನಿಮ್ಮ ಮನೆ ಅಂಗಳ, ಶಾಲೆ ಅಥವಾ ನಿಮ್ಮ ಜಮೀನಿನಲ್ಲಿ ನೆಟ್ಟು ಸಂರಕ್ಷಣೆ ಮಾಡಿ, ಮುಂದಿನ ವರ್ಷ ಸಂರಕ್ಷಣೆ ಮಾಡಿದ ಗಿಡದೊಂದಿಗೆ ನಿಮ್ಮ  ಛಾಯಾಚಿತ್ರಗಳನ್ನು ತೆಗೆದು ಜಿಲ್ಲಾಡಳಿತಕ್ಕೆ ಕಳುಹಿಸಿಕೊಟ್ಟರೆ ಜಿಲ್ಲಾಡಳಿತದಿಂದ ಅಭಿನಂದನಾ ಪತ್ರ ನೀಡಲಾಗುವುದು ಎಂದು ತಿಳಿಸಿದರು.

ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆಯ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ, ಅರಣ್ಯ ಇಲಾಖೆ  ಡಿಎಫ್ಒ ವೆಂಕಟೇಶ್‌, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಜಿ. ಗುರುಸ್ವಾಮಿ, ರೆಡ್‌ಕ್ರಾಸ್‌ ಸಂಸ್ಥೆ ನಿರ್ದೇಶಕರಾದ ರಂಗಸ್ವಾಮಿ, ಮಂಗಲ ಎಂ.ಯೋಗೇಶ್‌, ಪ್ರಾಂಶುಪಾಲರಾದ ತಮ್ಮಣ್ಣಗೌಡ, ನಾರಾಯಣ್‌ ಹಾಜರಿದ್ದರು.

ಟಾಪ್ ನ್ಯೂಸ್

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

courts

Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.