ಮಿಡತೆಗಳ ನಿಯಂತ್ರಣಕ್ಕೆ ಜಾಗೃತಿ ಅಗತ್ಯ
Team Udayavani, May 31, 2020, 4:39 AM IST
ಮಂಡ್ಯ: ಮಿಡತೆಗಳಿಂದ ಕೃಷಿ ಬೆಳೆಗಳಿಗೆ ಉಂಟಾಗಬಹುದಾದ ಹಾನಿ ತಪ್ಪಿಸಲು ಅಗತ್ಯ ಮುನ್ನೆಚ್ಚರಿಕೆ ಹಾಗೂ ಹತೋಟಿ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕೃಷಿ ಅಧಿಕಾರಿ ಗಳ ಸಭೆಯಲ್ಲಿ “ಮರುಭೂಮಿ ಮಿಡತೆ-ಸಣ್ಣ ಕೊಂಬಿನ ಮಿಡತೆ’ಯಿಂದ ಕೃಷಿ ಬೆಳೆಗಳಿಗೆ ಉಂಟಾ ಗುವ ಹಾನಿ ತಪ್ಪಿಸುವ ಸಂಬಂಧ ಹತೋಟಿ ಕ್ರಮಗಳ ಕುರಿತು ಮಾತನಾಡಿ, ಕೀಟದ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಬೇಕು. ಯಾವುದೇ ರೀತಿಯಲ್ಲಿಯೂ ಆತಂಕಗೊಳ್ಳದಂತೆ ಅರಿವು ಮೂಡಿಸುವುದರ ಜೊತೆಗೆ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಹತೋಟಿಗೆ ಮುಂದಾ ಗಬೇಕು ಎಂದು ಸಲಹೆ ನೀಡಿದರು.
ಹೊಗೆ ಹಾಕಿ: ಈ ಮಿಡತೆಗಳು ಗಾಳಿಯ ಧಿಕ್ಕು ಆಧರಿಸಿ ಚಲಿಸುವುದರಿಂದ ಇವುಗಳ ಚಲನ ವಲನಗಳ ಮೇಲೆ ನಿಗಾ ವಹಿಸುವುದು. ಕೀಟ ಬಾಧಿತ ಪ್ರದೇಶ ದಲ್ಲಿ ಹೊಗೆ ಮತ್ತು ಬೆಂಕಿ ಹಾಕುವುದರಿಂದ ಕೀಟ ಗಳನ್ನು ಬೇರೆಡೆಗೆ ಓಡಿಸಬಹುದು. ಬೇವಿನ ಮೂಲದ ಕೀಟನಾಶಕಗಳನ್ನು ಬೆಳೆಗಳಲ್ಲಿ ಸಿಂಪಡಿಸುವುದರಿಂದ ಕೀಟ ಬೆಳೆಹಾನಿ ಮಾಡುವುದು ಕಡಿಮೆ ಆಗುತ್ತದೆ. ಕೃಷಿ ವಿಜ್ಞಾನಿಗಳ ಸಲಹೆ ಪಡೆದು ಸೂಕ್ತ ರಸಾಯನಿಕಗಳನ್ನು ಬಳಸಿ ಕೀಟಗಳ ಹತೋಟಿ ಮಾಡಬಹುದು.
ಈ ಕುರಿತು ರೈತರು ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಕೃಷಿ ವಿಜ್ಞಾನ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬೇಕು ಕಿವಿ ಮಾತು ಹೇಳಿದರು. ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಚಂದ್ರಶೇಖರ್, ತೋಟಗಾರಿಕೆ ಉಪನಿರ್ದೇಶಕ ರಾಜು, ಉಪ ಕೃಷಿ ನಿರ್ದೇಶಕರು ಮತ್ತು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.