ಮಾನಸಿಕ ರೋಗದ ಜಾಗೃತಿ ಅವಶ್ಯ
ಮಾನಸಿಕ ರೋಗಿಗಳಿಗೆ ಮಾಟ-ಮಂತ್ರದ ಹೆಸರಲ್ಲಿ ಹಿಂಸೆ: ಎಸ್ಪಿ ಶಿವಪ್ರಕಾಶ್
Team Udayavani, May 25, 2019, 4:42 PM IST
ಮಂಡ್ಯದಲ್ಲಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮನೋರೋಗ ವಿಭಾಗ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಸ್ಕಿಜೋಫ್ರಿನಿಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಎಸ್ಪಿ ಡಿ.ಶಿವಪ್ರಕಾಶ್ ದೇವರಾಜು ಮಾತನಾಡಿದರು.
ಮಂಡ್ಯ: ಮಾನಸಿಕ ರೋಗದ ಬಗ್ಗೆ ಗ್ರಾಮೀಣರಿಗೆ ಜಾಗೃತಿ ಅವಶ್ಯ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಡಿ.ಶಿವಪ್ರಕಾಶ್ ದೇವರಾಜು ತಿಳಿಸಿದರು.
ನಗರದ ಮಿಮ್ಸ್‌ನ ಸಭಾಂಗಣದಲ್ಲಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮನೋರೋಗ ವಿಭಾಗ, ಸಮುದಾಯ ವೈದ್ಯಕೀಯ ಶಾಸ್ತ್ರ ವಿಭಾಗದ ಸಹಯೋಗದಲ್ಲಿ ವಿಶ್ವ ಸ್ಕಿಜೋಫ್ರಿನಿಯಾ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣರಿಗೆ ಮಾನಸಿಕ ರೋಗದ ಬಗ್ಗೆ ಅರಿವಿನ ಕೊರತೆ ಇದೆ. ಚಿಕಿತ್ಸೆಯ ತಿಳಿವಳಿಕೆಯಿಲ್ಲದೆ ಮಾಟ- ಮಂತ್ರದ ಹೆಸರಿನಲ್ಲಿ ತೀವ್ರ ಹಿಂಸೆಗೆ ಗುರಿಪಡಿಸಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ಮಾನಸಿಕ ಖನ್ನತೆಗೆ ಒಳಗಾದವರನ್ನು ದೂರ ಮಾಡುತ್ತಾರೆ. ಅವರ ಸಹಾಯಕ್ಕೆ ಯಾರೂ ಮುಂದಾಗುವುದಿಲ್ಲ. ಮಾನಸಿಕ ಖನ್ನತೆಗೆ ಒಳಗಾದವರಿಗೆ ಅವಶ್ಯಕ ಸಹಾಯವನ್ನು ಪೊಲೀಸ್ ಇಲಾಖೆ ನೀಡಲು ಸಿದ್ಧವಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಚೇಗೌಡ ಮಾತನಾಡಿ, ಸ್ಕಿಜೋಫ್ರಿನಿಯಾ ಮಾನಸಿಕ ಕಾಯಿಲೆಯಾಗಿದ್ದು, ಇದಕ್ಕೆ ಗುರಿಯಾದ ವ್ಯಕ್ತಿ ಮಾನಸಿಕ ಖನ್ನತೆಗೆ ಒಳಗಾಗುತ್ತಾನೆ. ಇದರಿಂದ ಭ್ರಮನಿರಸನಕ್ಕೆ ಒಳಗಾಗುತ್ತಾರೆ. ಮೆದುಳಿನಲ್ಲಿ ನಡೆಯುವ ರಾಸಾಯನಿಕ ವ್ಯತ್ಯಾಸಗಳಿಂದ ಈ ಕಾಯಿಲೆ ಬರುತ್ತದೆ. ರಕ್ತದೊತ್ತತ್ತಡ, ಆಘಾತ, ಪರಿಸರ, ಮದ್ಯ ಸೇವನೆಯಿಂದ ಈ ಕಾಯಿಲೆ ಬರುತ್ತದೆ. ಅಂತಹವರು ಅವರಷ್ಟಕ್ಕೆ ಅವರೇ ಮಾತನಾಡುತ್ತಾರೆ. ಗಲಾಟೆ ಮಾಡುತ್ತಾರೆ. ಸ್ವಚ್ಛತೆ ಇರುವುದಿಲ್ಲ. ಅಂತಹವರನ್ನು ಗುರುತಿಸಿ ಸರಿಯಾದ ಚಿಕಿತ್ಸೆ ಕೊಡಿಸಿದರೆ ಗುಣಮುಖರಾಗುತ್ತಾರೆ ಎಂದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಕೆ.ಪಿ.ಅಶ್ವಥ್, ಮಿಮ್ಸ್ ನಿರ್ದೇಶಕ ಡಾ.ತ್ರಿನೇಶ್‌ಗೌಡ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಂ. ನಾಗರಾಜು, ಡಾ.ಅಶೋಕ್‌ಕುಮಾರ್, ಡಾ.ಶಶಾಂಕ್, ಚಿಕ್ಕರಸೇ ಗೌಡ, ಮಹಮದ್‌ಕುಟ್ಟಿ, ಗೋವಿಂದರಾಜು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.