ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Team Udayavani, Dec 23, 2024, 6:35 AM IST

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಮಂಡ್ಯ: ಬರೋಬ್ಬರಿ 66 ವರ್ಷಗಳ ಅನಂತರ ಗಡಿನಾಡು ಬಳ್ಳಾರಿ ಜಿಲ್ಲೆ 88ನೇ ಅಖಿಲ ಭಾರತ ಸಾಹಿತ್ಯ ಕನ್ನಡ ಸಮ್ಮೇಳನದ ತೇರು ಎಳೆಯಲಿದೆ. ಗಡಿನಾಡು ಪ್ರದೇಶಗಳಲ್ಲಿ ಕನ್ನಡದ ಕಹಳೆ ಊದುವ ಮೂಲಕ ಭಾಷಾ ಏಳ್ಗೆಗೆ ಶ್ರಮಿಸುವುದಲ್ಲದೆ, ಅಲ್ಲಿನ ಜನರ ನಾಡಿಮಿಡಿತದಲ್ಲಿ ಕನ್ನಡವನ್ನು ಅನುರಣಿಸುವಂತೆ ಮಾಡುವ ಮುಖ್ಯ ಉದ್ದೇಶವೂ ಈ ಆಯ್ಕೆ ಹಿಂದಿದೆ ಎನ್ನಲಾಗಿದೆ.

ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಭೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗಡಿನಾಡು ಭಾಗದಲ್ಲಿ ಆಯೋಜಿಸುವ ಕುರಿತು ತೀರ್ಮಾನ ಕೈಗೊಂಡಿತು. ಈ ಹಿಂದೆ ವಿ.ಕೃ. ಗೋಕಾಕ್‌ ಅಧ್ಯಕ್ಷತೆಯಲ್ಲಿ ಬಳ್ಳಾರಿಯಲ್ಲಿ 40ನೇ ಸಮ್ಮೇಳನ ನಡೆದಿತ್ತು. ಇದೀಗ ಮುಂದಿನ ಸಮ್ಮೇಳನ ಬಳ್ಳಾರಿಯಲ್ಲಿ ನಡೆಯಲು ಹಲವು ರೀತಿಯ ಕಾರಣಗಳಿವೆ.

ಪರಿಷತ್‌ನ ಸಂಪ್ರದಾಯ
ಸಮ್ಮೇಳನ ಆಯೋಜಿಸುವಾಗ ಉತ್ತರ ಮತ್ತು ದಕ್ಷಿಣ ಸಮನ್ವಯ ಯಾವಾಗಲೂ ಇದ್ದು, ಅದನ್ನು ಪಾಲನೆ ಮಾಡಲಾಗಿದೆ. ಉತ್ತರ, ದಕ್ಷಿಣ, ಮಧ್ಯ, ಕರಾವಳಿ ಮಾನ್ಯತೆ ನೀಡಲಾಗುತ್ತದೆ. ಕರಾವಳಿ, ಮಡಿಕೇರಿ-ಮಲೆನಾಡು ಭಾಗದಲ್ಲಿ ಈಗಾಗಲೇ ನುಡಿತೇರು ಎಳೆಯಲಾಗಿದೆ.

ಹಾವೇರಿಯಲ್ಲೇ ಬಳ್ಳಾರಿಗೆ ಬಹುಮತ
ಕಳೆದ 30 ವರ್ಷದ ಅವಧಿಯಲ್ಲಿ ಉಡುಪಿ ಮತ್ತು ತುಮಕೂರಿನಲ್ಲಿ ಕೂಡ ಸಾಹಿತ್ಯ ಸಮೇ¾ಳನ ಆಯೋಜಿಸಲಾಗಿದೆ. ತುಮಕೂರಿನಲ್ಲಿ ಸಮ್ಮೇಳನ ನಡೆದು 30 ವರ್ಷ, ಚಿಕ್ಕಮಗಳೂರಿನಲ್ಲಿ ಸಮ್ಮೇಳನ ನಡೆದು 25 ವರ್ಷ ಕೂಡ ಕಳೆದಿಲ್ಲ. ಸಮ್ಮೇಳನ ನಡೆದು ಹೆಚ್ಚು ವರ್ಷ ಆಗಿರುವುದು ಬಳ್ಳಾರಿ ಜಿಲ್ಲೆ. ಆ ಹಿನ್ನೆಲೆಯಲ್ಲಿ ಈ ಬಾರಿ ಗಣಿನಾಡಿಗೆ ಅವಕಾಶ ನೀಡಲಾಗಿದೆ ಎಂದು ಬೆಂಗಳೂರು ನಗರ ಕಸಾಪ ಅಧ್ಯಕ್ಷ ಪ್ರಕಾಶ್‌ ಮೂರ್ತಿ ಹೇಳುತ್ತಾರೆ.

ಹಾವೇರಿ ಸಮ್ಮೇಳನದ ಅನಂತರ ಬಳ್ಳಾರಿ ಜಿಲ್ಲೆಯಲ್ಲಿ ಸಮ್ಮೇಳನ ನಡೆಯಬೇಕಾಗಿತ್ತು. ಕಳೆದ ವರ್ಷ ಹಾವೇರಿಯಲ್ಲಿ ನಡೆದ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಬಳ್ಳಾರಿ ಜಿಲ್ಲೆಗೆ ಹೆಚ್ಚಿನ ಬಹುಮತ ಬಂದಿತ್ತು. ಆದರೆ ಕೆಲವು ಗೊಂದಲಗಳಿಂದಾಗಿ ಮಂಡ್ಯ ಜಿಲ್ಲೆ ಆತಿಥ್ಯ ವಹಿಸುವಂತಾಗಿತ್ತು. ಈ ಬಾರಿ ಸಾಕಷ್ಟು ಪೈಪೋಟಿ ಮಧ್ಯ ಅಂತಿಮವಾಗಿ ಬಳ್ಳಾರಿ ಜಿಲ್ಲೆಯಲ್ಲಿ ಸಾಹಿತ್ಯದ ತೇರು ಎಳೆಯುವ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದ್ದಾರೆ.

ಕಾಫಿ ನಾಡು, ಕಲ್ಪತರು ನಾಡು ಪೈಪೋಟಿ
88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕಾಫಿನಾಡು ಚಿಕ್ಕಮಗಳೂರು ಮತ್ತು ಕಲ್ಪತರು ನಾಡು ತುಮಕೂರು ಜಿಲ್ಲೆಗಳಿಂದ ತೀವ್ರ ಪೈಪೋಟಿ ಉಂಟಾಯಿತು. ಬಳ್ಳಾರಿ ಜಿಲ್ಲಾ ಕಸಾಪ ಅಧ್ಯಕ್ಷರ ಜತೆಗೆ ಎರಡೂ ಜಿಲ್ಲೆಗಳ ಕಸಾಪ ಅಧ್ಯಕ್ಷರು ಪಟ್ಟು ಹಿಡಿದ್ದರು. ಶನಿವಾರ ರಾತ್ರಿ 10ರ ವರೆಗೂ ನಡೆದ ಕಾರ್ಯಕಾರಿಣಿ ಸಭೆ ಬಳಿಕ ಶೇ. 90ರಷ್ಟು ಮಂದಿ ಬಳ್ಳಾರಿಯಲ್ಲಿ ನಡೆಸುವ ತೀರ್ಮಾನಕ್ಕೆ ಬಂದರು.

88ನೇ ಸಾಹಿತ್ಯ ಸಮ್ಮೇಳನಕ್ಕೆ
ಬಳ್ಳಾರಿಗೆ ಬನ್ನಿ: ಮಹೇಶ್‌ ಜೋಶಿ
ಮಂಡ್ಯ: ಸಕ್ಕರೆನಾಡಿನಲ್ಲಿ ಸಾಹಿತ್ಯದ ಹಬ್ಬವನ್ನು ಯಶಸ್ವಿಗೊಳಿಸಿದ ಕನ್ನಡಾಭಿಮಾನಿಗಳು, ಮುಂದಿನ ವರ್ಷ ಗಣಿನಾಡು ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಸಾಹಿತ್ಯ ಸಮ್ಮೇಳನಕ್ಕೆ ಬನ್ನಿ ಎಂದುಕಸಾಪ ರಾಜ್ಯಾಧ್ಯಕ್ಷ ಮಹೇಶ್‌ ಜೋಶಿ ಅವರು ಕನ್ನಡಾಭಿಮಾನಿಗಳಿಗೆ ಆಹ್ವಾನ ನೀಡಿದರು.

ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಬಳ್ಳಾರಿಯಲ್ಲಿ ನಡೆಯಲಿರುವ ಮುಂದಿನ ಸಾಹಿತ್ಯ ಸಮ್ಮೇಳವನ್ನು ಇದೇ ರೀತಿಯ ಯಶಸ್ವಿಗೊಳಿಸಲು ಕನ್ನಡಿಗರು ಬೆಂಬಲ ನೀಡಬೇಕು. 66 ವರ್ಷಗಳ ಬಳಿಕ ಬಳ್ಳಾರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ ಎಂದರು. ನಮಗೆ ಶಕ್ತಿ ತುಂಬಿದ ಎಲ್ಲರಿಗೂ ಕಸಾಪ ಚಿರ ಋಣಿಯಾಗಿದೆ ಎಂದರು.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.