ಹಣ, ಅಧಿಕಾರದಾಹದಿಂದ ಎನ್‌.ಮಹೇಶ್‌ ಬಿಜೆಪಿಗೆ


Team Udayavani, May 4, 2022, 2:31 PM IST

Untitled-1

ಮಂಡ್ಯ: ಕೊಳ್ಳೇಗಾಲ ಶಾಸಕ ಎನ್‌.ಮಹೇಶ್‌ ಹಣ ಮತ್ತು ಅಧಿಕಾರದಾಹದಿಂದ ಬಿಜೆಪಿ ಸೇರಿದ್ದಾರೆ. ಅವರಿಗೆ ಅಂಬೇಡ್ಕರ್‌ ತತ್ವ ಸಿದ್ಧಾಂತ ಮತ್ತು ದಲಿತ ಸಮಾಜದ ಮೇಲೆ ಯಾವುದೇ ಕಾಳಜಿ ಇಲ್ಲ ಎಂದು ಬಿಎಸ್ಪಿ ರಾಜ್ಯಾಧ್ಯಕ್ಷ ಎಂ. ಕೃಷ್ಣಮೂರ್ತಿ ಆರೋಪಿಸಿದರು.

ನಗರದ ಬಿಎಸ್ಪಿ ಕಚೇರಿಯಲ್ಲಿ ಜಿಲ್ಲಾ ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕ ಮತ್ತು ತಾಲೂಕು ಘಟಕ ವತಿಯಿಂದ ನಡೆದ ಜಗಜ್ಯೋತಿ ಬಸವಣ್ಣನವರ ಜಯಂತಿಯಲ್ಲಿ ಮಾತನಾಡಿದರು. ಶಾಸಕ ಎನ್‌.ಮಹೇಶ್‌ ಮಂಡ್ಯ, ಮೈಸೂರು ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ತಮಗೆ ಸಾವಿರಾರು ಬೆಂಬಲಿಗರಿದ್ದಾರೆ ಎಂದು ಬಿಜೆಪಿಯವರಿಗೆ ಸುಳ್ಳು ಹೇಳುತ್ತಿದ್ದಾರೆ. ಈಗ ಯಾವ ಜಿಲ್ಲೆಯಲ್ಲೂ ನೂರು ಜನರೂ ಸೇರ್ಪಡೆಯಾಗಿಲ್ಲ. ಇದು ಅವರ ಬಂಡವಾಳ ಬಯಲು ಮಾಡಿದೆ ಎಂದು ಹೇಳಿದರು.

ತಾಕತ್ತಿದೆಯೇ?: ಶಾಸಕ ಎನ್‌.ಮಹೇಶ್‌ರಿಗೆ ತಾಕತ್ತಿದ್ದರೆ ಈಗ ತಮ್ಮ ಜತೆ ಬಿಜೆಪಿ ಸೇರಿರುವ ಅವರಿಗೆ ಮುಂದಿನ ವಿಧಾನಸಭಾ ಚುನಾವಣೆ ಯಲ್ಲಿ ಕನಿಷ್ಠ ಒಂದೊಂದು ಜಿಲ್ಲೆಯಲ್ಲಿ ಒಬ್ಬರಿಗೆ ಟಿಕೆಟ್‌ ಕೊಡಿಸಲಿ. ಹಾಗೆಯೇ 4 ಜಿಲ್ಲೆಗಳಲ್ಲಿ ಕನಿಷ್ಠ ಒಬ್ಬರಿಗಾದರೂ ಜಿಲ್ಲಾಧ್ಯಕ್ಷರ ಹುದ್ದೆ ಕೊಡಿಸಲಿ. ಹಾಗೆಯೇ ಒಂದು ಜಿಲ್ಲೆಯಲ್ಲಿ 4 ಜನಕ್ಕೆ ಜಿಪಂ ಮತ್ತು ತಾಪಂ ಟಿಕೆಟ್‌ ಕೊಡಿಸಲು ಸಾಧ್ಯವೇ? ಕನಿಷ್ಠ ತಮ್ಮ ಒಬ್ಬ ಬೆಂಬಲಿಗನಿಗೆ ನಿಗಮ ಮಂಡಳಿ ಅಧ್ಯಕ್ಷ ಹುದ್ದೆ ಕೊಡಿಸುವ ತಾಕತ್ತಿದೆಯೇ? ಎಂದು ಸವಾಲು ಹಾಕಿದರು.

ಇನ್ನು ಬಿಜೆಪಿ ಸರ್ಕಾರ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್ಪಿಯ 8885 ಕೋಟಿ ರೂ. ಹಣ ಇತರ ಇಲಾಖೆಗಳಿಗೆ ವರ್ಗಾಯಿಸಿದೆ. ಜಲ ಜೀವನ್‌ ಮಿಷನ್‌ಗೆ 3 ಸಾವಿರ ಕೋಟಿ ರೂ. ವರ್ಗಾ ಯಿಸಿದೆ. ರಾಜ್ಯದಲ್ಲಿ ಸಾವಿರಾರು ಎಸ್ಸಿ, ಎಸ್ಟಿ ನೌಕರರು ಮತ್ತು ಬ್ಯಾಕ್‌ ಲಾಗ್‌ ಎಂಜಿನಿಯರ್ ಗಳಿಗೆ ಬಡ್ತಿಯಲ್ಲಿ ಅನ್ಯಾಯವಾಗಿದೆ. ಇವರಿಗೆ ನ್ಯಾಯ ಕೊಡಿಸಲು ಎನ್‌.ಮಹೇಶ್‌ಗೆ ತಾಕತ್ತಿದೆಯೇ? ಎಂದು ಪ್ರಶ್ನಿಸಿದರು.

ಪ್ರಶ್ನಿಸಲು ಸಾಧ್ಯವೇ?: ಮಂಗಳೂರಿನಲ್ಲಿ ಭಜ ರಂಗದಳದ ಕಾರ್ಯಕರ್ತನಿಂದ ಕೊಲೆಯಾದ ದಲಿತ ದಿನೇಶ್‌ ಮತ್ತು ತುಮಕೂರಿನ ಪೆದ್ದನಹಳ್ಳಿಯಲ್ಲಿ ಕೊಲೆಯಾಗಿರುವ ಗಿರೀಶ್‌ ಮತ್ತು ಪಿ.ಗಿರೀಶ್‌ ಎಂಬ ದಲಿತರ ಕುಟುಂಬಕ್ಕೆ ಶಿವಮೊಗ್ಗದ ಹರ್ಷನ ಕುಟುಂಬಕ್ಕೆ ನೀಡಿರುವ ಹಾಗೆ ಸರ್ಕಾರದ ವತಿಯಿಂದ ತಲಾ 25 ಲಕ್ಷ ಪರಿಹಾರ ಕೊಡಿಸೋ ಮೂಲಕ ಬಿಜೆಪಿ ಸರ್ಕಾರ ದಲಿತರ ಪರ ಇದೆ ಎಂಬುದನ್ನು ಸಾಬೀತು ಪಡಿಸಲಿ. ಉತ್ತರಪ್ರದೇಶದ ಬಿಜೆಪಿ ಸರ್ಕಾರ ಖಾಸಗಿ ಮೆಡಿಕಲ್‌ ಮತ್ತು ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಮೀಸಲಾತಿ ರದ್ದುಪಡಿಸಿದೆ. ಇದನ್ನು ಪ್ರಶ್ನಿಸಲು ಸಾಧ್ಯವೇ? ಎಂದು ಗುಡುಗಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಶಿವಶಂಕರ್‌, ವಿಧಾನಸಭಾ ಅಧ್ಯಕ್ಷ ವಕೀಲ ಅನಿಲ್‌ ಕುಮಾರ್‌, ಗೋವಿಂದರಾಜು, ತಾಲೂಕು ಉಸ್ತುವಾರಿ ಕುಮಾರ್‌, ನಗರ ಸಂಯೋಜಕ ಅನಿಲ್‌ ಆಲನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.