ಬೀರೇಶ್ವರ, ಚನ್ನಕೇಶ್ವರ ದೇಗುಲ ಮುಜರಾಯಿ ಇಲಾಖೆಗೆ ಸೇರಿಸಿ
Team Udayavani, Mar 13, 2020, 3:55 PM IST
ಮದ್ದೂರು: ತಾಲೂಕಿನ ಕೊಪ್ಪ ಹೋಬಳಿ ಮರಳಿಗ ಗ್ರಾಮದ ಶ್ರೀ ಬೀರೇಶ್ವರ ಶ್ರೀ ಚನ್ನಕೇಶ್ವರ ದೇಗುಲವನ್ನು ಸರ್ಕಾರ ಮುಜರಾಯಿ ಇಲಾಖೆ ವಶಕ್ಕೆ ತೆಗೆದುಕೊಳ್ಳುವಂತೆ ಮಾಜಿ ಗ್ರಾಪಂ ಉಪಾಧ್ಯಕ್ಷ ಪುಟ್ಟಸ್ವಾಮಿ ಜಿಲ್ಲಾ ಮತ್ತು ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.
ಜಿಪಂ ಸದಸ್ಯ ಮರಿಹೆಗ್ಗಡೆ ಹಾಗೂ ಎಂ.ಇ.ಅಶೋಕ ಹಾಗೂ ಚನ್ನೇಗೌಡ ಇತರರು ಶ್ರೀಬೀರೇಶ್ವರ- ಚನ್ನಕೇಶ್ವರ ಸೇವಾ ಟ್ರಸ್ಟ್‌ನ್ನು ರಚಿಸಿದ್ದಾರೆ. ಟ್ರಸ್ಟ್ ರಚನೆ ನಂತರ ದೇವಾಲಯದ ಅಭಿವೃದ್ಧಿ ಹೆಸರಿನಲ್ಲಿ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಮತ್ತು ಸರ್ಕಾರದಿಂದ ಕೋಟ್ಯಂತರ ರೂ. ಹಣ ಟ್ರಸ್ಟ್ ಖಾತೆಗೆ ಜಮಾ ಮಾಡಿಕೊಂಡಿದ್ದಾರೆ. ದೇಗುಲ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ಟ್ರಸ್ಟ್ ಖಾತೆಗೆ ಜಮಾ ಮಾಡದೆ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಭಕ್ತಾದಿಗಳು ನೀಡಿದ ಚಿನ್ನಾಭರಣ ಸಾರ್ವಜನಿಕರಿಗೆ ಲೆಕ್ಕ ನೀಡದೆ ವಂಚಿಸಿದ್ದಾರೆ. ಕಳೆದ 2016ರ ನವೆಂಬರ್ 8ರಂದು ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಭಾಗವಹಿಸಿದ್ದ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಹಾಗೂ ಜಿಪಂ ಸದಸ್ಯ ಮರಿ ಹೆಗಡೆ ಬೀರೇಶ್ವರ, ಚನ್ನಕೇಶ್ವರ ದೇವಾಲಯದ ಧಾರ್ಮಿಕ ಪದ್ಧತಿ ಮತ್ತು ಸಂಪ್ರದಾಯ ನಡೆಸುವ ಹಕ್ಕು ಟ್ರಸ್ಟ್‌ಗೆ ಇಲ್ಲ. ಆದರೆ, ಅಧಿಕಾರ ಹೆಗಡೆ ಯಜಮಾನರಿಗೆ ಇರುತ್ತದೆ. ಇದರಲ್ಲಿ ಟ್ರಸ್ಟ್ ಹಸ್ತಕ್ಷೇಪ ನಡೆಸುವುದಿಲ್ಲ ಎಂದು ತಹಶೀಲ್ದಾರ್ ಮುಂದೆ ಹೇಳಿಕೆ ನೀಡಿದ್ದರು. ಆನಂತರ ಧಾರ್ಮಿಕ ಪದ್ಧತಿ ಹಾಗೂ ಸಂಪ್ರದಾಯ ವಿರುದ್ಧವಾಗಿ ಭಕ್ತಾದಿಗಳಿಂದ ದೇಗುಲಕ್ಕೆ ಬಂದ ಹಣದ ಕುರಿತು ಸಾರ್ವಜನಿಕರಿಗೆ ವಿವರ ನೀಡದೆ ವಂಚಿಸಿದ್ದಾರೆ ಎಂದು ಪುಟ್ಟಸ್ವಾಮಿ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
MUST WATCH
ಹೊಸ ಸೇರ್ಪಡೆ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.