ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿವಿಹಾರ ಸ್ಥಗಿತ


Team Udayavani, Nov 9, 2021, 3:46 PM IST

ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿವಿಹಾರ ಸ್ಥಗಿತ

 ಶ್ರೀರಂಗಪಟ್ಟಣ: ಕಾವೇರಿ ಜಲಾನಯನ ಪ್ರದೇಶ ದಲ್ಲಿ ನಿರಂತರ ಸುರಿದ ಮಳೆಯಿಂದ ಕೃಷ್ಣರಾಜ ಸಾಗರ ಅಣೆಕಟ್ಟೆ ತುಂಬಿದ ಹಿನ್ನೆಲೆ ಹೆಚ್ಚಿನ ನೀರನ್ನು ಕಾವೇರಿ ನದಿಗೆ ಬಿಟ್ಟಿದ್ದರಿಂದ ರಂಗನತಿಟ್ಟು ಪಕ್ಷಿ ಧಾಮಲ್ಲಿ ದೋಣಿವಿಹಾರ ಸ್ಥಗಿತಗೊಳಿಸಲಾಗಿದೆ.

ಕಾವೇರಿ ನದಿಗೆ ಸುಮಾರು 10 ಸಾವಿರ ಕ್ಯುಸೆಕ್‌ ಹೆಚ್ಚು ನೀರು ಹರಿದು ಬರುತ್ತಿದೆ. ಪ್ರವಾಸಿಗರಿಗೆ ದೋಣಿ ವಿಹಾರ ನಡೆಸಲು ಸಾಧ್ಯವಾಗದೆ ಸುಮಾರು 18 ದೋಣಿಗಳನ್ನು ಸಿಬ್ಬಂದಿಗಳು ಒಂದೆಡೆ ಸುರಕ್ಷಿತ ಸ್ಥಳದಲ್ಲಿ ಕಟ್ಟಿ ಹಾಕಿದ್ದಾರೆ. ರಂಗನತಿಟ್ಟು ಪಕ್ಷಿಧಾಮಕ್ಕೆ ಬರುವ ಪ್ರವಾಸಿಗರಿಗೆ ಪಕ್ಷಿಧಾಮದ ಮುಂಭಾಗದಲ್ಲೇ ದೋಣಿ ವಿಹಾರ ವನ್ನು ತಾತ್ಕಾಲಿಕ ಸ್ಥಗಿತವಾಗಿರುವ ನಾಮಫ‌ಲಕ ಹಾಕಲಾಗಿದೆ. ಈ ಫ‌ಲಕ ನೋಡಿ ಅರ್ಥದಷ್ಟು ಪ್ರವಾಸಿಗರು ಅಲ್ಲಿಯೇ ಅವರ ವಾಹನಗಳನ್ನು ವಾಪಸ್‌ ಹೋಗುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.

ಪ್ರವಾಸಿಗರಿಗೆ ಬೇಸರ: ಪ್ರವಾಸಿ ತಾಣಗಳು ಕೊರೊನಾದಿಂದ ಬಂದ್‌ ಆಗಿದ್ದ ಪಕ್ಷಿಧಾಮ ಕೆಲ ತಿಂಗಳಿನಿಂದ ತೆರೆದಿದ್ದು, ಅದರಲ್ಲೂ ಮೈಸೂರು ಹಾಗೂ ಶ್ರೀರಂಗಪಟ್ಟಣ ದಸರಾ ಸಂಭ್ರಮದಿಂದ ಕಳೆ ಕಟ್ಟಿತ್ತು. ಪ್ರತಿದಿನ ಸಾವಿರಾರು ಪ್ರವಾಸಿಗರು ರಂಗನತಿಟ್ಟಿಗೆ ಕುಟುಂಬ ಸಮೇತರಾಗಿ ಪಕ್ಷಿಗಳ ನೋಡಲು ಭೇಟಿ ನೀಡಿ ಖುಷಿ ಪಡುತ್ತಿದ್ದರು. ಈಗ ಮತ್ತೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ದೋಣಿ ವಿಹಾರ ಸ್ಥಗಿತಗೋಳಿಸಿರುವುದು ಪ್ರವಾಸಿ ಗರು ಹಾಗೂ ಪಕ್ಷಿ ಪ್ರಿಯರಲ್ಲಿ ಬೇಸರ ತಂದಿದೆ.

ಪಕ್ಷಿಧಾಮಕ್ಕೆ ಬರುವ ಬಹುತೇಕ ಪ್ರವಾಸಿಗರು ದೋಣಿವಿಹಾರ ನಡೆಸಿ, ಸಾಧ್ಯವಾದಷ್ಟು ಹತ್ತಿರ ದಿಂದ ಪಕ್ಷಿಗಳನ್ನು ನೋಡಿ ಕಣ್ತುಂಬಿಕೊಳ್ಳಬೇಕು. ಪಕ್ಷಿಗಳ ವಿವಿಧ ಭಂಗಿಗಳನ್ನು ಸೆರೆಯಿಡಿಯ ಬೇಕು ಎಂಬ ಆಸೆಯಿಂದ ಪಕ್ಷಿಧಾಮಕ್ಕೆ ಆಗಮಿಸುವ ಪ್ರವಾಸಿಗರಿಗೆ ಇದೀಗ ನಿರಾಸೆಯಾಗಿದೆ.

ಬೃಹತ್‌ ವೀಕ್ಷಣಾಲಯ ನಿರ್ಮಾಣ: ಪಕ್ಷಧಾಮದ ಸಿಬ್ಬಂದಿ ಎರಡು ಬೃಹತ್‌ ವೀಕ್ಷಣಾಲಯಗಳನ್ನು ನಿರ್ಮಾಣ ಮಾಡಿದ್ದು, ಈ ವೀಕ್ಷಣಾಲಯದಿಂದ ಪಕ್ಷಿಧಾಮದ ನೋಟವನ್ನು ವೀಕ್ಷಿಸಬಹುದಾಗಿದೆ. ಬ್ಯಾಟರಿ ಚಾಲಿತ ವಾಹನದಲ್ಲಿ ಸುಮಾರು 8 ಜನರನ್ನು ಪಕ್ಷಿಧಾಮದ ಸುತ್ತ ಸುತ್ತಾಡಿಸುವ ವ್ಯವಸ್ಥೆಯನ್ನು ಇಲಾಖೆ ಮಾಡಿಕೊಂಡಿದೆ. ಇದರಿಂದ ವೃದ್ಧರು ಹಾಗೂ ದಿವ್ಯಾಂಗರು ಈ ಬ್ಯಾಟರಿ ಚಾಲಿತ ವಾಹನದಲ್ಲಿ ಕುಳಿತು ಸುತ್ತಾಡುವ ವ್ಯವಸ್ಥೆ ಕಲ್ಪಿಸಲಾಗಿದೆ.

ದೋಣಿವಿಹಾರಕ್ಕೆ ತೊಂದರೆ: ದೋಣಿವಿಹಾರಕ ತಾತ್ಕಾಲಿಕವಾಗಿ ಸ್ಥಗಿತದಿಂದ ಪಕ್ಷಿಧಾಮಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಳಿಕೆಯಾಗಿದೆ. ಭಾನುವಾರ 1500 ಜನ ಹಾಗೂ ಸೋವವಾರ 2000 ಜನ ಪ್ರವಾಸಿಗರು ರಂಗನತಿಟ್ಟಿಗೆ ಭೇಟಿ ನೀಡಿದ್ದಾರೆ. ಮೊದಲು ದೋಣಿವಿಹಾರ ಸ್ಥಗಿತವಾದರೆ ಬರುವ ಪ್ರವಾಸಿಗರಲ್ಲಿ ಶೇ.75 ಭಾಗ ಪ್ರವಾಸಿಗರ ಸಂಖ್ಯೆ ಯಲ್ಲಿ ಇಳಿಮುಖವಾಗುತ್ತಿತ್ತು. ಆದರೆ, ನಾವು ದೋಣಿ ಹೊರತುಪಡಿಸಿ ರಕ್ಷಣಾ ಗೋಪುರಗಳು, ಬ್ಯಾಟರಿ ಚಾಲಿತ ವಾಹನಗಳು, ಚಿಟ್ಟೆ ಪಾರ್ಕ್‌ ಹಾಗೂ ಕಾರಂಜಿಗಳಿರುವುದುರಿಂದ ಪಕ್ಷಿಧಾಮಕ್ಕೆ ಬರುವ ಪ್ರವಾಸಿ ಗರು ಮೋàಜು ಮಸ್ತಿ ಮಾಡುವುದರಿಂದ ಪ್ರವಾಸಿಗರ ಸಂಖ್ಯೆ ಗಣನೀಯವಾಗಿದೆ ಎಂದು ವಲಯ ಅರಣ್ಯಾಧಿಕಾರಿ ಕೆ. ಸುರೇಂದ್ರ ತಿಳಿಸಿದರು.

ಟಾಪ್ ನ್ಯೂಸ್

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arest

Kundapura: ಅಂಬರ್‌ ಗ್ರೀಸ್‌ ಮಾರಾಟ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.