ಪೊಲೀಸರ ಕೈಸೇರಿತು ಬಾಡಿ ಕ್ಯಾಮರಾ!
ಮೊದಲ ಹಂತದಲ್ಲಿ 40 ಕ್ಯಾಮರಾಗಳ ಬಳಕೆ
Team Udayavani, Oct 16, 2019, 4:13 PM IST
ಮಂಡ್ಯ: ಬಹು ನಿರೀಕ್ಷಿತ ಬಾಡಿ ಕ್ಯಾಮರಾ ಪೊಲೀಸ್ ಇಲಾಖೆ ಕೈ ಸೇರಿದ್ದು, ಇನ್ನು ಕೆಲವೇ ದಿನಗಳಲ್ಲಿ ಅದು ಪೊಲೀಸರ ಮೈಗೆ ತಗುಲಿ ಹಾಕಿಕೊಳ್ಳಲಿದೆ. ಕರ್ತವ್ಯದ ವೇಳೆ ಸಂಭವಿಸುವ ಘಟನಾವಳಿ ಸೆರೆಹಿಡಿಯಲು ಈ ಕ್ಯಾಮರಾಗಳು ಪೊಲೀಸರ ನೆರವಿಗೆ ಬರಲಿವೆ.
ಮೊದಲ ಹಂತದಲ್ಲಿ 40 ಬಾಡಿ ಕ್ಯಾಮರಾಗಳನ್ನು ಜಿಲ್ಲಾ ಪೊಲೀಸ್ ಇಲಾಖೆ ತರಿಸಿಕೊಂಡಿದೆ. ಸಂಚಾರಿ ಠಾಣೆ ಪಿಎಸ್‌ಐ, ಎಎಸ್‌ಐಗಳು ಹಾಗೂ ಕಾನೂನು ಸುವ್ಯವಸ್ಥೆ ವಿಭಾಗದ ಪಿಎಸ್‌ಐಗಳು ಕ್ಯಾಮರಾ ಧರಿಸಿ ಕರ್ತವ್ಯಕ್ಕೆ ಇಳಿಯಲಿದ್ದಾರೆ. ಒಟ್ಟು 60 ಕ್ಯಾಮರಾಗಳ ಅಗತ್ಯವಿದ್ದು, ಅನುದಾನ ಆಧರಿಸಿ, ಉಳಿದ ಕ್ಯಾಮರಾಗಳನ್ನು ಖರೀದಿ ಮಾಡಲು ಇಲಾಖೆ ನಿರ್ಧರಿಸಿದೆ ಎಂದು ಎಸ್‌ಪಿ ಕೆ.ಪರಶುರಾಮ ತಿಳಿಸಿದರು.
ಬಾಡಿ ಕ್ಯಾಮರಾ ಬಳಕೆ ಹೇಗೆ? : ದೇಹದ ಎದೆಯ ಭಾಗದಲ್ಲಿ ಶರ್ಟ್‌ಗೆ ಅಳವಡಿಸಿದ ಈ ಕ್ಯಾಮರಾದಲ್ಲಿ ದೃಶ್ಯಗಳು ಸೆರೆಯಾಗಲಿವೆ. ಅಗತ್ಯ ಸಂದರ್ಭಗಳಲ್ಲಿ ಬಟನ್ ಒತ್ತಿ ಕ್ಯಾಮರಾ ಆನ್ ಮಾಡಿಕೊಳ್ಳಬಹುದು. ಪೊಲೀಸ್ ಅಧಿಕಾರಿ ಇತರೆ ಕೆಲಸ ಮಾಡುವ ಸ್ಥಳದಲ್ಲಿ ನಡೆಯುವ ದೃಶ್ಯಗಳೂ, ಇದರಲ್ಲಿ ಸೆರೆಯಾಗುತ್ತವೆ. ಪೊಲೀಸ್ ಅಧಿಕಾರಿ ಧ್ವನಿ ಹಾಗೂ ಇತರರ ಧ್ವನಿ, ದೃಶ್ಯವೂ ಇದರಲ್ಲಿ ದಾಖಲಾಗುವುದು. ಸಂಚಾರ ಉಲ್ಲಂಘನೆ ಮಾಡುವ ವಾಹನ ಸವಾರರಿಂದ ಸಾಕ್ಷಿ ಸಮೇತ ದಂಡ ವಸೂಲಿಗೂ ಅನುಕೂಲವಾಗಿದೆ ಎಂದು ಅವರು ಹೇಳಿದರು.
8 ಗಂಟೆ ದೃಶ್ಯ ಸೆರೆ: ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಈ ಕ್ಯಾಮರಾಗಳು 8 ಗಂಟೆ ದೃಶ್ಯಗಳನ್ನು ಸೆರೆಹಿಡಿಯುವ ಸಾಮರ್ಥ್ಯ ಹೊಂದಿವೆ. ಉತ್ತಮ ಗುಣಮಟ್ಟದ ದೃಶ್ಯ ದಾಖಲಾಗುತ್ತದೆ. ಬೇಕಾದ ದಿಕ್ಕುಗಳಿಗೆ ಕ್ಯಾಮರಾ ತಿರುಗಿಸಿಕೊಳ್ಳಲು ಅವಕಾಶವಿದ್ದು, ಇದಕ್ಕೆ ಸಂಬಂಧಿಸಿದ ಸರ್ವರ್ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿದ್ದು, ವಾರಕ್ಕೊಮ್ಮೆ ಈ ದೃಶ್ಯಗಳನ್ನು ಕ್ಯಾಮರಾದಿಂದ ಸರ್ವರ್‌ಗೆ ವರ್ಗಾಯಿಸಬಹುದು. 90 ದಿನಗಳ ಕಾಲ ದೃಶ್ಯಗಳನ್ನು ಉಳಿಸಿಕೊಳ್ಳುವುದಕ್ಕೆ ಅವಕಾಶವಿದೆ.
ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿಯೊಂದಿಗೆ ಇದೂ ಸಹ ಪ್ರಮುಖ ಸಾಕ್ಷ್ಯ ಆಗಲಿದೆ. ಚುನಾವಣೆ ಕಾಲಕ್ಕೂ ಅನುಕೂಲ: ಚುನಾ ವಣೆ ಸಮಯದಲ್ಲಿ ನಾಯಕರ ಜಿದ್ದಾಜಿದ್ದಿ ಕಣಗಳಲ್ಲಿ ಕ್ಯಾಮೆರಾ ಕಣ್ಗಾವಲು ಇಡಲು ಅನುಕೂಲವಾಗುತ್ತದೆ. ಈಗ ಸಿಸಿಟಿವಿ ಕ್ಯಾಮೆರಾ, ವೆಬ್ ಕ್ಯಾಸ್ಟಿಂಗ್, ವಿಡಿಯೋ, ಫೋಟೋಗ್ರಫಿ ಹೀಗೆ ಒಂದಲ್ಲ ಒಂದು ರೀತಿ ಚುನಾವಣೆ ಚಟುವಟಿಕೆಗಳು ದಾಖಲಾಗುತ್ತಿವೆ. ಅದೇ ರೀತಿ ಪೊಲೀಸರ ಬಾಡಿ ವೋರ್ ಕ್ಯಾಮರಾವೂ ಮತ್ತೂಂದು ರೀತಿಯಲ್ಲಿ ನೆರವಿಗೆ ಬರುತ್ತದೆ.
ಕ್ಷೇತ್ರದಲ್ಲಿ ಮುಂದೆ ಎದುರಾಗಬಹುದಾದ ಯಾವುದೇ ಆರೋಪಗಳಿಗೆ ಸಾಕ್ಷಿ ಸಮೇತ ಉತ್ತರ ನೀಡಲು ಅನುಕೂಲವಾಗುವಂತೆ ಪೊಲೀಸರು ಮುಂಜಾಗ್ರತೆ ಕ್ರಮವಾಗಿ ಇದನ್ನು ಬಳಸಬಹುದು. ಸಾಧ್ಯವಾದಷ್ಟು
ಎಲ್ಲವನ್ನೂ ದೃಶ್ಯದಲ್ಲಿ ಸೆರೆ ಹಿಡಿಯುವ ಪ್ರಯತ್ನ ಪೊಲೀಸರದ್ದಾಗಿದೆ. ಯಾವುದಾದರೂ ಘಟನೆಗಳು ಸಂಭವಿಸಿದಾಗ ತಮ್ಮ ಸಿಬ್ಬಂದಿ ಹೇಗೆ ವರ್ತಿಸುತ್ತಿದ್ದಾರೆ ಎಂಬುದನ್ನು ಕಂಡುಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.