ಶ್ರೀಲಂಕಾದಲ್ಲಿ ಬಾಂಬ್ ಸ್ಫೋಟ:ಮಂಡ್ಯ ಮೂಲದ ವ್ಯಕ್ತಿ ಸಾವು
Team Udayavani, Apr 25, 2019, 2:54 PM IST
ಮಂಡ್ಯ: ಶ್ರೀಲಂಕಾದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜಿಲ್ಲೆಯ ನಾಗಮಂಗಲ ತಾಲೂಕಿನ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ನಾಗಮಂಗಲ ತಾಲೂಕಿನ ಬೆಳ್ಳೂರು ಹೋಬಳಿಯ ಬೆಟ್ಟದಕೋಟೆ ಗ್ರಾಮದ ಲೇಟ್ ಲಕ್ಷ್ಮಣಗೌಡರ ಪುತ್ರ ರಮೇಶ್ (45) ಬಾಂಬ್ ದಾಳಿಯಲ್ಲಿ ಹತರಾಗಿದ್ದಾರೆ. ಇವರ ತಂದೆ ಲಕ್ಷ್ಮಣಗೌಡರು ಮೂಲತಃ ಬೆಟ್ಟದ ಕೋಟೆ ಗ್ರಾಮದವರು.
ಕೆಇಬಿ ನೌಕರರಾಗಿದ್ದ ಇವರು ತುಮಕೂರಿಗೆ ವರ್ಗವಾದ ಬಳಿಕ ಕುಟುಂಬದವರೆಲ್ಲರೂ ಅಲ್ಲೇ ನೆಲೆ ಕಂಡುಕೊಂಡಿದ್ದರು. ತುಮಕೂರಿನಲ್ಲಿ ರಮೇಶ್ ಸ್ವಂತ ಬಾರ್ ನಡೆಸುತ್ತಿದ್ದಾರೆ. ಇವರು ಏ.20ರಂದು ಶನಿವಾರ ಸ್ನೇಹಿತರ ಜೊತೆ ಪ್ರವಾಸಕ್ಕೆಂದು ಶ್ರೀಲಂಕಾಗೆ ತೆರಳಿದ್ದರು.
ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ಕುಟುಂಬದವರು ಇವರನ್ನು ಸಂಪರ್ಕಿಸಲು ಪ್ರಯತ್ನಿ ಸಿದರು. ಆದರೆ, ಸಂಪರ್ಕಕ್ಕೆ ಸಿಗಲಿಲ್ಲ. ಕೊನೆಗೆ ಬಾಂಬ್ ದಾಳಿಗೆ ಸಿಲುಕಿ ಮೃತಪಟ್ಟಿರು ವುದು ಖಚಿತ ಪಟ್ಟಿದ್ದು, ಕುಟುಂಬದವರ ರೋಧನ ಮುಗಿಲು ಮುಟ್ಟಿದೆ.
ಬುಧವಾರ ರಾತ್ರಿ ಅಥವಾ ಗುರುವಾರ ಬೆಳಗ್ಗೆ ರಮೇಶ್ ಮೃತದೇಹ ಬೆಟ್ಟದ ಹೊಸೂರು ಗ್ರಾಮಕ್ಕೆ ಬರಲಿದೆ ಎನ್ನಲಾಗುತ್ತಿದ್ದು, ಅಲ್ಲೇ ಅಂತ್ಯಕ್ರಿಯೆ ನಡೆಸಲು ಕುಟುಂಬದವರು ನಿರ್ಧರಿಸಿ ದ್ದಾರೆ ಎನ್ನಲಾಗಿದೆ. ಮೃತ ರಮೇಶ್ ಅವರು ಪತ್ನಿ ಮಂಜುಳಾ ಪುತ್ರ ಶೇದಿಕ್, ಪುತ್ರಿ ದಿಶಾ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.