ಕೆಆರ್‌ಎಸ್‌ನಲ್ಲಿ ಬೋನಿಗೆ ಬಿದ್ದ ಚಿರತೆ
Team Udayavani, Feb 12, 2021, 5:19 PM IST
ಶ್ರೀರಂಗಪಟ್ಟಣ: ತಾಲೂಕಿನ ಕೆಆರ್‌ಎಸ್ ಸಮೀಪ ಬೃಂದಾವನದ ಆಸುಪಾಸಿನಲ್ಲಿ ಸಂಚಾರ ಮಾಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.
ಚಿರತೆ ಸೆರೆಗೆ ಬಲೆ ಬೀಸಿ ನಾಲೆ ಏರಿ ಮೇಲೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಕೆಆರ್‌ಎಸ್‌ನ ದಕ್ಷಿಣ ಗೇಟ್ ಬಳಿ ಮೊತ್ತೂಂದು ಚಿರತೆ ಇರುವ ಶಂಕೆ ವ್ಯಕ್ತವಾಗಿದ್ದು, ಅಲ್ಲಿಯೂ ಚಿರತೆ ಸೆರೆಗೆ ಬೋನು ಇಡಲಾಗಿದೆ. ಈಗ ಹಿಡಿದಿರುವ ಚಿರತೆ ಯನ್ನು ವೈಲ್ಡ ಲೈಫ್ ಅರಣ್ಯಕ್ಕೆ ಬಿಡಲಾಗುವುದು ಎಂದು ಆರ್‌ಎಫ್ಒ ಪ್ರಮೀಳಾ ತಿಳಿಸಿದ್ದಾರೆ.
ಕಳೆದ ವಾರದ ಹಿಂದೆ ಕೆಆರ್‌ಎಸ್ ಬೃಂದಾವನದ ದಕ್ಷಿಣ ಗೇಟ್ ಬಳಿಯಲ್ಲಿ ರಾತ್ರಿ ಹೊತ್ತಿನಲ್ಲಿ ಬೃಂದಾವನದಲ್ಲಿ ಚಿರತೆ ಸಂಚಾರದ ದೃಶ್ಯ ಸಿಸಿ ಟಿವಿಯಲ್ಲಿ ಕಾಣಿಸಿಕೊಂಡು ಕೆಆರ್‌ಎಸ್ ಬೃಂದಾವನಕ್ಕೆ ಬರುವ ಪ್ರವಾಸಿಗರು ಹಾಗೂ ಕೆಆರ್‌ಎಸ್ ಸುತ್ತಮುತ್ತಲ ಗ್ರಾಮಗಳ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿತ್ತು. ಪೊಲೀಸರು ಹಾಗೂ ಗ್ರಾಪಂ ಸದಸ್ಯರು ಮುನ್ನೆಚ್ಚರಿಕೆ ತೆಗೆದುಕೊಂಡು ಸಾರ್ವಜನಿಕರಲ್ಲಿ ಮಾಹಿತಿ ನೀಡಿ ಎಚ್ಚರಿಸಿದರು.
ಈ ಬಗ್ಗೆ ಉದಯವಾಣಿ ಪತ್ರಿಕೆಯಲ್ಲಿ ಕೆಆರ್‌ಎಸ್ ಬೃಂದಾವನ ಅಂಗಳದಲ್ಲಿ ಚಿರತೆ ಪ್ರತ್ಯಕ್ಷ ಎಂದು ವರದಿ ಪ್ರಕಟವಾಗಿತ್ತು. ಈ ಬಗ್ಗೆ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು ಬೃಂದಾವನದ ದಕ್ಷಿಣ ಗೇಟ್ ಬಳಿಯಲ್ಲಿ ಬೋನು ಇಟ್ಟು ನಾಯಿಕಟ್ಟಿ ಚಿರತೆ ಸೆರೆಗಾಗಿ ಕಾಯುತ್ತಿದ್ದರು. ಇದೀಗ ಒಂದು ಚಿರತೆ ಸೆರೆಯಾಗಿದೆ. ಮತ್ತೂಂದು ಚಿರತೆ ಇರುವ ಶಂಕೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವ್ಯಕ್ತಪಡಿಸಿದ್ದು, ಚಿರತೆ ಹಿಡಿಯಲು ಬೋನ್ ಇಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿ ಪ್ರಮೀಳಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.