ವದೇಸಮುದ್ರದಲ್ಲಿ ಸಾಮೂಹಿಕ ಅಂತ್ಯಸಂಸ್ಕಾರ
Team Udayavani, Nov 26, 2018, 6:00 AM IST
ಪಾಂಡವಪುರ: ತಾಲೂಕಿನ ಕನಗನಮರಡಿ ಗ್ರಾಮದ ಬಳಿ ವಿಶ್ವೇಶ್ವರಯ್ಯ ನಾಲೆಗೆ ಖಾಸಗಿ ಬಸ್ ಉರುಳಿ ಮೃತಪಟ್ಟಿದ್ದ ವದೇಸಮುದ್ರ ಗ್ರಾಮದ ಎಂಟು ಮಂದಿಯ ಸಾಮೂಹಿಕ ಅಂತ್ಯಸಂಸ್ಕಾರ ಭಾನುವಾರ ನೆರವೇರಿತು.
ದುರಂತದಲ್ಲಿ ಸಾವನ್ನಪ್ಪಿದ ರವಿಕುಮಾರ್, ಕಮಲಮ್ಮ, ರತ್ನಮ್ಮ, ಶಶಿಕಲಾ, ಚಿಕ್ಕಯ್ಯ, ಪ್ರಶಾಂತ್, ಕರಿಯಪ್ಪ ಹಾಗೂ ಪವಿತ್ರಾ ಅವರ ಅಂತ್ಯಕ್ರಿಯೆಯನ್ನು ಊರಿನ ಸಾರ್ವಜನಿಕ ರುದ್ರಭೂಮಿಯಲ್ಲಿ ಮಾಡಲಾಯಿತು. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಕುಟುಂಬದವರು, ಸಂಬಂಧಿಕರ ದು:ಖದ ಕಟ್ಟೆಯೊಡೆದಿತ್ತು. ಇಡೀ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದ್ದು ಎಲ್ಲರನ್ನೂ ಶೋಕ ಸಾಗರದಲ್ಲಿ ಮುಳುಗಿಸಿದೆ.
ಎರಡು ಬಾರಿ ಪಾರು: ಅಪಘಾತಕ್ಕೀಡಾದ ರಾಜ್‌ಕುಮಾರ್ ಖಾಸಗಿ ಬಸ್ಸು ಈ ಹಿಂದೆ ಎರಡು ಬಾರಿ ಅಪಘಾತಕ್ಕೀಡಾಗಬೇಕಿತ್ತು. ಒಮ್ಮೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯುವುದರಲ್ಲಿತ್ತು, ಇನ್ನೊಮ್ಮೆ ಮರಕ್ಕೆ ಡಿಕ್ಕಿ ಹೊಡೆಯುವುದರಿಂದ ಸ್ವಲ್ಪದರಲ್ಲಿ ತಪ್ಪಿಸಿಕೊಂಡಿತ್ತು. ಖಾಸಗಿ ಬಸ್ ಚಾಲಕನ ಅಜಾಗರೂಕತೆಯನ್ನು ಕಂಡು ಗ್ರಾಮಸ್ಥರು ಎರಡು ಬಾರಿಯೂ ಥಳಿಸಿದ್ದರು. ನಂತರದಲ್ಲಿ ಸಾರಿಗೆ ಬಸ್‌ಗಳನ್ನು ಸಂಚಾರಕ್ಕೆ ಬಿಡುವಂತೆ ಆಗ್ರಹಿಸಿ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಗ್ರಾಮಸ್ಥರು ನೋವು ತೋಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ
Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.