ರೈತರಿಂದ ನೇರವಾಗಿ ತರಕಾರಿ ಖರೀದಿ
ಸಂಸದ ಡಿ.ಕೆ.ಸುರೇಶ್ ತರಕಾರಿ ಕೊಂಡು ಬಡವರಿಗೆ ಉಚಿತ ವಿತರಣೆ
Team Udayavani, Apr 16, 2020, 12:51 PM IST
ರಾಮನಗರ ಸಂಸದ ಡಿ.ಕೆ.ಸುರೇಶ್ ವಿವಿಧ ರೈತರ ತೋಟಗಳಿಗೆ ಭೇಟಿ
ಪಾಂಡವಪುರ: ಕೋವಿಡ್ – 19 ತಡೆಗಾಗಿ ಲಾಕ್ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಬಡ ಕುಟುಂಬಗಳಿಗೆ ತರಕಾರಿ ವಿತರಿಸಲು ರಾಮನಗರ ಕ್ಷೇತ್ರದ ಸಂಸದ ಡಿ. ಕೆ.ಸುರೇಶ್ ರೈತರಿಂದ ತರಕಾರಿ ಖರೀದಿಸಲು ತಾಲೂಕಿನ ವಿವಿಧ ಗ್ರಾಮಗಳ ರೈತರ ತೋಟಗಳಿಗೆ ತೆರಳಿ ವೀಕ್ಷಿಸಿದರು.
ತಾಲೂಕಿನ ಟಿ.ಎಸ್.ಛತ್ರ, ಅತ್ತಿಗೋನಹಳ್ಳಿ, ಹಳೇಬೀಡು, ಬೋಳೇನಹಳ್ಳಿ ರೈತರ ತೋಟಗಳಿಗೆ ತೆರಳಿ 150 ಟನ್ಗೂ ಹೆಚ್ಚು ಎಲೆಕೋಸು, ಟೊಮೆಟೋ, ಕಲ್ಲಂಗಡಿ ಹಾಗೂ ಕುಂಬಳ ಕಾಯಿ ಖರೀದಿಸಿದರು. ಕೋವಿಡ್ – 19 ಎಫೆಕ್ಟ್ನಿಂದಾಗಿ ಬಹುತೇಕ ಎಪಿಎಂಸಿ, ಮಾರುಕಟ್ಟೆಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಣೆ ಮಾಡಲಾಗದೆ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಸಂಸದ ಡಿ.ಕೆ.ಸುರೇಶ್ ನೇರವಾಗಿಯೇ ರೈತರಿಂದ ತರಕಾರಿ ಖರೀದಿಸಿ ಕ್ಷೇತ್ರದ ಜನರಿಗೆ ಉಚಿತ ತರಕಾರಿ ವಿತರಿಸಲು ಮುಂದಾಗಿದ್ದಾರೆ.
ಬಳಿಕ ಮಾತನಾಡಿದ ಸಂಸದ ಡಿ.ಕೆ.ಸುರೇಶ್, ಕೋವಿಡ್ – 19 ಎಫೆಕ್ಟ್ನಿಂದ ರೈತರು ಬೆಳೆದ ಬೆಳೆಗಳನ್ನು ಮಾರಾಟಮಾಡಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ ಸಂಕಷ್ಟದಲ್ಲಿರುವ ರೈತರಿಗೆ ಅಲ್ಪಮಟ್ಟಿಗಾದರೂ ನೆರವಾಗುವ ಉದ್ದೇಶದಿಂದ ನಾವೇ ಖುದ್ದು ರೈತರಿಂದ ತರಕಾರಿ ಖರೀದಿಸಿ ಉಚಿತವಾಗಿ ಹಂಚುತ್ತಿದ್ದೇನೆ ಎಂದು ಹೇಳಿದರು.
ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕ ರಾಜು, ರಾಮನಗರ ತೋಟಗಾರಿಕೆ ಉಪನಿರ್ದೇಶಕ ಗುಣವಂತ್, ತಾಲೂಕು ತೋಟಗಾರಿಕೆ ಸಹಾಯಕ ನಿರ್ದೇಶಕಿ ಎಸ್.ಪಿ.ಸೌಮ್ಯ, ಕೆ.ಆರ್.ಪೇಟೆ ತೋಟಗಾರಿಕೆ ನಿರ್ದೇಶಕ ಲೋಕೇಶ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.