ಕೆ.ಆರ್.ಪೇಟೆಯಲ್ಲಿ ಉಪ ಚುನಾವಣೆ ಕಾವು


Team Udayavani, Sep 22, 2019, 3:08 PM IST

Udayavani Kannada Newspaper

ಮಂಡ್ಯ: ಜಿಲ್ಲೆಯ ಕೆ.ಆರ್‌.ಪೇಟೆ ಕ್ಷೇತ್ರದ ಶಾಸಕ ಕೆ.ಸಿ.ನಾರಾಯಣಗೌಡರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಇದೀಗ ಉಪ ಚುನಾವಣೆ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಕ್ಷೇತ್ರದೊಳಗೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ.

ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಕ್ಷೇತ್ರದಲ್ಲಿ ಅಧಿಪತ್ಯ ಸ್ಥಾಪನೆಗೆ ಚುನಾವಣೆ ಪೂರ್ವ ಸಿದ್ಧತೆಗಳನ್ನು ಚುರುಕುಗೊಳಿಸಲು ಆರಂಭಿಸಿವೆ. ಕಳೆದ ವಿಧಾನಸಣೆ ಚುನಾವಣೆಯಲ್ಲಿ ಜಿಲ್ಲೆಯ ಏಳೂ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವುದರೊಂದಿಗೆ ಬಿಗಿ ಹಿಡಿತ ಸಾಧಿಸಿದ್ದ ಜೆಡಿಎಸ್‌ಗೆ ಉಪ ಚುನಾವಣೆ ಅಸ್ತಿತ್ವದ ಉಳಿವಿನ ಹೋರಾಟವಾಗಿದೆ. ಸತತ 2 ಬಾರಿ ಸೋಲುಂಡಿರುವ ಕಾಂಗ್ರೆಸ್‌ ಜನರ ಅನುಕಂಪವನ್ನು ಎದುರುನೋಡುತ್ತಿದ್ದರೆ, ಸಿಎಂ ಯಡಿಯೂರಪ್ಪನವರ ತವರಾದ ಕೆ.ಆರ್‌.ಪೇಟೆಯಲ್ಲಿ ಕಮಲ ಅರಳುವಂತೆ ಮಾಡುವುದು ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆ.ಸಿ.ನಾರಾಯಣಗೌಡರ ಅನರ್ಹತೆ ಜಾರಿಯಲ್ಲಿ ರುವುದರಿಂದ ಅವರು ಸದ್ಯಕ್ಕೆ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಉಪಚುನಾವಣೆಗೆ ತಡೆಯಾಜ್ಞೆ ಕೋರಿ ಅನರ್ಹ ಶಾಸಕರು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ. ತೀರ್ಪು ಏನಾಗುವುದೋ ಸದ್ಯಕ್ಕೆ ತಿಳಿಯದಾಗಿದೆ. ಹಾಗಾಗಿ ಕೆ.ಸಿ.ನಾರಾಯಣಗೌಡರ ಸ್ಪರ್ಧೆ ಅತಂತ್ರ ಸ್ಥಿತಿಯಲ್ಲಿದೆ.

ಚುನಾವಣೆ ಜ್ವರ ಏರಿಸಿದ ಜೆಡಿಎಸ್‌: ಈಗಾಗಲೇ ಕೆ.ಆರ್‌.ಪೇಟೆಯಲ್ಲಿ ಚುನಾವಣೆ ಜ್ವರ ಶುರುವಾಗಿದೆ. ಕೆ.ಸಿ.ನಾರಾಯಣಗೌಡರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರದಲ್ಲಿ ಚುನಾವಣೆ ಕಾರ್ಯ ಚಟುವಟಿಕೆಗಳಿಗೆ ಜೆಡಿಎಸ್‌ ಕ್ಷಿಪ್ರಗತಿಯ ಚಾಲನೆ ಕೊಟ್ಟಿದೆ. ಈಗಾಗಲೇ 2 ಬಾರಿ ಕ್ಷೇತ್ರದಲ್ಲಿ ಕಾರ್ಯ ಕರ್ತರ ಸಭೆ ನಡೆಸುವ ಮೂಲಕ ಒಗ್ಗಟ್ಟಿನ ಮಂತ್ರ ಜಪಿಸುತ್ತಿದೆ. ಆದರೆ, ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿ ಇಲ್ಲದಿರುವುದು ದಳಪತಿಗಳ ಚಿಂತೆಗೆ ಕಾರಣವಾಗಿದೆ. ಜೆಡಿಎಸ್‌ನಲ್ಲಿ ಜಿಪಂ ಸದಸ್ಯ ಬಿ.ಎಲ್‌.ದೇವರಾಜು, ಮುಖಂಡ ಬಸ್‌ ಕೃಷ್ಣೇಗೌಡ ಜೆಡಿಎಸ್‌ ಟಿಕೆಟ್‌ನ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಉಳಿದಂತೆ ಇನ್ಯಾರೂ ಪ್ರಬಲ ಅಭ್ಯರ್ಥಿಗಳಿಲ್ಲ. ಅಲ್ಲದೆ, ಟಿಕೆಟ್‌ ಆಕಾಂಕ್ಷಿಗಳು ಕ್ಷೇತ್ರದೊಳಗೆ ಗೆಲ್ಲುವ ಸಾಮರ್ಥ್ಯ ಹೊಂದಿಲ್ಲ. ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಸದ್ಯದ ಸ್ಥಿತಿಯಲ್ಲಿ ಜೆಡಿಎಸ್‌ಗೆ ಕಷ್ಟವಾಗಿದೆ.

ಮುಖಭಂಗ ತೊಡೆದುಹಾಕಲು ಯತ್ನ: ಈ ಹಿಂದೆ ಜೆಡಿಎಸ್‌ ಪಕ್ಷದಲ್ಲಿದ್ದ ಪ್ರಕಾಶ್‌ ಅವರನ್ನು ಮತ್ತೆ ಪಕ್ಷಕ್ಕೆ ಸೆಳೆಯುವ ಪ್ರಯತ್ನಗಳೂ ತೆರೆ-ಮರೆಯಲ್ಲಿ ನಡೆದಿವೆ ಎನ್ನಲಾಗುತ್ತಿದೆ. ಒಂದು ಬಾರಿ ಕೆ.ಆರ್‌.ಪೇಟೆ ಕ್ಷೇತ್ರದಿಂದ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದ ಪ್ರಕಾಶ್‌ 2 ಬಾರಿ ಸೋಲು ಕಂಡಿದ್ದಾರೆ. ಅವರನ್ನು ಕಣಕ್ಕಿಳಿಸಿದರೆ ಪಕ್ಷಕ್ಕೆ ಲಾಭವಾಗಬಹುದೇ ಎಂಬ ಚಿಂತನೆಗಳೂ ಜೆಡಿಎಸ್‌ ಪಾಳಯದಲ್ಲಿ ನಡೆಯುತ್ತಿವೆ. ಕ್ಷೇತ್ರದ ಜನರಲ್ಲಿ ಕೆ.ಸಿ.ನಾರಾಯಣಗೌಡರ ವಿರೋಧಿ ಅಲೆಯಿದೆ. ಅಧಿಕಾರ ಕೊಟ್ಟ ಪಕ್ಷಕ್ಕೆ ಶಾಸಕರು ಮಾಡಿದ ಅನ್ಯಾಯವನ್ನು ಮುಂದಿಟ್ಟು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವುದಕ್ಕೆ ಜೆಡಿಎಸ್‌ ಹವಣಿಸುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಆಗಿರುವ ಸೋಲಿನ ಮುಖಭಂಗವನ್ನು ಉಪಚುನಾವಣೆ ಗೆಲುವಿನೊಂದಿಗೆ ತೊಡೆದುಹಾಕಲು ತಂತ್ರಗಾರಿಕೆ ನಡೆಸಿದೆ.

ಸದ್ಯಕ್ಕೆ ಕೆಸಿಎನ್ಗೆ ಅತಂತ್ರ ಸ್ಥಿತಿ: ಜೆಡಿಎಸ್‌ ನಾಯಕತ್ವದ ಸಮ್ಮಿಶ್ರ ಸರ್ಕಾರವನ್ನು ಬಿಜೆಪಿ ಜೊತೆಗೂಡಿ ಪತನಗೊಳಿಸಿದ ಕ್ಷೇತ್ರದ ಅನರ್ಹ ಶಾಸಕ ಕೆ.ಸಿ.ನಾರಾಯಣಗೌಡರ ಚುನಾವಣಾ ಸ್ಪರ್ಧೆ ಅತಂತ್ರವಾಗಿದೆ. ಶಾಸಕರ ಅನರ್ಹತೆ ಎತ್ತಿ ಹಿಡಿದು ಚುನಾವಣೆ ಸ್ಪರ್ಧಿಸದಂತೆ ಸ್ಪೀಕರ್‌ ಆಗಿದ್ದ ರಮೇಶ್‌ ಕುಮಾರ್‌ ತೀರ್ಪು ನೀಡಿದ್ದು, ಅದು ಇನ್ನೂ ಜಾರಿಯಲ್ಲಿದೆ.

ಆ ಪ್ರಕಾರ ಕೆ.ಸಿ.ನಾರಾಯಣಗೌಡರ ಸ್ಪರ್ಧೆಗೆ ಸದ್ಯಕ್ಕೆ ಅವಕಾಶವಿಲ್ಲದಂತಾಗಿದೆ. ಅನರ್ಹ ಶಾಸಕರು ಸುಪ್ರೀಂಕೋರ್ಟ್‌ನಿಂದ ಸ್ಪೀಕರ್‌ ಆದೇಶಕ್ಕೆ ತಡೆ ಅಥವಾ ಉಪ ಚುನಾವಣೆ ತಡೆಯಾಜ್ಞೆ ತಂದಲ್ಲಿ ಮಾತ್ರ ರಾಜಕೀಯವಾಗಿ ಸುಧಾರಿಸಿಕೊಳ್ಳಲು ಸಾಧ್ಯವಾಗಲಿದೆ ಎನ್ನಲಾಗುತ್ತಿದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರದಲ್ಲಿ ಕ್ಷೇತ್ರದಿಂದ ನಾಪತ್ತೆಯಾಗಿದ್ದ ಕೆ.ಸಿ.ನಾರಾಯಣಗೌಡರು ಒಂದೂವರೆ ತಿಂಗಳಿಂದ ಕ್ಷೇತ್ರದಲ್ಲಿ ಸಂಚರಿಸುತ್ತಾ ಜನರ ವಿಶ್ವಾಸ ಸಂಪಾದಿಸುವ ಪ್ರಯತ್ನದಲ್ಲಿ ಸಕ್ರಿಯರಾಗಿದ್ದರು. ಚುನಾವಣೆಗೆ ಸ್ಪರ್ಧಿಸುವ ಹಂಬಲದೊಂದಿಗೆ ಬಿಜೆಪಿ ನಾಯಕರೊಂದಿಗೆ ನಿಕಟ ಸಂಪರ್ಕದಲ್ಲಿದ್ದುಕೊಂಡು ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಅಧಿಕಾರಿಗಳ ಮೇಲೆ ಒತ್ತಡ ತಂದು ಚಾಲನೆ ಕೊಡಿಸುತ್ತಾ ಅನರ್ಹತೆ ನಡುವೆಯೂ ತಮ್ಮ ಶಕ್ತಿ ಪ್ರದರ್ಶಿಸುತ್ತಾ ಅಸ್ತಿತ್ವ ಉಳಿವಿಗೆ ಹೋರಾಟ ನಡೆಸುತ್ತಿದ್ದರು.

ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಜೆಡಿಎಸ್‌ನ ನಿಖೀಲ್‌ ಕುಮಾರಸ್ವಾಮಿ ವಿರುದ್ಧ  ದಿಗ್ವಿಜಯ ಸಾಧಿಸಿದ ಸುಮಲತಾ ಅಂಬರೀಶ್‌, ವರ್ಚಸ್ವಿ ರಾಜಕಾರಣಿಯಾಗಿ ಜಿಲ್ಲೆಯೊಳಗೆ ಬೆಳವಣಿಗೆ ಕಾಣುತ್ತಿದ್ದಾರೆ. ಉಪ ಚುನಾವಣೆಯಲ್ಲಿ ಅವರನ್ನೂ ಪ್ರಚಾರಕ್ಕೆ ಬಳಸಿಕೊಳ್ಳುವುದಕ್ಕೆ ನಾರಾಯಣಗೌಡರು

ಒಂದು ಸುತ್ತಿನ ಮಾತುಕತೆ ನಡೆಸಿದ್ದರು. ಇದೀಗ ಅನರ್ಹ ಶಾಸಕರು ಉಪ ಚುನಾವಣೆಗೆ ಸ್ಪರ್ಧಿಸದಂತೆ ಚುನಾವಣಾಧಿಕಾರಿ ಘೋಷಿಸಿರುವುದು ರಾಜಕೀಯ ಭವಿಷ್ಯಕ್ಕೆ ಬರಸಿಡಿಲು ಬಡಿದಂತಾಗಿದೆ.

ಬಿಎಸ್ವೈಗೆ ಪ್ರತಿಷ್ಠೆಯ ಪ್ರಶ್ನೆ: ಇನ್ನು ಕೆ.ಆರ್‌.ಪೇಟೆ ಬಿ.ಎಸ್‌.ಯಡಿಯೂರಪ್ಪನವರ ತವರು ಕ್ಷೇತ್ರ. ಉಪಚುನಾವಣೆ ಗೆಲುವು ಪ್ರತಿಷ್ಠೆಯ ಪ್ರಶ್ನೆಯೂ ಆಗಿದೆ. ಕೆ.ಸಿ.ನಾರಾಯಣಗೌಡರು ಬಿಜೆಪಿ ಅಭ್ಯರ್ಥಿಯಾಗಲು ಇಚ್ಛಿಸಿದರೆ ಟಿಕೆಟ್‌ ಕೊಡುವುದಕ್ಕೂ ಸಿದ್ಧರಿದ್ದರು. ಈಗ ಅವರ ಸ್ಪರ್ಧೆ ಡೋಲಾಯಮಾನಸ್ಥಿತಿ ತಲುಪಿರುವುದರಿಂದ ಪ್ರಬಲ ಅಭ್ಯರ್ಥಿಗೆ ಹುಡುಕಾಟ ನಡೆಸುವಂತಾಗಿದೆ. ಕ್ಷೇತ್ರದಿಂದ ಬಿಎಸ್‌ವೈ ಪುತ್ರ ವಿಜಯೇಂದ್ರ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿಬಂದವಾದರೂ, ಅದು ಗಾಳಿಸುದ್ದಿಯಾಗಿ ಮಾಯವಾಯಿತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬೂಕಹಳ್ಳಿ ಬಿ.ಸಿ.ಮಂಜು 10 ಸಾವಿರ ಮತಗಳನ್ನೂ ಪಡೆಯಲಾಗದೆ ಠೇವಣಿ ಕಳೆದುಕೊಂಡಿದ್ದರು.

ಹೀಗಾಗಿ ನೆಲೆಯೇ ಇಲ್ಲದ ಕೆ.ಆರ್‌.ಪೇಟೆಯೊಳಗೆ ಬಿಜೆಪಿ ಕಮಲ ಅರಳಿಸುವುದುಅಷ್ಟು ಸುಲಭವಾಗಿಲ್ಲ. ಇದರ ನಡುವೆ ಹಿಂದೊಮ್ಮೆ ಕೆ.ಆರ್‌.ಪೇಟೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ಕೆ.ಎನ್‌.ಕೆಂಗೇಗೌಡ ಅವರು 29 ಸಾವಿರ ಮತಗಳನ್ನು ಪಡೆದಿರುವುದು ದಾಖಲೆಯಾಗಿದೆ. ಇದೀಗ ಅವರ ಮಗ ಕೆ.ಶ್ರೀನಿವಾಸ್‌ ಅನರ್ಹ ಶಾಸಕ ಕೆ.ಸಿ.ನಾರಾಯಣಗೌಡರ ಬೆಂಬಲಿಗರಾಗಿದ್ದಾರೆ. ಕೆ.ಸಿ.ನಾರಾಯಣಗೌಡರ ಚುನಾವಣಾ ಸ್ಪರ್ಧೆಗೆ ಅವಕಾಶ ಸಿಗದಿದ್ದರೆ ಕೆ.ಶ್ರೀನಿವಾಸ್‌ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಾಯಕರು ಚಿಂತಿಸುತ್ತಿದ್ದಾರೆ.

ಕೆ.ಎನ್‌.ಕೆಂಗೇಗೌಡರು ಕುರುಬ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಆ ಸಮುದಾಯದ ಮತಗಳ ಜೊತೆಗೆ ಹಿಂದುಳಿದ ಜನಾಂಗದ ಮತಗಳೂ ಸುಲಭವಾಗಿ ಕೈ ಸೇರಲಿವೆ ಎಂಬ ಲೆಕ್ಕಾಚಾರ ಬಿಜೆಪಿಯವರದ್ದಾಗಿದೆ. ಒಟ್ಟಾರೆ 3 ಪಕ್ಷಗಳಿಗೂ ಕೆ. ಆರ್‌. ಪೇಟೆ ಉಪ ಚುನಾವಣೆ ಗೆಲುವು ಅನಿವಾರ್ಯ. ಇದು ಪಕ್ಷಗಳ ರಾಜಕೀಯ ಅಳಿವು-ಉಳಿವಿನ ಪ್ರಶ್ನೆಯಾಗಿದೆ. ಮೂವರಲ್ಲಿ ಕ್ಷೇತ್ರದ ಮತದಾರರು ಯಾರ ಪರ ಒಲವು ತೋರಲಿದ್ದಾರೆ ಎಂಬುದು ಮಾತ್ರ ನಿಗೂಢವಾಗಿದೆ.

 

-ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.