ಕುರಿ-ಮೇಕೆ ತಿನ್ನುತ್ತಿದ್ದ ಮೊಸಳೆ ಸೆರೆ


Team Udayavani, Nov 23, 2021, 2:59 PM IST

ಮೊಸಳೆ ಸೆರೆ

ಶ್ರೀರಂಗಪಟ್ಟಣ: ಹಲವು ತಿಂಗಳುಗಳಿಂದ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುವುದಲ್ಲದೇ ಪ್ರವಾಸಿಗರು ಹಾಗೂ ಸಾರ್ವಜನಿಕರನ್ನು ಭಯ ಭೀತರನ್ನಾಗಿಸಿದ್ದ ಮೊಸೆಳೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ತಾಲೂಕಿನ ವಿಶ್ವ ವಿಖ್ಯಾತ ರಂಗನತಿಟ್ಟು ಪಕ್ಷಿಧಾಮದ ಆಸುಪಾಸಿನಲ್ಲಿ ಹಲವು ತಿಂಗಳುಗಳಿಂದ ಸಾರ್ವಜನಿಕವಾಗಿ ರಸ್ತೆ ಹಾಗೂ ಜಮೀನುಗಳಲ್ಲಿ ಕಾಣಿಸಿಕೊಂಡು ಸಾಕು ಪ್ರಾಣಿ ಕುರಿ, ಮೇಕೆ ಸೇರಿದಂತೆ ಇತರೆ ಪ್ರಾಣಿಗಳನ್ನು ತಿಂದು ಹಾಕಿ ರೈತರ ಸಂಕಷ್ಟದ ಜೊತೆಗೆ ಆತಂಕಕ್ಕೆ ಕಾರಣವಾಗಿತ್ತು.

ಹಲವು ಬಾರಿ ಮನವಿ: ಈ ಸಂಬಂಧ ರೈತರು ಹಲವು ಬಾರಿ ಮೊಸಳೆ ಸೆರೆ ಹಿಡಿಯುವಂತೆ ಮನವಿ ಮಾಡಿದ್ದರು. ಸಂಜೆ ವೇಳೆ ರಂಗನತಿಟ್ಟು ಪಕ್ಷಿಧಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ನಿತ್ಯ ಕಾಣಿಸಿಕೊಳ್ಳುತ್ತಿರುವುದನ್ನು ಪ್ರವಾಸಿಗರು ಫೋಟೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ವೈರಲ್‌ ಸಹ ಆಗಿತ್ತು. 7.6 ಅಡಿ ಉದ್ದದ ಮೊಸಳೆ: ಅಧಿಕಾರಿಗಳು ಮೊಸಳೆ ಸೆರೆಡಿಯುವ ಸಲುವಾಗಿ ಬೋನ್‌ ಇಟ್ಟು, ಕಾರ್ಯಪ್ರವೃತ್ತರಾಗಿದ್ದರು.

ಸೋಮವಾರ ಸಂಜೆ ಸ್ಥಳೀಯ ರೈತರ ಮಾಹಿತಿ ಮೇರೆಗೆ ವಲಯ ಅರಣ್ಯಾಧಿಕಾರಿ ಕೆ.ಸುರೇಂದ್ರ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಬಲೆ ಸೇರಿದಂತೆ ಇತರೆ ಸಲಕರಣೆಗಳೊಂದಿಗೆ ಸುಮಾರು 35 ರಿಂದ 40 ವರ್ಷದ, 7.6 ಅಡಿ ಉದ್ದದ ಬೃಹದಾಕಾರದ ಮೊಸಳೆ ಸೆರೆಹಿಡಿಯುವ ಮೂಲಕ ರೈತರು ಹಾಗೂ ಸಾರ್ವಜನಿಕರ ಆತಂಕವನ್ನು ಅರಣ್ಯ ಇಲಾಖೆ ಸಿಬ್ಬಂದಿ ದೂರ ಮಾಡಿದ್ದಾರೆ.

 ಕಬಿನಿ ಹಿನ್ನೀರಿಗೆ ಮೊಸಳೆ

ವಲಯ ಅರಣ್ಯಾಧಿಕಾರಿ ಕೆ.ಸುರೇಂದ್ರ ಮಾತನಾಡಿ, ಬಂಡೀಪುರ ಅರಣ್ಯ ಇಲಾಖೆ ಪಶು ವೈದ್ಯಾಧಿಕಾರಿ ವಸೀಮ್‌ಮಿರ್ಜಾ ಅವರಿಂದ ಮೊಸಳೆ ಆರೋಗ್ಯವಾಗಿರುವುದನ್ನ ಖಚಿತಪಡಿಸಿಕೊಳ್ಳಲಾಗಿದೆ. ಈ ಮೊಸಳೆ ಈಗಾಗಲೇ ಸಾರ್ವಜನಿವಾಗಿ ಓಡಾಡಿ ಸಾಕು ಪ್ರಾಣಿಗಳನ್ನು ಕೊಂದು ಹಾಕಿ ಆತಂಕ ಸೃಷ್ಟಿಸಿದ್ದು, ಮತ್ತೆ ಇದೇ ಹಾಸುಪಾಸಿನ ಸ್ಥಳಗಳಲ್ಲಿ ಬಿಡದೇ, ಮೇಲಧಿಕಾರಿಗಳ ಅನುಮತಿ ಮೇರೆಗೆ ನಿರ್ಜನ ಪ್ರದೇಶವಾದ ಎಚ್‌.ಡಿ.ಕೋಟೆ ಬಳಿಯ ಕಬಿನಿ ಜಲಾಶಯದ ಹಿನ್ನೀರಿಗೆ ಬಿಡಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.