ಮಂಡ್ಯದಲ್ಲಿ ನಾಲೆಗೆ ಬಿದ್ದ ಕಾರು: ನಾಪತ್ತೆಯಾದ ಚಾಲಕ; ಮುಂದುವರಿದ ಶೋಧ ಕಾರ್ಯ
Team Udayavani, Jul 27, 2023, 1:23 PM IST
ಮಂಡ್ಯ: ನಾಲೆಗೆ ಕ್ರೇಟಾ ಕಾರು ಪಲ್ಟಿಯಾಗಿ ಕಾರು ಚಾಲಕ ನಾಪತ್ತೆಯಾಗಿರುವ ಘಟನೆ ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಬಳಿಯ ವಿಸಿ ನಾಲೆಯಲ್ಲಿ ಘಟನೆ ಗುರುವಾರ ನಡೆದಿದೆ.
ಮಂಡ್ಯ ತಾಲೂಕಿನ ಶಿವಳ್ಳಿ ಗ್ರಾಮದ ಲೋಕೇಶ್ ನಾಪತ್ತೆಯಾಗಿರುವ ಚಾಲಕ.
ನಿಯಂತ್ರಣ ತಪ್ಪಿದ ಕಾರಣ ಕಾಲುವೆಗೆ ಕಾರು ಹಾರಿದೆ. ಕಾಲುವೆಗೆ ತಡೆಗೋಡೆ ಇಲ್ಲದ ಕಾರಣ ಕಾಲುವೆಗೆ ಕಾರು ಬಿದ್ದಿದೆ. ಕಾರು ಚಲಿಸುತ್ತಿದ್ದ ಚಾಲಕ ಲೋಕೇಶ್ ನಾಪತ್ತೆಯಾಗಿದ್ದಾರೆ.
ಇದನ್ನೂ ಓದಿ:Video: ಮೇಲ್ಛಾವಣಿ ಕಿತ್ತು ಹೋದರೂ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದೆ ಸಾರಿಗೆ ಬಸ್…
ಕಾಲುವೆಯಲ್ಲಿ ಹೆಚ್ಚು ನೀರು ಇರುವ ಕಾರಣ ಕಾರು ಮುಳುಗಿದೆ. ಇದೀಗ ಕಾರನ್ನು ಮೇಲಕ್ಕೆತ್ತಲಾಗಿದ್ದು, ನಾಪತ್ತೆಯಾಗಿರುವ ಲೋಕೇಶ್‌ಗಾಗಿ ತೀವ್ರ ಶೋಧ ಕಾರ್ಯ ಮುಂದುವರೆದಿದೆ. ಶಿವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕಾಪಾಡಿ ಎಂದು ಕೂಗಿದ್ದ: ವಿಸಿ ನಾಲೆಗೆ ಕಾರು ಪಲ್ಟಿಯಾಗಿ ನಾಪತ್ತೆಯಾಗಿರುವ ಲೋಕೇಶ್ ಕಾರಿನಿಂದ ಹೊರಬಂದಿದ್ದರು. ಈಜು ಬರಲ್ಲ ಕಾಪಾಡಿ ಎಂದರು. ಆದರೆ ನಮಗೂ ಈಜು ಬರುತ್ತಿರಲಿಲ್ಲ. ಆದ್ದರಿಂದ ಅವರನ್ನ ಕಾಪಾಡಲು ಆಗಲಿಲ್ಲ. ನಂತರ ನೀರಿನಲ್ಲಿ ಮುಳುಗಿದ ಲೋಕೇಶ್ ಮತ್ತೆ ಮೇಲೆ ಏಳಲಿಲ್ಲ ಎಂದು ಪ್ರತ್ಯಕ್ಷದರ್ಶಿ ವೀರಭದ್ರ ಹೇಳಿದರು.
ಹಿಂದೆಯೂ ನಡೆದಿತ್ತು: 2017ರಲ್ಲಿ ಕಾಲುವೆಗೆ ತಡೆಗೋಡೆ ಇಲ್ಲದೇ ಬಸ್ ದುರಂತ ನಡೆದಿತ್ತು. ಈ ಘಟನೆಯ ಬಳಿಕ ಕಾಲುವೆಯ ಉದ್ದಕ್ಕೂ ತಡೆಗೋಡೆ ನಿರ್ಮಿಸುವುದಾಗಿ ಸರ್ಕಾರ ಹೇಳಿತ್ತು. ಇಷ್ಟಾದರೂ ತಡೆಗೊಡೆ ನಿರ್ಮಾಣ ಮಾಡಿಲ್ಲ. ತಡೆಗೋಡೆ ಇಲ್ಲದ ಕಾರಣ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.