ವ್ಯಕ್ತಿಗೆ ಚಾಕು ತೋರಿಸಿ 3.5 ಲಕ್ಷ ರೂ.ನ ಸರ ಕಳ್ಳತನ

Team Udayavani, Jul 2, 2023, 3:41 PM IST

ವ್ಯಕ್ತಿಗೆ ಚಾಕು ತೋರಿಸಿ 3.5 ಲಕ್ಷ ರೂ.ನ ಸರ ಕಳ್ಳತನ

ಮದ್ದೂರು: ಕಾರಿನಲ್ಲಿದ್ದ ವ್ಯಕ್ತಿಯೋರ್ವನಿಗೆ ಮೂವರು ದುಷ್ಕರ್ಮಿಗಳು ಚಾಕು ತೋರಿಸಿ ಚಿನ್ನದ ಸರ ದೋಚಿ ಪರಾರಿ ಆಗಿರುವ ಘಟನೆ ಮೈಸೂರು-ಬೆಂಗಳೂರು ಹೆದ್ದಾರಿಯ ಪಟ್ಟಣದ ಹೊರವಲಯದ ಐಶ್ವರ್ಯ ವಿದ್ಯಾಸಂಸ್ಥೆ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.

ಕೊಡಗು ಜಿಲ್ಲೆ, ಮಡಿಕೇರಿ ತಾಲೂಕು ಅರಪಟ್ಟು ಗ್ರಾಮದ ಇಂಟೀರಿಯರ್‌ ಡಿಸೈನರ್‌ ಕೆ.ಕೆ. ಮುತ್ತಪ್ಪ ರವರ ಬಳಿಯಿದ್ದ 3.5 ಲಕ್ಷ.ರೂ. ಮೌಲ್ಯದ 65 ಗ್ರಾಂ. ಚಿನ್ನದ ಸರವನ್ನು ಕಿತ್ತು ಸ್ಥಳದಿಂದ ಪರಾರಿಯಾಗಿದ್ದಾರೆ.

ಅನಾರೋಗ್ಯದ ನಿಮಿತ್ತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶುಕ್ರವಾರ ತಡರಾತ್ರಿ ತಮ್ಮ ಇನೋವಾ ಕಾರಿನಲ್ಲಿ ಮಡಿಕೇರಿಗೆ ತೆರಳುತ್ತಿದ್ದ ವೇಳೆ ವಿಶ್ರಾಂತಿಗಾಗಿ ಐಶ್ವರ್ಯ ವಿದ್ಯಾಸಂಸ್ಥೆ ಬಳಿ ಕೆಲಹೊತ್ತು ಸರ್ವಿಸ್‌ ರಸ್ತೆಯಲ್ಲಿ ಕಾರುನಿಲ್ಲಿಸಿದ್ದ ವೇಳೆ ಏಕಾಏಕಿ ಬಂದ ಮೂರು ಮಂದಿ ದುಷ್ಕರ್ಮಿಗಳು ತಾವು ಪೊಲೀಸರಾಗಿದ್ದು ಮದ್ಯಪಾನ ಸೇವಿಸಿ ಕಾರು ಚಾಲನೆ ಮಾಡುತ್ತಿದ್ದು ತಮ್ಮನ್ನು ತಪಾಸಣೆ ಮಾಡಬೇಕೆಂದು ಬಲವಂತವಾಗಿ ಕಾರಿನ ಬಾಗಿಲನ್ನು ತೆಗೆಸಿದ್ದಾರೆ. ಕಾರಿನ ಬಾಗಿಲು ತೆಗೆಯುತ್ತಿದ್ದಂತೆ ಒಳ ಪ್ರವೇಶಿಸಿದ ದುಷ್ಕರ್ಮಿಗಳು ತಮ್ಮ ಬಳಿಯಿದ್ದ ಮಾರಕಾಸ್ತ್ರಗಳಿಂದ ಮುತ್ತಪ್ಪ ಅವರ ಕತ್ತಿನ ಬಳಿಯಿಟ್ಟು ಹಣ ಮತ್ತು ಚಿನ್ನಾಭರಣಗಳನ್ನು ನೀಡುವಂತೆ ಒತ್ತಾಯಿಸಿದ್ದಾರೆ. ಚಿ

ನ್ನಾಭರಣಗಳನ್ನು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಮುತ್ತಪ್ಪ ಅವರ ಬಲಗೈ ಮತ್ತು ಕತ್ತಿನ ಬಳಿ ಗಾಯಗೊಳಿಸಿದ್ದು ಇದರಿಂದ ಆತಂಕಗೊಂಡ ಮುತ್ತಪ್ಪ ಅವರ ಬಳಿಯಿದ್ದ 65 ಗ್ರಾಂ. ಚಿನ್ನದ ಸರವನ್ನು ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕಾಗಮಿಸಿದ ಹೆದ್ದಾರಿ ಗಸ್ತು ಪೊಲೀಸರು ಮುತ್ತಪ್ಪ ಅವರಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಆರೋಪಿಗಳ ವಿರುದ್ಧ ಮದ್ದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ವೃತ್ತ ನಿರೀಕ್ಷಕ ಸಂತೋಷ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೇ ಮುತ್ತಪ್ಪ ಅವರಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸಿ ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KJ-Goerge

Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್‌ ಖರೀದಿಗೆ ನಿರ್ಧಾರ: ಜಾರ್ಜ್‌

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.