H. D. Kumaraswamy: ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಔದಾರ್ಯತೆ ತೋರಲಿ

Team Udayavani, Oct 20, 2024, 8:45 PM IST

ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಔದಾರ್ಯತೆ ತೋರಲಿ: ಎಚ್‌ಡಿಕೆ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಬಿಜೆಪಿಯ ಒತ್ತಾಯದ ಮೇರೆಗೆ ಬಿಟ್ಟು ಕೊಟ್ಟು ನಮ್ಮ ಕುಟುಂಬದವರನ್ನೇ ಅಭ್ಯರ್ಥಿಯನ್ನಾಗಿ ಮಾಡಲಾಗಿತ್ತು. ಅದರಂತೆ ಈಗ 3 ಕ್ಷೇತ್ರಗಳ ಪೈಕಿ 2 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ. ಈಗ ಚನ್ನಪಟ್ಟಣ ಕ್ಷೇತ್ರವನ್ನು ನಮಗೆ ಬಿಟ್ಟುಕೊಡುವ ಔದಾರ್ಯತೆ ಅವರ ಕಡೆಯಿಂದಲೂ ಬರಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಪಾಂಡವಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಟಿಕೆಟ್‌ ವಿಚಾರದಲ್ಲಿ ಗೊಂದಲ ಇಲ್ಲ. ದಿಲ್ಲಿ ಮಟ್ಟದಲ್ಲಿಯೇ ಚನ್ನಪಟ್ಟಣ ಜೆಡಿಎಸ್‌ ಕ್ಷೇತ್ರ ಎಂದಾಗಿದೆ. ನ್ಯಾಯವಾಗಿ ಚರ್ಚೆ ಮಾಡುವುದಾದರೆ ಕ್ಷೇತ್ರ ಜೆಡಿಎಸ್‌ಗೆà ಬರಬೇಕು ಎಂದರು.

ಎರಡು ಬಾರಿ ಕ್ಷೇತ್ರ ಪ್ರತಿನಿ ಧಿಸಿದ್ದೇನೆ. ಇಲ್ಲಿ ಜೆಡಿಎಸ್‌ ಕಾರ್ಯಕರ್ತರ ಪಡೆಯೇ ಇದೆ. ಇದೀಗ ಸಿ.ಪಿ.ಯೋಗೇಶ್ವರ್‌ ಅವರು ಸ್ಪರ್ಧಿಸಬೇಕೆನ್ನುತ್ತಿದ್ದಾರೆ. ಚನ್ನಪಟ್ಟಣಕ್ಕೆ ನಮ್ಮ ಪಕ್ಷದ ಅಭ್ಯರ್ಥಿಯನ್ನೇ ಘೋಷಣೆ ಮಾಡುತ್ತೇವೆ ಎನ್ನುವ ಮೂಲಕ ಸಿ.ಪಿ.ಯೋಗೇಶ್ವರ್‌, ಜೆಡಿಎಸ್‌ನಿಂದಲೇ ಸ್ಪ ರ್ಧಿಸಲಿ ಎಂಬುದನ್ನು ಪರೋಕ್ಷವಾಗಿ ಹೇಳಿದರು.

ಯೋಗೇಶ್ವರ್‌ ನಾಮಪತ್ರ ಸಲ್ಲಿಸುವ ವಿಚಾರ ನನಗೆ ಗೊತ್ತಿಲ್ಲ. ನನ್ನೊಂದಿಗೆ ಯಾವುದೇ ಚರ್ಚೆಯಾಗಿಲ್ಲ. ಕಾಂಗ್ರೆಸ್‌ ನಾಯಕರನ್ನು ಭೇಟಿ ಮಾಡಿದ್ದಾರೆ, ಪಕ್ಷೇತರ ಅಭ್ಯರ್ಥಿಯಾಗುತ್ತಾರೆ ಎಂದು ಮಾಧ್ಯಮಗಳಲ್ಲಿಯ ವರದಿ ನೋಡಿದ್ದೇನೆ. ಕಾಂಗ್ರೆಸ್‌ನವರು ತಮ್ಮ ಪಕ್ಷಕ್ಕೆ ಕರೆದೊಯ್ದು ಅಭ್ಯರ್ಥಿಯನ್ನಾಗಿ ಮಾಡಲು ಮುಂದಾಗಿದ್ದಾರೆ. ನಮ್ಮಲ್ಲಿ ಒಡಕು ಮೂಡಲಿ ಎಂದು ಕಾಯುತ್ತಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reee

Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

1-knna

Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.