ಸಿಎಂ ನಾಟಿಗೆ ಸಿಂಗಾರಗೊಂಡಿದೆ ಸೀತಾಪುರ

Team Udayavani, Aug 11, 2018, 6:15 AM IST

ban110818.jpg

ಪಾಂಡವಪುರ: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಅವರು ಭತ್ತ ನಾಟಿ ಕಾರ್ಯಕ್ಕೆ ಚಾಲನೆ ನೀಡುತ್ತಿದ್ದು,ಇದಕ್ಕಾಗಿ ತಾಲೂಕಿನ ಸೀತಾಪುರ ಗ್ರಾಮ ನವವಧುವಿನಂತೆ ಸಿಂಗಾರಗೊಳ್ಳುತ್ತಿದೆ.

ಗ್ರಾಮದಲ್ಲಿ ಮಹದೇವಮ್ಮನವರಿಗೆ ಸೇರಿದ ಜಮೀನಿನಲ್ಲಿ ಕುಮಾರಸ್ವಾಮಿ ಭತ್ತ ನಾಟಿ ಮಾಡಲಿದ್ದಾರೆ. ಇವರಿಗೆ 130 ಮಂದಿ ಕೂಲಿ ಕಾರ್ಮಿಕರು ನಾಟಿ ಕಾರ್ಯದಲ್ಲಿ ಸಾಥ್‌ ನೀಡುವರು.

ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ತಾಲೂಕು ಅಧಿಕಾರಿಗಳೆಲ್ಲರೂ ಸೀತಾಪುರದಲ್ಲಿ ಮೊಕ್ಕಾಂ ಹೂಡಿಪೂರ್ವ ಸಿದ್ಧತೆ ಪೂರೈಸುವುದರೊಂದಿಗೆ ನಾಟಿಗೆ ಸಜ್ಜುಗೊಳಿಸಿದ್ದಾರೆ. ನಾಟಿ ಕಾರ್ಯದಲ್ಲಿ 100 ಮಂದಿ ಮಹಿಳೆಯರು,50 ಮಂದಿ ಪುರುಷರು ಮುಖ್ಯಮಂತ್ರಿ ಜೊತೆ ಪಾಲ್ಗೊಳ್ಳುವರು. ಅಲ್ಲದೇ, 25 ಜೋಡಿ ಎತ್ತುಗಳು ಭಾಗವಹಿಸಲಿವೆ.

ಈಗಾಗಲೇ ನಾಟಿ ಮಾಡುವ ಗದ್ದೆಯನ್ನು ಕೆಸರು ಮಣ್ಣು ಮಾಡಿ ನೀರು ನಿಲ್ಲಿಸಲಾಗಿದೆ. ವ್ಯವಸ್ಥಿತವಾಗಿ ಬದುಗಳನ್ನು ನಿರ್ಮಿಸಿ ಭತ್ತದ ಸಸಿ ಮಡಿಗಳನ್ನೂ ಸಿದಟಛಿಪಡಿಸಿಟ್ಟುಕೊಂಡಿದೆ. ಭತ್ತ ನಾಟಿ ಸ್ಥಳ ಸಕಲ ರೀತಿಯಲ್ಲೂ ಸಿದಟಛಿಗೊಂಡಿದ್ದು, ಆಕರ್ಷಣೆಯ ಕೇಂದ್ರ ಬಿಂದುವಾಗಿದೆ.

ಮಹದೇವಮ್ಮನವರಿಗೆ ಸೇರಿದ ಜಮೀನು: ಸೀತಾಪುರ ಗ್ರಾಮದಲ್ಲಿ ನಿವೃತ್ತ ಶಿಕ್ಷಕ ಕೆಂಚೇಗೌಡರ ಪತ್ನಿ ಮಹದೇವಮ್ಮ ಅವರಿಗೆ ಸೇರಿದ ನಾಲ್ಕು ಎಕರೆ ಪ್ರದೇಶದಲ್ಲಿ ಭತ್ತದ ನಾಟಿ ಕಾರ್ಯ ಮುಗಿದಿದೆ.

ಉಳಿದ ಒಂದು ಎಕರೆಯಲ್ಲಿ ಬಿತ್ತನೆಗೆ ಸಜ್ಜುಗೊಳಿಸಲಾಗಿತ್ತು. ಅಷ್ಟರಲ್ಲಿ ಜೆಡಿಎಸ್‌ ಮುಖಂಡರು-ಮಹದೇವಮ್ಮ ಪುತ್ರರಾದ ಯೋಗೇಂದ್ರ ಮತ್ತು ಲೋಕೇಶ್‌ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಭತ್ತ ನಾಟಿ ಕಾರ್ಯಕ್ರಮಕ್ಕೆ ನಿಮ್ಮ ಜಮೀನನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಅದಕ್ಕೆ ಅವಕಾಶ ಮಾಡಿಕೊಡುವಂತೆ ಕೋರಿದರು.ಅದಕ್ಕೆ ಸಂತೋಷದಿಂದ ಒಪ್ಪಿಕೊಂಡಿದ್ದಾಗಿ ಲೋಕೇಶ್‌ “ಉದಯವಾಣಿ’ಗೆ ತಿಳಿಸಿದರು.

ಮುಖ್ಯಮಂತ್ರಿ ನಾಟಿ ಮಾಡುವ ಸ್ಥಳದಲ್ಲಿ ಮೂರು ಮಂದಿ ನಿಲ್ಲುವಂತೆ ವೇದಿಕೆ ನಿರ್ಮಿಸಲಾಗುವುದು.ಅಲ್ಲಿಂದಲೇ ಸಿಎಂ ಭತ್ತ ನಾಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇವರೊಂದಿಗೆ ಪುರುಷ ಹಾಗೂ ಮಹಿಳಾ ಕೂಲಿ ಕಾರ್ಮಿಕರು ಸಾಥ್‌ ನೀಡಲಿದ್ದಾರೆ.

ಭರದ ಸಿದ್ಧತೆ: ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ಸೀತಾಪುರ ಗ್ರಾಮವನ್ನು ನವ ವಧುವಿನಂತೆ ಸಿಂಗರಿಸಲಾಗುತ್ತಿದೆ. ಸಿಎಂ ಆಗಮನದ ದಾರಿಯುದ್ದಕ್ಕೂ ಸ್ವತ್ಛತಾ ಕಾರ್ಯ ಕೈಗೊಳ್ಳಲಾಗಿದೆ.ರಸ್ತೆ ಬದಿಯಲ್ಲಿ ಬೆಳೆದಿದ್ದ ಗಿಡ-ಗಂಟಿ ತೆರವು ಮಾಡಿದ್ದು, ಕಲ್ಲು-ಗುಂಡಿಗಳಿಂದ ತುಂಬಿದ್ದ ರಸ್ತೆಗೆ ಮಣ್ಣು ಹಾಕಿ ಮಟ್ಟ ಮಾಡಿ ಅದರ ಮೇಲೆ
ಡಾಂಬರೀಕರಣ ಮಾಡಲಾಗಿದೆ. ಸಿಡಿಎಸ್‌ ನಾಲೆಯ ಮೇಲ್ಭಾಗದಲ್ಲಿ ಬೆಳೆದು ನಿಂತಿದ್ದ ಗಿಡಗಳೆಲ್ಲವನ್ನು ಕಿತ್ತುಹಾಕಿ ಸ್ವತ್ಛಗೊಳಿಸಲಾಗಿದೆ.

ಸಿಎಂ ಕುಮಾರಸ್ವಾಮಿ ಆಗಮಿಸುವ ಸೀತಾಪುರ ಗ್ರಾಮದ ಹಾದಿಯುದ್ದಕ್ಕೂ ತಳಿರು-ತೋರಣಗಳನ್ನುಕಟ್ಟಲಾಗಿದೆ. ಗ್ರಾಮದ ಮುಖ್ಯ ರಸ್ತೆಯಿಂದ ಜಮೀನಿನವರೆಗೆ ಅಲಂಕೃತ ಹತ್ತು ಎತ್ತಿನ ಗಾಡಿಗಳಲ್ಲಿ ಕುಮಾರಸ್ವಾಮಿ ಅವರನ್ನು ಮೆರವಣಿಗೆ ಮೂಲಕ ಕರೆತರಲು ಸಿದ್ಧತೆ ನಡೆಸಲಾಗಿದೆ. ಮೊದಲ ಬಾರಿಗೆ ಮುಖ್ಯಮಂತ್ರಿಯೊಬ್ಬರು ಭತ್ತ ನಾಟಿ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿರುವುದು ಜನರ ಕುತೂಹಲ ಹೆಚ್ಚಿಸಿದೆ.

ಸಿಎಂ ಭತ್ತ ನಾಟಿ ಕಾರ್ಯಕ್ರಮ ನಡೆಯುತ್ತದೆ ಎಂದು ಗೊತ್ತಿತ್ತು. ಆದರೆ, ನಮ್ಮ ಜಮೀನನ್ನು ಆಯ್ಕೆ
ಮಾಡಿಕೊಳ್ಳುವರೆಂದು ಖಂಡಿತ ನಿರೀಕ್ಷಿಸಿರಲಿಲ್ಲ. ನಮ್ಮ ಜಮೀನಿನಲ್ಲಿ ಸಿಎಂ ನಾಟಿ ಮಾಡಲು ಬರುತ್ತಿರುವುದು ಖುಷಿ ತಂದಿದೆ.

– ಲೋಕೇಶ್‌, ಮಹದೇವಮ್ಮನ ಮಗ

– ಕುಮಾರಸ್ವಾಮಿ

ಟಾಪ್ ನ್ಯೂಸ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.