ಮುಂಬೈ ವಲಸಿಗರ ನಿರ್ಬಂಧಕ್ಕೆ ಸಿಎಂ ಆದೇಶ

Team Udayavani, May 24, 2020, 5:24 AM IST

mumb-vala

ಮಂಡ್ಯ: ಮುಂಬೈ ವಲಸಿಗರಿಂದ ಜಿಲ್ಲೆಯ ಕೆ.ಆರ್‌.ಪೇಟೆ ಹಾಗೂ  ನಾಗಮಂಗಲದಲ್ಲಿ ಕೊರೊನಾ ಸೋಂಕು ವಿಷಮ ಸ್ಥಿತಿ ತಲುಪುತ್ತಿರುವ ಹಿನ್ನೆಲೆಯಲ್ಲಿ ವಲಸಿಗರ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸುವಂತೆ ಮುಖ್ಯಮಂತ್ರಿ  ಯಡಿಯೂರಪ್ಪ ಜಿಲ್ಲಾಧಿಕಾರಿ ಡಾ.ವೆಂಕಟೇಶ್‌ ಅವರಿಗೆ ನಿರ್ದೇಶನ ನೀಡಿದ್ದಾರೆ. ಕೊರೊನಾ ಸಂಬಂಧ ಸಿಎಂ ಯಡಿಯೂರಪ್ಪ ಮಂಡ್ಯ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡಿ, ಮುಂದಿನ  ಆದೇಶದವರೆಗೆ ಮುಂಬೈನಿಂದ ಕರ್ನಾಟಕಕ್ಕೆ ಬರಬಾರದೆಂದು ಆದೇಶಿಸಿರುವುದಾಗಿ ತಿಳಿಸಿದರು.

ವಲಸಿಗರಿಂದಲೇ ಅಧಿಕ: ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮಗಳ ಕುರಿತು ಮುಖ್ಯಮಂತ್ರಿಗಳಿಗೆ ವಿವರಿಸಿದ ಜಿಲ್ಲಾಧಿಕಾರಿ ಡಾ.ವೆಂಕಟೇಶ್‌, ಪ್ರಸ್ತುತ ಮುಂಬೈನಿಂದ ವಲಸಿಗರಿಂದಲೇ ಸೋಂಕು  ಹೆಚ್ಚಳವಾಗಿದೆ. ಒಟ್ಟು ಪ್ರಕರಣಗಳಲ್ಲಿ 190ಕ್ಕೂ ಹೆಚ್ಚು ಪ್ರಕರಣಗಳು ಮುಂಬೈನಿಂದಲೇ ಬಂದಿವೆ ಎಂದು ತಿಳಿಸಿದರು.

ಸಿಎಂಗೆ ಮಾಹಿತಿ: ಕೋವಿಡ್‌-19 ಪರೀಕ್ಷೆಗೆ ಮಾಡಿಕೊಂಡಿರುವ ಲ್ಯಾಬ್‌ ವ್ಯವಸ್ಥೆ, ಸೋಂಕಿತರಿಗೆ ಚಿಕಿತ್ಸೆ ನೀಡಲು ಲಭ್ಯವಿರುವ ಬೆಡ್‌ ಗಳ ವ್ಯವಸ್ಥೆ, ಕೋವಿಡ್‌ ಸೆಂಟರ್‌, ಕೋವಿಡ್‌ ಕಮ್ಯೂನಿಟಿ ಹೆಲ್ತ್‌ ಸೆಂಟರ್‌ ಹಾಗೂ ಕ್ವಾರಂಟೈನ್‌  ಸೆಂಟರ್‌ಗಳ ಕುರಿತು ಮಾಹಿತಿ ನೀಡಿ ದರು. ಮುಂಬೈ ವಲಸಿಗರ ನಿರ್ಬಂಧಕ್ಕೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿರುವುದಕ್ಕೆ ಧನ್ಯವಾದಗಳನ್ನು ಅರ್ಪಿಸಿದ ಜಿಲ್ಲಾಧಿ ಕಾರಿಗಳು, ಇದರಿಂದ ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಿಸಲು ಅನುಕೂಲವಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕೊರೊನಾ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಣದಲ್ಲಿಡುವ ಸಲುವಾಗಿ ಪ್ರತಿ ಗ್ರಾಮಕ್ಕೂ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅವರ ಜೊತೆ ಆಶಾ ಕಾರ್ಯಕರ್ತರು  ಕೆಲಸ ಮಾಡುತ್ತಿದ್ದಾರೆ. ಜ್ವರ, ಕೆಮ್ಮು, ನೆಗಡಿ, ಗಂಟಲು ಕೆರೆತ, ಉಸಿರಾಟದ ತೊಂದರೆ ಸೇರಿದಂತೆ ಇನ್ನಿತರೆ ರೋಗಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಆಶಾಕಾರ್ಯ ಕರ್ತರಿಗೆ ಮಾಹಿತಿ ನೀಡುವಂತೆ ತಿಳಿಸಿರುವುದಾಗಿ ಹೇಳಿದರು.

ವಲಸಿಗರು ಸಹಕರಿಸಿ-ಜಿಲ್ಲಾಧಿಕಾರಿ: ರಾಜ್ಯದಲ್ಲಿ ಕೊರೊನಾ ಎರಡನೇ ಹಂತದಲ್ಲಿದೆ. ಸಮುದಾಯಕ್ಕೆ ಹರಡುವುದನ್ನು ತಡೆಯಲಾಗಿದೆ. ಸಮಾಜಕ್ಕೆ ಹರಡದಂತೆ ಎಚ್ಚರ ವಹಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಕ್ವಾರಂಟೈನ್‌ನಲ್ಲಿರುವಂತಹ ಸೌಲಭ್ಯಗಳಿಗೆ ವಲಸಿಗರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ  ಡಾ.ವೆಂಕಟೇಶ್‌ ಮನವಿ ಮಾಡಿದರು. ಪೌಷ್ಟಿಕ ಆಹಾರ, ಕುಡಿಯುವ ನೀರು, ಬಟ್ಟೆ, ಹಾಸಿಗೆಗಳೆಲ್ಲವನ್ನೂ ಕೊಡುತ್ತಿದ್ದೇವೆ.

ಆದರೂ ಅಲ್ಲಿನ  ಸಿಬ್ಬಂದಿಗೆ ಕಿರುಕುಳ ಕೊಡುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ವಿಡಿಯೋ ಮಾಡಿ ಕಿರುಕುಳ ನೀಡಿ ವ್ಯಾಟ್ಸಾಪ್‌, ಟಿಕ್‌ಟಾಕ್‌ ಮಾಡಿ ಕಳುಹಿಸುತ್ತಿದ್ದಾರೆ. ಅಧಿಕಾರಿಗಳು ತಮ್ಮ ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಅವರ  ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕರು, ಕ್ವಾರಂಟೈನ್‌ಗೆ ಬರುವಂತವವರು ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.