ಸಿಎಂ ಕಾರ್ಯಕ್ರಮ: ಸ್ಥಳ ಪರಿಶೀಲಿಸಿದ ಸಚಿವ
Team Udayavani, Dec 7, 2018, 4:47 PM IST
ಪಾಂಡವಪುರ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಾಲೂಕಿನ ಅರಳಕುಪ್ಪೆ-ಸೀತಾಪುರ ಬಯಲು ಪ್ರದೇಶಕ್ಕೆ ಶುಕ್ರವಾರ ಭತ್ತದ ಕೊಯ್ಲು ಮಾಡಲು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ಗುರುವಾರ ಗದ್ದೆಗೆ ಭೇಟಿ ನೀಡಿ ಪರಿಶೀಲಿಸಿದರು.
ಮಧ್ಯಾಹ್ನ 3.30ಕ್ಕೆ ಅರಳಕುಪ್ಪೆ-ಸೀತಾಪುರ ಹಳೇಗದ್ದೆ ಬಯಲಿನ ಭತ್ತದ ಗದ್ದೆಗೆ ಭೇಟಿಕೊಟ್ಟು ಸಿದ್ದತೆಗಳನ್ನು ಪರಿಶೀಲಿಸಿ ಪೊಲೀಸ್ ಹಾಗೂ ನೀರಾವರಿ ಅಧಿಕಾರಿಗಳೊಂದಿಗೆ ಭದ್ರತೆ ಕುರಿತು ಸಮಾಲೋಚನೆ ನಡೆಸಿದ ಸಚಿವರು, ಭತ್ತದ ಕೊಯ್ಲಿಗೆ ಚಾಲನೆ ನೀಡಿದ ಬಳಿಕ ಭತ್ತದ ಗದ್ದೆಯ ಪಕ್ಕದಲ್ಲಿಯೇ ನಿರ್ಮಿಸಿರುವ ಕಣದಲ್ಲಿ ಭತ್ತದ ರಾಶಿಗೆ ಪೂಜೆ ಸಲ್ಲಿಸಿದ ಬಳಿಕ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವರು. ಅಧಿಕಾರಿಗಳು, ಪೊಲೀಸರು ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದು ತಾಕೀತು ಮಾಡಿದರು.
ಮೇಲ್ಸೇತುವೆಗೆ ಗುದ್ದಲಿಪೂಜೆ: ಭತ್ತ ಕಟಾವು ಕಾರ್ಯಕ್ರಮದ ಬಳಿಕ ಮುಖ್ಯಮಂತ್ರಿ ಕುಮಾರಸ್ವಾಮಿ ಭಾಗದ ಜನರ ಬಹುದಿನದ ಬೇಡಿಕೆಯಾಗಿರುವ ಅರಳುಕುಪ್ಪೆ-ಸೀತಾಪುರ ಹಳೇ ಗದ್ದೆ ಬಯಲು ಪ್ರದೇಶದಿಂದ-ಮೈಸೂರಿಗೆ ಸಂಪರ್ಕ ಕಲ್ಪಿಸುವ 78 ಕೋಟಿ ರೂ. ವೆಚ್ಚದ ಕಾವೇರಿ ನದಿ ಮೇಲ್ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರೇವೇರಿಸುವರು. ಇದಾದ ಬಳಿಕ ವದೇಸಮುದ್ರ ಗ್ರಾಮಕ್ಕೆ ತೆರಳುವ ಕುಮಾರಸ್ವಾಮಿ, ಕನಗನಮರಡಿ ಬಳಿ ಬಸ್
ದುರಂತದಲ್ಲಿ ಮೃತಪಟ್ಟ 30 ಮಂದಿಗೂ ಪರಿಹಾರ ವಿತರಣೆ ಮಾಡಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಅಶೋಕ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹದೇವು, ಸದಸ್ಯ ವಿಶ್ವನಾಥ್, ಟಿಎಂಪಿಸಿಎಂಎಸ್ ಮಾಜಿ ಅಧ್ಯಕ್ಷ ರಾಮಕೃಷ್ಣೇಗೌಡ, ಹೊನಗಾನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಶಿಂಡಬೋಗನಹಳ್ಳಿ ನಾಗಣ್ಣ ಸೇರಿದಂತೆ ಹಲವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.