ಬಾಲಕಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಸಿಎಂ
ಹುಟ್ಟಿನಿಂದಲೇ ಬಲಗೈ ಸ್ವಾಧೀನದಿಂದ ಬಳಲುತ್ತಿದ್ದ ಮಗು • ಬೆಂಗಳೂರಿನಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ
Team Udayavani, Jun 17, 2019, 11:32 AM IST
ಕುಮಾರಸ್ವಾಮಿಯೇ ಆಸ್ಪತ್ರೆಗೆ ಬಂದು ಮಗು ವೀಕ್ಷಣೆ ಮಾಡಿರುವುದು.
ಶ್ರೀರಂಗಪಟ್ಟಣ: ಹುಟ್ಟಿನಿಂದಲೇ ಅಂಗವೈಕಲ್ಯದಿಂದ ಬಳಲುತಿದ್ದ ಐದು ವರ್ಷದ ಕಂದಮ್ಮನಿಗೆ ಆಸರೆಯಾದ ನಾಡ ದೊರೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ಭಾರೀ ಮುಖಭಂಗ ಅನುಭವಿಸಿದರೂ, ಚುನಾವಣೆ ಪ್ರಚಾರ ವೇಳೆ ಬಡ ದಂಪತಿಗಳಿಗೆ ಕೊಟ್ಟ ಮಾತಿನಂತೆ ಮಗುವಿನ ಶಸ್ತ್ರ ಚಿಕಿತ್ಸೆ ವೆಚ್ಚ ಭರಿಸಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾನವೀಯತೆ ಮೆರೆದಿದ್ದಾರೆ.
ಇತ್ತೀಚೆಗೆ ಲೋಕಸಭಾ ಚುನಾವಣೆ ವೇಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೆಆರ್‌ಎಸ್‌ನಲ್ಲಿ ವಾಸ್ತವ್ಯ ಹೂಡಿ ಬೆಂಗಳೂರಿಗೆ ಪ್ರಯಾಣ ಬೆಳಸುವ ವೇಳೆ ತಾಲೂಕಿನ ಹೊಸ ಆನಂದೂರು ಗ್ರಾಮದ ಬಡ ಕುಟುಂಬದ ಲಕ್ಷ್ಮೀ ಹಾಗೂ ಕುಮಾರ್ ದಂಪತಿ ಕುಮಾರಸ್ವಾಮಿ ಅವರ ಬರುವಿಕೆಗಾಗಿ ಕಾದು ನಿಂತಿದ್ದರು. ಬಲಗೈ ಸ್ವಾಧೀನ ಕಳೆದುಕೊಂಡಿರುವ ತಮ್ಮ ಮಗಳು ರಿಯಾಂಜಲಿ ಶಸ್ತ್ರ ಚಿಕಿತ್ಸೆ ನಡೆಸಲು ನೆರವಾಗುವಂತೆ ಮನವಿ ಮಾಡಿದ್ದರು. ಆ ಕುಟುಂಬದ ಸಂಕಷ್ಟಕ್ಕೆ ಮರುಗಿದ ಕುಮಾರಸ್ವಾಮಿ ಚುನಾವಣೆ ಮುಗಿದ ಬಳಿಕ ನಿಮಗೆ ಸಹಾಯ ಮಾಡುತ್ತೇನೆ ಬೆಂಗಳೂರಿಗೆ ಬಂದು ನನ್ನನ್ನು ಭೇಟಿ ಮಾಡಿ ಎಂದು ಭರವಸೆ ನೀಡಿ ಹೋಗಿದ್ದರು.
ಮುಖ್ಯಮಂತ್ರಿಗಳಿಂದ ಭರವಸೆ ಸಿಕ್ಕ ನಂತರ ಸಂತೋಷದಿಂದ ಎಲ್ಲಾ ಸಿದ್ಧತೆಯೊಂದಿಗೆ ದಂಪತಿ ಬೆಂಗಳೂರಿಗೆ ಪ್ರಯಾಣ ಬೆಳಸಿದರು. ಮುಖ್ಯಮಂತ್ರಿ ಅವರ ಜೆ.ಪಿ.ನಗರದ ನಿವಾಸ ತಲುಪಿದರು. ಇವರನ್ನು ನೋಡಿ ಕೂಡಲೇ ಅಲ್ಲಿರುವ ಸಿಬ್ಬಂದಿ ಒಳಗೆ ಕರೆದುಕೊಂಡು ಹೊಗಿ ಟೀ ಹಾಗೂ ತಿಂಡಿ ನೀಡಿ ಸಿಎಂ ಕುಮಾರಸ್ವಾಮಿ ಅವರಿಗೆ ವಿಷಯ ತಿಳಿಸಿದರು.
ಆಸ್ಪತ್ರೆ ಸೇರಿಸಿದರು: ಆತ್ಮೀಯತೆಯಿಂದ ಬರಮಾಡಿಕೊಂಡ ಕುಮಾರಸ್ವಾಮಿ ಅವರು ಮಗುವನ್ನು ಸಂಜಯ್ ತುರ್ತು ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ ವೈದ್ಯ ಡಾ.ಚಂದ್ರಶೇಖರ್ ಅವರಿಗೆ ಕರೆ ಮಾಡಿ, ನಾನು ಒಂದು ಮಗು ಕಳುಹಿಸಿಕೊಟ್ಟಿದ್ದೇನೆ. ಚಿಕಿತ್ಸೆ ನೀಡಿ ಮಗುವನ್ನು ಗುಣಪಡಿಸಲು, ಹಣ ಎಷ್ಟೇ ಆದರೂ ಅದನ್ನು ನಾನು ಕೊಡುತ್ತೇನೆ ಎಂದು ಸೂಚನೆ ನೀಡಿದರು. ನಂತರ ಆಸ್ಪತ್ರೆಗೆ ಮುಖ್ಯಮಂತ್ರಿಗಳ ಕಾರಿನಲ್ಲೇ ದಂಪತಿಯನ್ನು ಕಳುಹಿಸಿದರಲ್ಲದೆ, ದಂಪತಿಗೆ ಐದು ಸಾವಿರ ರೂ. ನಗದು ನೀಡಿದ್ದರು.
ಯಶಸ್ವಿ ಶಸ್ತ್ರಚಿಕಿತ್ಸೆ: ಆಸ್ಪತ್ರೆಗೆ ಹೋಗುತಿದ್ದಂತೆಯೇ ಎಲ್ಲಾ ರೀತಿಯ ಪರೀಕ್ಷೆಗಳನ್ನು ಮಾಡಿ ಆಪರೇಷನ್‌ಗೆ ಒಂದು ದಿನಾಂಕ ನಿಗದಿಪಡಿಸಿದರು. ನಂತರ ಚುನಾವಣೆ ಮುಗಿದ ಮೇಲೆ ಮೇ 18 ರಂದು ವೈದ್ಯರ ತಂಡ ರಿಯಾಂಜಲಿ ಅವರಿಗೆ ಆಪರೇಷನ್ ಮಾಡಿತು. ನಾಲ್ಕು ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದು ಯಾವುದೇ ವೆಚ್ಚವಿಲ್ಲದೆ ಅಲ್ಲಿಂದ ಕಳುಹಿಸಿಕೊಟ್ಟಿದ್ದಾರೆ.
ಮಗುವಿಗೆ ನಡೆಸಲಾದ ಆಪರೇಷನ್ ಯಶಸ್ವಿಯಾಗಿದ್ದು, ಸಂಪೂರ್ಣವಾಗಿ ಗುಣಮುಖವಾಗಲು ಇನ್ನೂ ಒಂದು ಶಸ್ತ್ರಚಿಕಿತ್ಸೆ ಬಾಕಿ ಇದೆ. ಎರಡು ತಿಂಗಳ ನಂತರ ಬರಲು ವೈದ್ಯರು ತಿಳಿಸಿದ್ದಾರೆ ಎಂದು ರಿಯಾಂಜಲಿ ತಂದೆ ಕುಮಾರ್ ತಿಳಿಸಿದ್ದಾರೆ.
ಚುನಾವಣೆ ಮುಗಿಯುತ್ತಿದ್ದಂತೆ ನಮ್ಮನ್ನು ಬೆಂಗಳೂರಿಗೆ ಕರೆಸಿಕೊಂಡ ಕುಮಾರಣ್ಣ ತಮ್ಮ ಮನೆಯಲ್ಲಿಯೇ ನಮ್ಮನ್ನು ಉಪಚರಿಸಿ ನಮ್ಮ ಮಗಳು ರಿಯಾಂಜಲಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸುವ ಮೂಲಕ ತಾವು ನುಡಿದಂತೆ ನಡೆದುಕೊಂಡರು. ನಾಡಿನ ದೊರೆ ಕುಮಾರಣ್ಣ ನವರ ಮಾನವೀಯತೆಗೆ ನಮ್ಮ ಕುಟುಂಬ ಆಭಾರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
MUST WATCH
ಹೊಸ ಸೇರ್ಪಡೆ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.