2 ವರ್ಷ ಕಳೆದರೂ ಕಾಲೇಜು ಕಟ್ಟಡ ಅಪೂರ್ಣ
60 ಲಕ್ಷ ರೂ. ಗುತ್ತಿಗೆ ಪಡೆದಿರುವ ಭೂ ಸೇನಾ ನಿಗಮ • ಶಾಲಾ ಆವರಣದಲ್ಲೇ ಪಾಠ
Team Udayavani, Jul 13, 2019, 12:41 PM IST
ಭೂ ಸೇನಾ ನಿಗಮದ ನಿರ್ಲಕ್ಷತೆಯಿಂದ ಅಪೂರ್ಣಗೊಂಡಿರುವ ಮಳವಳ್ಳಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹೆಚ್ಚುವರಿ ಕೊಠಡಿ ಕಾಮಗಾರಿ.
ಮಳವಳ್ಳಿ: ಎರಡು ವರ್ಷದ ಹಿಂದೆ ಆರಂಭಗೊಂಡ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಇನ್ನೂ ಪೂರ್ಣಗೊಂಡಿಲ್ಲ. ಅಪೂರ್ಣಗೊಂಡಿರುವ ಶಾಲಾ ಕೊಠಡಿಗಳೊಳಗೆ ವಿದ್ಯಾರ್ಥಿನಿಯರು ಪಾಠ ಕಲಿಯಲಾಗದೆ ಪರದಾಡುವ ಸ್ಥಿತಿ ಸೃಷ್ಟಿಯಾಗಿದೆ.
ಕಾಲೇಜಿಗೆ ಸೂಕ್ತ ಕಾಂಪೌಂಡ್ ವ್ಯವಸ್ಥೆ ಇಲ್ಲದೆ ಅನೈತಿಕ ಚಟುವಟಿಕೆಯ ತಾಣವಾಗಿ ಪರಿವರ್ತನೆಯಾಗುತ್ತಿರುವುದು ಅವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ರಾಜ್ಯಸರ್ಕಾರ ಶಿಕ್ಷಣಕ್ಕೆ ಕ್ಷೇತ್ರಕ್ಕೆ ಕೋಟಿಗಟ್ಟಲೆ ಅನುದಾನ ನೀಡಿದರೂ ಪ್ರಯೋಜವಾಗುತ್ತಿಲ್ಲ ಎನ್ನುವುದಕ್ಕೆ ಪಟ್ಟಣದ ಸರ್ಕಾರಿ ಬಾಲಕಿಯರ ಕಾಲೇಜು ತಾಜಾ ಉದಾಹರಣೆ.
ಪಟ್ಟಣದ ಹೃದಯಭಾಗದಲ್ಲಿರುವ ಕಾಲೇಜಿನ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಸುಮಾರು 60 ಲಕ್ಷ ರೂ.ಗೂ ಹೆಚ್ಚಿನ ಕಾಮಗಾರಿಯನ್ನು ಭೂ ಸೇನಾ ನಿಗಮ ಗುತ್ತಿಗೆ ಪಡೆದಿದೆ. ಅಧಿಕಾರಿಗಳ ನಿರ್ಲಕ್ಷದಿಂದ ಕಾಮಗಾರಿ ಕುಂಟುತ್ತಾ ತೆವಳುತ್ತಾ ಸಾಗಿದೆ. ಇದರ ಪರಿಣಾಮ ವಿದ್ಯಾರ್ಥಿನಿಯರು ಕೊಠಡಿ ಕೊರತೆಯಿಂದ ಕಾಲೇಜಿನ ವರಾಂಡದಲ್ಲಿ ಶಿಕ್ಷಣ ಪಡೆಯುವಂತಾಗಿದೆ.
600ಕ್ಕೂ ಹೆಚ್ಚು ಮಕ್ಕಳು ಕಲಿಕೆ:ಈ ಕಾಲೇಜು ಪಕ್ಕದಲ್ಲೇ ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಇದ್ದು, ಸುಮಾರು 600ಕ್ಕೆ ಹೆಚ್ಚು ಹೆಣ್ಣು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಇದಲ್ಲದೆ ಒಂದು ಗುರುಭವನವೂ ಇದೆ. ಶಾಲಾ-ಕಾಲೇಜು ಸೂಕ್ತ ಕಾಂಪೌಂಡ್ ವ್ಯವಸ್ಥೆ ಇಲ್ಲ. ಗೂಡ್ಸ್‌ಅಟೋ, ರಸ್ತೆ ಬದಿ ವ್ಯಾಪಾರಿಗಳು ಮಾರಾಟ ಮಾಡುವ, ಪುಂಡ-ಪೋಕರಿಗಳ ಅನೈತಿಕ ತಾಣವಾಗಿ ರೂಪಾಂತರಗೊಳ್ಳುತ್ತಿದೆ.
ಹೆಣ್ಣು ಮಕ್ಕಳು ನಿರ್ಭಯವಾಗಿ ಆಟವಾಡಲು ತೊಂದರೆಯಾಗಿದ್ದು, ಸದಾ ಜನರು ಸಂಚರಿಸುತ್ತಿರುತ್ತಾರೆ. ಅಲ್ಲದೆ ಗುರುಭವನವನ್ನು ವಾಣಿಜ್ಯ ಉದ್ದೇಶಕ್ಕೆ ಬಾಡಿಗೆ ನೀಡಿರುವುದರಿಂದ ಅಲ್ಲಿ ಹಾಕಲಾಗುವ ವಸ್ತುಗಳ ಪ್ರದರ್ಶನಕ್ಕೆ ಜನರು ಬರುವುದರಿಂದ ಇಲ್ಲಿ ಆಟವಾಡುವ ಹೆಣ್ಣು ಮಕ್ಕಳಿಗೆ ಸಮಸ್ಯೆಯಾಗಿದೆ. ನಿರಾತಂಕವಾಗಿ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ.
ಬಯಲು ಶೌಚಾಲಯ: ಸ್ಥಳೀಯವಾಗಿರುವ ಪುಂಡ ಪೋಕರಿಗಳು ಕಾಂಪೌಂಡ್ ಇಲ್ಲದ ಶಾಲಾ-ಕಾಲೇಜು ಜಾಗವನ್ನು ಬಯಲು ಶೌಚಾಲಯ ಮಾಡಿಕೊಂಡಿದ್ದಾರೆ. ಇದರಿಂದ ಅಲ್ಲಲ್ಲಿ ಗಬ್ಬು ವಾಸನೆ ಬರುತ್ತಿದ್ದು ಶಿಕ್ಷಕರು ಹಾಗೂ ವಿದ್ಯಾರ್ಥಿನಿಯರು ರೋಸಿ ಹೋಗಿದ್ದಾರೆ. ಶಾಲಾ-ಕಾಲೇಜಿನ ಶಿಕ್ಷಕ ವೃಂದ ಈ ಪ್ರದೇಶದ ಸುತ್ತ ಕಾಂಪೌಂಡ್ ಹಾಕಿ ಒಳಗೆ ಯಾರೂ ಒಳಗೆ ಬರದಂತೆ ಕ್ರಮ ವಹಿಸಲು ಕೋರಿ ಸಂಬಂಧಿಸಿದ ಅಧಿಕಾರಿ ಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸುತ್ತುಗೋಡೆ ಅವಶ್ಯ: ಈ ಪ್ರದೇಶದಲ್ಲಿ ಹೆಚ್ಚಾಗಿ ಹೆಣ್ಣು ಮ್ಕಕಳು ಶಿಕ್ಷಣ ಪಡೆಯು ತ್ತಿರುವುದರಿಂದ ಇವರ ಶಿಕ್ಷಣಕ್ಕೆ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ತೊಂದರೆ ಯಾಗ ದಂತೆ ತಾಲೂಕು ಆಡಳಿತ ಕ್ರಮವಹಿಸಿ ಶಾಲಾ ಪ್ರದೇಶದ ಸುತ್ತಲೂ ಸುತ್ತುಗೋಡೆ ಹಾಕಿಸಿದರೆ ಇವರಿಗೆ ಸೂಕ್ತ ಭದ್ರತೆ ನೀಡಿದಂತಾಗುತ್ತದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಿ ಹೆಣ್ಣು ಮಕ್ಕಳಿಗೆ ರಕ್ಷಣೆ ಒದಗಿಸಲು ಮುಂದಾಗುವರೋ ಎಂಬುದನ್ನು ಕಾದು ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.