ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ: ನಿಖೀಲ್ ಸ್ಪಷ್ಟನೆ
Team Udayavani, Mar 14, 2019, 8:37 AM IST
ಮದ್ದೂರು: ಮುಂದಿನ ಲೋಕಸಭಾ ಚುನಾವಣೆ ವೇಳೆ ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ನಿಖೀಲ್ ಕುಮಾರಸ್ವಾಮಿ ಘೋಷಿಸಿದರು.
ತಾಲೂಕಿನ ಗೊಲ್ಲರದೊಡ್ಡಿ ಇತಿಹಾಸ ಪ್ರಸಿದ್ಧ ಜುಂಜಪ್ಪ ದೇವಾಲಯದಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಮಾಜಿ ಶಾಸಕಿ ಕಲ್ಪನಾಸಿದ್ದರಾಜು ಹಾಗೂ ಸ್ಥಳೀಯ ಜೆಡಿಎಸ್ ಮುಖಂಡರೊಂದಿಗೆ ಬುಧವಾರ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಕ್ಷೇತ್ರ ಬದಲಾವಣೆ ಕೇವಲ ಊಹಾಪೋಹ.
ಮದ್ದೂರು ತಾಲೂಕಿನ ಪ್ರಸಿದ್ಧ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ಅಧಿಕೃತವಾಗಿ ಪ್ರಚಾರ ಆರಂಭಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಪ್ರಮುಖ ನಾಯಕರು, ಚುನಾಯಿತ ಸದಸ್ಯರು, ಪಕ್ಷದ ಮುಖಂಡರೊಂದಿಗೆ ಬಿರುಸಿನ ಪ್ರಚಾರ ಕೈಗೊಳ್ಳುವುದಾಗಿ ಹೇಳಿದರು.
ಕಾರ್ಯಕರ್ತರೇ ಸೈನಿಕರು: ಯಾವ ಚಲನಚಿತ್ರ ನಟರನ್ನೂ ಚುನಾವಣಾ ಪ್ರಚಾರಕ್ಕೆ ಕರೆಯುವುದಿಲ್ಲ. ಚುನಾವಣೆಗಾಗಿ ನಟರ ದುರುಪಯೋಗ ಸರಿಯಾದ ಕ್ರಮವಲ್ಲ. ನನಗೆ ನನ್ನ ಪಕ್ಷದ ಕಾರ್ಯಕರ್ತರೇ ಸೈನಿಕರು. ದೇವೇಗೌಡರ ಕುಟುಂಬ ದೇವರ ಸನ್ನಿಧಿಯಿಂದಲೇ ಎಲ್ಲಾ ಶುಭ ಕಾರ್ಯಗಳನ್ನೂ ಆರಂಭಿಸುವುದು. ನಾನೂ ಇಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಕೈಗೊಂಡಿದ್ದೇನೆ ಎಂದು ಹೇಳಿದರು.
ಮಂಡ್ಯ ಜಿಲ್ಲೆಯ ಏಳೂ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಜೆಡಿಎಸ್ ಶಾಸಕರು ಪ್ರಚಂಡ ಗೆಲುವು ಸಾಧಿಸಿದ್ದಾರೆ. ಇದು ಜೆಡಿಎಸ್ ಭದ್ರಕೋಟೆ. ಕಾರ್ಯಕರ್ತರು, ಮುಖಂಡರು, ಜನಪ್ರತಿನಿಧಿಗಳ ಶ್ರಮದಿಂದ ಗೆದ್ದು ಬರುವ ವಿಶ್ವಾಸವಿದೆ ಎಂದರು.
ಉತ್ತಮ ಸ್ನೇಹಿತರು: ನಟ ಅಭಿಷೇಕ್‌ಅಂಬರೀಶ್ ಹಾಗೂ ತಾವು ಒಳ್ಳೆಯ ಸ್ನೇಹಿತರು. ರಾಜಕೀಯ ಕಾರಣಗಳಿಗಾಗಿ ಸ್ನೇಹಬಂಧ ಹಾಳು ಮಾಡಿಕೊಳ್ಳುವ ಅಗತ್ಯವಿಲ್ಲ. ಚುನಾವಣೆ ಬೇರೆ, ಸ್ನೇಹ ಬೇರೆ, ನಮ್ಮಿಬ್ಬರ ಸ್ನೇಹ ಸಂಬಂಧ ಎಂದಿನಂತೆ ಮುಂದುವರಿಯಲಿದೆ. ಪ್ರಸಕ್ತ ಎದುರಾಗಿರುವ ಚುನಾವಣೆಯಲ್ಲಿ ಅಭಿಷೇಕ್ ಮತ್ತು ತಾವು ಬ್ಯುಸಿಯಿದ್ದೇವೆ. ಚುನಾವಣೆ ಬಳಿಕವೂ ನಾವಿಬ್ಬರೂ ಎಂದಿನಂತೆ ಮಾತನಾಡುತ್ತೇವೆಂದು ತಿಳಿಸಿದರು.
ಇಂದು ಅಭ್ಯರ್ಥಿ ಘೋಷಣೆ: ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಮಾತನಾಡಿ, ಗುರುವಾರ ಮಂಡ್ಯ ನಗರದಲ್ಲಿ ಪಕ್ಷದ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ. ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖೀಲ್‌ಕುಮಾರಸ್ವಾಮಿ ಅವರನ್ನು ಮಾಜಿ ಪ್ರಧಾನಿ ದೇವೇಗೌಡರೇ ಅಧಿಕೃತವಾಗಿ ಘೋಷಿಸಲಿ ದ್ದಾರೆ. ತಾಲೂಕಿನ ನಿಡಘಟ್ಟ ಗಡಿಭಾಗದಿಂದ ಮಂಡ್ಯದ ಕಾರ್ಯಕ್ರಮಕ್ಕೆ ಐದು ಸಾವಿರ ಬೈಕ್ ರ್ಯಾಲಿ ಮೂಲಕ ನಟ ನಿಖೀಲ್‌ಕುಮಾರಸ್ವಾಮಿ ಅವರನ್ನು ಮೆರವಣಿಗೆ ಮೂಲಕ ಜಿಲ್ಲಾ ಕೇಂದ್ರಕ್ಕೆ ಕರೆದೊಯ್ಯಲಾಗುವುದು ತಿಳಿಸಿದರು.
ಮಾಜಿ ಶಾಸಕಿ ಕಲ್ಪನಾಸಿದ್ದರಾಜು, ಸಂತೋಷ್, ಕೆಸ್ತೂರು ಜಿಪಂ ಸದಸ್ಯೆ ಸುಚಿತ್ರಾ, ರಮೇಶ್, ದಾಸೇಗೌಡ, ಬಿಳಿಯಪ್ಪ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.